ಹೊನ್ನಾವರ: ಸರ್ಕಾರಿ ಬಸ್ ಪಲ್ಟಿ;2 ಸಾವು; ಹಲವರಿಗೆ ಗಾಯ
Team Udayavani, Dec 24, 2017, 3:29 PM IST
ಹೊನ್ನಾವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206 ರ ಯಲಗುಪ್ಪಾದಲ್ಲಿ ಭಾನುವಾರ ವಾಯವ್ಯ ಸಾರಿಗೆಗೆ ಸೇರಿದ ಸರ್ಕಾರಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು 9 ರ ಬಾಲಕ ಮತ್ತು 20 ವರ್ಷ ಪ್ರಾಯದ ವಿದ್ಯಾರ್ಥಿನಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಹುಬ್ಬಳ್ಳಿಯ ಪ್ರೀತಮ್ ಮತ್ತು ಮೈಸೂರು ಮೂಲದ ವಿದ್ಯಾರ್ಥಿನಿ ಸಂಗೀತ ಎಂದು ಗುರುತಿಸಲಾಗಿದೆ.
ಬಸ್ ಕಾರವಾರದಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು. 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತೀ ವೇಗವೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಹೊನ್ನಾವರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.