ವಿವಿಗಳಿಗೆ ಕುಲಪತಿಗಳ ನೇಮಿಸಲು ಆಗ್ರಹಿಸಿ ಪ್ರತಿಭಟನೆ
Team Udayavani, Dec 23, 2017, 1:44 PM IST
ದಾವಣಗೆರೆ: ರಾಜ್ಯದ ಪ್ರಮುಖ 8 ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿ ಹುದ್ದೆ, ಶಿಕ್ಷಣ ಇಲಾಖೆ ಆಯುಕ್ತರ ನೇಮಕಾತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು.
ಡಿಆರ್‌ಎಂ ವಿಜ್ಞಾನ ಕಾಲೇಜಿನಿಂದ ಮೆರವಣಿಗೆ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ಭವನ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತಕ್ಕೆ ಆಗಮಿಸಿ, ಆ ವೃತ್ತದಲ್ಲಿ ಘೋಷನೆ ಕೂಗಿದರು. ಅಲ್ಲಿಂದ ಮಹಾತ್ಮಗಾಂಧಿ ವೃತ್ತಕ್ಕೆ ತೆರಳಿ ಕೆಲ ಕಾಲ ರಸ್ತೆ ತಡೆ ನಡೆಸಿ, ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ರಾಜ್ಯದ 8 ಪ್ರಮುಖ ವಿವಿಗಳಲ್ಲಿ ಕುಲಪತಿಗಳೇ ಇಲ್ಲ. ಕುಲಪತಿ ನೇಮಕಕ್ಕೆ ಸರ್ಕಾರ ಗಮನ ನೀಡುತ್ತಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತಿರುವಂತಹವರನ್ನು ಮಂಗಳೂರು ವಿವಿ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಕಾಲೇಜುಗಳಲ್ಲಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಗಮನ ಹರಿಸುವ ಅತ್ಯಂತ ಜವಾಬ್ದಾರಿ, ಪ್ರಮುಖ ಆಯುಕ್ತರ ಹುದ್ದೆಯೇ ಖಾಲಿ ಇದೆ. ನಿರ್ದೇಶಕರು, ಜಂಟಿ ನಿದೇಶಕರು ಹಾಗೂ 413 ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಪ್ರಾಚಾರ್ಯರೇ ಇಲ್ಲ. ಶಿಕ್ಷಣದ ಸಬಲೀಕರಣ ಹಿನ್ನೆಲೆಯಲ್ಲಿ ಕೂಡಲೇ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಶಿಕ್ಷಣ ಕ್ಷೇತ್ರದಲ್ಲಿನ ಹಲವಾರು ಪ್ರಮುಖ ಹುದ್ದೆಗಳು ಖಾಲಿ ಇದ್ದರೂ ಭ್ರಷ್ಟಾಚಾರ, ಹಗರಣ ಇವೆ. ಇಡೀ ಶೈಕ್ಷಣಿಕ ಕ್ಷೇತ್ರವೇ ತಲೆತಗ್ಗಿಸುವಂತಹ ಅಂಕಪಟ್ಟಿ ಮತ್ತು ಲ್ಯಾಪ್ ಟಾಪ್ ಹಗರಣ ನಡೆದಿದೆ. ಸ್ವತಃ ಉನ್ನತ ಶಿಕ್ಷಣ ಸಚಿವರ ವಿರುದ್ಧವೇ ಅವ್ಯವಹಾರದ ಆರೋಪ ಕೇಳಿ ಬರುತ್ತಿದೆ. ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ನಗರ ಸಂಚಾಲಕ ವಿನಯ್, ರಾಮು, ಭಾರತಿ, ಶ್ರೀಹರ್ಷ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.