ಕಾಂಗ್ರೆಸ್‌ನಿಂದ ಬಿಜೆಪಿ ವಿರುದ್ಧ ಗೂಂಡಾಗಿರಿ: ಶೋಭಾ ಆರೋಪ
Team Udayavani, Dec 25, 2017, 6:30 AM IST
ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಗೂಂಡಾಗಿರಿ ಮತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೃತ್ಯಗಳು ಹೆಚ್ಚಾಗುತ್ತಿದ್ದು, ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಸಾಮರ್ಥ್ಯವಿಲ್ಲದೆ ಕಾಂಗ್ರೆಸ್ ಈ ಕೆಲಸ ಮಾಡುತ್ತಿದೆ ಎಂದು ಸಂಸದೆ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗೂಂಡಾ ಕಾಯ್ದೆಯಡಿ ಮೊಕದ್ದಮೆ ಎದುರಿಸುತ್ತಿರುವ ವ್ಯಕ್ತಿಗಳು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಹಲ್ಲೆ ನಡೆಸುತ್ತಿದ್ದಾರೆ. ಕೊಪ್ಪದಲ್ಲಿ ಶನಿವಾರ ಸಂಜೆ ಬಿಜೆಪಿ ಕಚೇರಿಗೆ ನುಗ್ಗಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಇದರಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರೂ ಶಾಮೀಲಾಗಿದ್ದಾರೆ ಎಂದು ದೂರಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಾಸಕ ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಆರೋಪಿಗಳನ್ನು ಬಂಧಿಸಿ ಕ್ರಮಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಅತ್ಯಾಚಾರಿಗಳ ಪುರುಷತ್ವ ಹರಣ ಮಾಡಿ: ಶೋಭಾ
ವಿಜಯಪುರ: “ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗಳಿಗೆ ಪುರುಷತ್ವ ಹರಣ ಮಾಡಬೇಕು ಹಾಗೂ ಗಲ್ಲಿಗೇರಿಸಬೇಕು’ ಎಂದು ಸಂಸದೆ ಶೋಭಾ ಕರದ್ಲಾಂಜೆ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಎಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಈ ಕೀಚಕರ ಪುರುಷತ್ವ ಹರಣ ಮಾಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರದಿಂದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಸಂತ್ರಸ್ತೆ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರ ನೌಕರಿ ಒದಗಿಸಬೇಕು ಎಂದು ಒತ್ತಾಯಿಸಿದ ಅವರು ಸಿಎಂ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಬಿಜೆಪಿ ಕಾರ್ಯಕರ್ತರ ಮಧ್ಯೆಮಾರಾಮಾರಿ
ಕೊಪ್ಪ: ವಾಟ್ಸ್ ಆ್ಯಪ್ ಸಂದೇಶವೊಂದು ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ಸೃಷ್ಟಿಸಿ ಪರಸ್ಪರರು ಹೊಡೆದಾಡಿ ಕಲ್ಲು ತೂರಾಟ ನಡೆಸಿದ ಘಟನೆ ಶನಿವಾರ ರಾತ್ರಿ ಕೊಪ್ಪದಲ್ಲಿ ನಡೆದಿದೆ.
ಘಟನೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ತಡೆಯಲು ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಘಟನೆಯಲ್ಲಿ ಬಿಜೆಪಿಯ ಇತಿಹಾಸ್, ರಾಕೇಶ್ ಹಾಗೂ ಕಾಂಗ್ರೆಸ್‌ನ ಚೇತನ್ ಗಾಯಗೊಂಡಿದ್ದು ಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ .
ಬಿಜೆಪಿ ಕಾರ್ಯಕರ್ತ ರಾಕೇಶ್ ವಾಟ್ಸ್ ಆ್ಯಪ್‌ನಲ್ಲಿ ರವಾನಿಸಿದ ಸಂದೇಶವೊಂದನ್ನು ತಪ್ಪಾಗಿ ಅರ್ಥೈಸಿಕೊಂಡ ಕಾಂಗ್ರೆಸ್ ಮುಖಂಡರು ಪಟ್ಟಣದ ಬಿಜೆಪಿ ಕಚೇರಿಗೆ ನುಗ್ಗಿ ರಾಕೇಶ್‌ನನ್ನು ಹೊರಗೆಳೆದು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್‌ನವರು ತನ್ನ ಕೊಲೆಗೆ ಯತ್ನಿಸಿದ್ದಾರೆಂದು ರಾಕೇಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.