ನಾವು ಸಂವಿಧಾನ ಬದಲಿಸಲು ಬಂದಿದ್ದೇವೆ: ಅನಂತಕುಮಾರ ಹೆಗಡೆ
Team Udayavani, Dec 25, 2017, 6:20 AM IST
ಕೊಪ್ಪಳ: ಜಾತ್ಯತೀತವನ್ನು ಒಪ್ಪಿಕೊಳ್ಳಬೇಕು ಎಂದು ಸಂವಿಧಾನ ಹೇಳಿದೆ. ಆದರೆ ಕಾಲಕ್ಕೆ ತಕ್ಕಂತೆ ಸಂವಿಧಾನ ಬದಲಾಗಿದೆ. ಮುಂದೆಯೂ ಬದಲಾಗುತ್ತೆ. ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ. ಅದರಂತೆ ಸಂವಿಧಾನ ಬದಲಿಸುತ್ತೇವೆ ಎನ್ನುವ ಮೂಲಕ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಕುಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮದಲ್ಲಿ ಸಂವಿಧಾನದ ಬಗ್ಗೆ ಮಾತನಾಡಿದ ಅವರು, ಹಿಂದುತ್ವಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾನೊಬ್ಬ ಹಿಂದೂ, ನಾನೊಬ್ಬ ಕ್ರೈಸ್ತ, ನಾನೊಬ್ಬ ಮುಸ್ಲಿಂ, ನಾನೊಬ್ಬ ಲಿಂಗಾಯತ ಎಂದರೆ ನನ್ನದು ಯಾವುದೇ ತಕರಾರಿಲ್ಲ. ಆದರೆ ನಾನೊಬ್ಬ ಜಾತ್ಯತೀತ ಎಂದರೆ ನನಗೆ ಆಗಲ್ಲ. ದೇಶದಲ್ಲಿ ಪ್ರಸ್ತುತ ಜಾತ್ಯತೀತ ಸಂಪ್ರದಾಯ ಬಂದಿದೆ. ನಾವು ಜಾತ್ಯತೀತರು ಎನ್ನುವವರು ತಮ್ಮ ಅಪ್ಪ-ಅಮ್ಮನ ರಕ್ತದ ಪರಿಚಯ ಇಲ್ಲದಂತೆ ಕಾಣುತ್ತದೆ. ಅವರ ರಕ್ತದ ಬಗ್ಗೆ ನನಗೆ ಸ್ವಲ್ಪ ಸಂಶಯ ಬರುತ್ತಿದೆ. ಅವರಿಗೆ ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಪರಿಚಯವಿದ್ದಂತೆ ಕಾಣುತ್ತಿಲ್ಲ. ಆ ನನ್ನ ಮಕ್ಕಳಿಗೆ ಎನ್ನುವ ಪದ ಬಳಸುವ ಮೂಲಕ ಜಾತ್ಯತೀತರ ವಿರುದ್ಧ ಹರಿಹಾಯ್ದರು.
ದೇಶದ ಸಂವಿಧಾನವು ಜಾತ್ಯತೀತವನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದೆ. ಆದರೆ ಸ್ಮೃತಿಗಳು, ಶಾಸನಗಳು, ಸಂವಿಧಾನ ಕಾಲ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಪ್ರಸ್ತುತ ದೇಶದಲ್ಲಿ ಅಂಬೇಡ್ಕರ್ ಸ್ಮೃತಿಯಿದೆ. ಮುಂದೆ ಸಂವಿಧಾನ ಬದಲಾಗುತ್ತೆ. ನಾವು ಸಂವಿಧಾನ ಬದಲಿಸಲು ಬಂದಿದ್ದು. ಅದಕ್ಕೆ ಬದ್ಧರಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.