ಕಾಂಗ್ರೆಸ್‌ “ಮಹಾ” ಖಳನಾಯಕ; ಜಾವಡೇಕರ್‌


Team Udayavani, Dec 26, 2017, 6:00 AM IST

kalasa.jpg

ಬೆಂಗಳೂರು: ಮಹದಾಯಿ, ಕಳಸಾ- ಬಂಡೂರಿ ಯೋಜನೆ ವಿಚಾರದಲ್ಲಿ ಕರ್ನಾಟಕದ ಪಾಲಿಗೆ ಕಾಂಗ್ರೆಸ್‌ ನಿಜವಾದ ದೋಷಿ ಮತ್ತು ಖಳನಾಯಕನಾಗಿದ್ದು, ಈಗ ಗೊಂದಲ ಸೃಷ್ಟಿಸಿ ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯ ಚುನಾವಣ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಮಹದಾಯಿ ನೀರು ತರಲು ಏನೂ ಕ್ರಮ ಕೈಗೊಳ್ಳಲಿಲ್ಲ. ಇದೀಗ ಬಿಜೆಪಿ ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿ ಕರ್ನಾಟಕಕ್ಕೆ ಮಹದಾಯಿ ನೀರು ಬಿಡಲು ಗೋವಾ ಮುಖ್ಯಮಂತ್ರಿಗಳನ್ನು ಒಪ್ಪಿಸಿದ ಬಳಿಕ ಕಾಂಗ್ರೆಸ್‌ ಆತಂಕಕ್ಕೊಳಗಾಗಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ಹೇಳಿದರು.

ನಗರದಲ್ಲಿ  ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಏನೇ ಆರೋಪಗಳನ್ನು ಮಾಡಲಿ, ಗೋವಾ ಮುಖ್ಯ ಮಂತ್ರಿ ಮನೋಹರ್‌ ಪಾರೀಕರ್‌ ಅವರ ಕ್ರಮವನ್ನು ರಾಜ್ಯದ ಜನ ಸ್ವಾಗತಿಸಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರೆ ಈ ಕೆಲಸ ವೇಗ ಪಡೆಯುತ್ತದೆ ಎಂದು ನಂಬಿದ್ದಾರೆ ಎಂದು ಹೇಳಿದರು.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಜತೆಗೆ ಜೆಡಿಎಸ್‌ ವಿರುದ್ಧವೂ ಕಿಡಿ ಕಾರಿದ ಜಾವಡೇಕರ್‌, ರಾಜ್ಯ ಮತ್ತು ಕೇಂದ್ರ ದಲ್ಲಿ ಕಾಂಗ್ರೆಸ್‌ ಸರಕಾರವಿದ್ದಾಗ ರಾಜ್ಯಕ್ಕೆ ಮಹದಾಯಿ ನೀರು ತರಲು ಏನೂ ಮಾಡಲಿಲ್ಲ.

ಎಚ್‌.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗಲೂ ಅವರಿಂದ ಆಗಲಿಲ್ಲ. ಆದರೆ, ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿ ಯಾಗಿದ್ದಾಗ 2001ರಲ್ಲಿ ಯೋಜನೆಗೆ ತಾತ್ವಿಕ ಅನು ಮೋದನೆ ನೀಡಿದರು. 2007ರಲ್ಲಿ ಯಡಿಯೂರಪ್ಪ ಉಪಮುಖ್ಯಮಂತ್ರಿ ಮತ್ತು ಕೆ.ಎಸ್‌.ಈಶ್ವರಪ್ಪ ಅವರು ಜಲ ಸಂಪನ್ಮೂಲ ಸಚಿವರಾಗಿದ್ದಾಗ ಕಾಲುವೆ ಕಾಮಗಾರಿಗೆ ಚಾಲನೆ ನೀಡಿದರು. ಆಗ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ಆ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ. ಈಗ ಬಿಜೆಪಿ ನೀರು ಬಿಡುಗಡೆಗೆ ವೇದಿಕೆ ಸಿದ್ಧಪಡಿಸಿದರೆ ಅದರ ಬಗ್ಗೆ ಟೀಕೆ ವ್ಯಕ್ತ ಪಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಇಬ್ಬಂದಿ ಧೋರಣೆ
ಮಹದಾಯಿ ವಿಚಾರದಲ್ಲಿ  ಕಾಂಗ್ರೆಸ್‌ ಇಬ್ಬಂದಿ ಧೋರಣೆ ಅನುಸರಿಸುತ್ತಿದೆ. ಇಲ್ಲಿ ನೀರು ಬೇಕು ಎಂದು ಹೇಳಿದರೆ ಗೋವಾದಲ್ಲಿ ಕರ್ನಾಟಕಕ್ಕೆ ನೀರು ಬಿಡಲು ವಿರೋಧ ವ್ಯಕ್ತಪಡಿಸುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರೇ 2012ರ ಗೋವಾ ಚುನಾವಣೆ ವೇಳೆ ಮಹದಾಯಿಯಿಂದ ಕರ್ನಾಟಕಕ್ಕೆ ಒಂದು ಹನಿ ನೀರನ್ನೂ ಬಿಡಲು ಸಾಧ್ಯವಿಲ್ಲ  ಎಂದು ಹೇಳಿದ್ದರು. ಆ ಮೂಲಕ ಅವರು ಕರ್ನಾಟಕ ಮತ್ತು ರೈತರಿಗೆ ವಂಚಿಸಿದರು. ಈಗ ಮಾನವೀಯತೆ ಆಧಾರದ ಮೇಲೆ ಗೋವಾ ಸಿಎಂ ನೀರು ಬಿಡುಗಡೆಗೆ ಸಿದ್ಧ ಎಂದರೆ ಟೀಕಿಸುತ್ತಿದ್ದಾರೆ. ಆದರೆ ಇದನ್ನು ನಂಬಲು ರಾಜ್ಯದ ಜನ ಮೂರ್ಖರಲ್ಲ ಎಂದರು.

ಪ್ರಶ್ನೆಗಳಿಗೆ ಉತ್ತರಿಸಲು ನಕಾರ
ಮಹದಾಯಿ ವಿವಾದ ಕುರಿತಂತೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಜಾವಡೇಕರ್‌, ನಾನು ಹೇಳಿಕೆ ನೀಡಲೆಂದು ಮಾಧ್ಯಮದವರನ್ನು ಆಹ್ವಾನಿಸಿದ್ದೇನೆ. ಹೇಳಿಕೆ ನೀಡಿದ್ದೇನೆ. ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಹೇಳಿ ಪತ್ರಿಕಾಗೋಷ್ಠಿ ಮುಗಿಸಿದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.