ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ಐಆರ್
Team Udayavani, Dec 23, 2017, 11:34 AM IST
ಬೆಂಗಳೂರು: ಕೃಷಿ ಸಾಲದ ಹೆಸರಿನಲ್ಲಿ ರೈತರನ್ನು ವಂಚಿಸುತ್ತಿದ್ದ ಇಬ್ಬರು ಯುಕೋ ಬ್ಯಾಂಕ್ ಸಿಬ್ಬಂದಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಶಿವಮೊಗ್ಗದ ಕಾರ್ಪೋರೇಷನ್ ಬ್ಯಾಂಕ್ನ ಫೀಲ್ಡ್ ಅಧಿಕಾರಿ ಮಧುಸೂದನ್, ಹರಮಘಟ್ಟ ಗ್ರಾಮದ ಹರೀಶ್ ಹಾಗೂ ಇತರರೆ ಬ್ಯಾಂಕ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗದ ಕಾರ್ಪೋರೇಷನ್ ಬ್ಯಾಂಕ್ನಲ್ಲಿ ರೈತರ ಸಾಲದ ಹೆಸರಿನಲ್ಲಿ ಸುಮಾರು ನಾಲ್ಕು ಕೋಟಿ ರೂ. ವಂಚನೆ ನಡೆದಿತ್ತು. ಆರೋಪಿಗಳು 2014-16ನೇ ಸಾಲಿನಲ್ಲಿ 42 ಮಂದಿ ರೈತರಿಗೆ ಸಾಲ ಕೊಡಿಸುವುದಾಗಿ ನಂಬಿಸಿ, ರೈತರಿಂದ ದಾಖಲೆ ಪತ್ರಗಳನ್ನು ಪಡೆದುಕೊಂಡಿದ್ದರು. ಇದೇ ವೇಳೆ ಕೆಲ ಖಾಲಿ ಚೆಕ್ಗಳಿಗೂ ಸಹಿ ಮಾಡಿಸಿ ಕೊಂಡಿದ್ದರು.
ರೈತರ ಖಾತೆಗೆ ಸಾಲದ ಹಣ ಪಾವತಿಯಾಗುತ್ತಿದ್ದಂತೆ, ಸಹಿ ಮಾಡಿಸಿಕೊಂಡಿದ್ದ ಚೆಕ್ಗಳ ಮೂಲಕ ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ಇದು ರೈತರಿಗೆ ತಿಳಿಯುವ ಮೊದಲೇ ಆರೋಪಿಗಳು ಅಮಾಯಕ ರೈತರ ಖಾತೆಯಿಂದ 447.53 ಲಕ್ಷ ಹಣ ದೋಚಿದ್ದರು. ಈ ಸಂಬಂಧ ಹಣ ವರ್ಗಾವಣೆ ಕುರಿತು ರೈತರಿಂದ ಬಂದ ದೂರಿನ್ವಯ ಬೆಂಗಳೂರಿನ ಕಾರ್ಪೋರೇಷನ್ ಬ್ಯಾಂಕ್ನ ಹಿರಿಯ ಅಧಿಕಾರಿ ಸಿಬಿಐನಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಸಿಬಿಐ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Bengaluru: ಪಾನಮತ್ತ ವೈದ್ಯ, ನರ್ಸ್ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್ ?
Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ
MUST WATCH
ಹೊಸ ಸೇರ್ಪಡೆ
Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ
Karkala: ಸೆಲ್ಫಿ ಕಾರ್ನರ್ ಮಾಡಿದರೂ ತ್ಯಾಜ್ಯ ಎಸೆತ ನಿಂತಿಲ್ಲ!
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.