ಜಾತಿ, ಹಣದ ಅಭ್ಯರ್ಥಿಯಿಂದ ಅಭಿವೃದ್ಧಿ ಅಸಾಧ್ಯ


Team Udayavani, Dec 26, 2017, 1:35 PM IST

jaati-hana.jpg

ಬೆಂಗಳೂರು: ಜಾತಿ, ಹಣದ ಕಾರಣಕ್ಕೆ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಿಲ್ಲುವವರೆಗೆ ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ನಗರದ ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್‌. ಟಾಟಾ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉತ್ತಮ ಆಡಳಿತ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಆಡಳಿತದಲ್ಲಿ ಜನರ ಪಾಲ್ಗೊಳ್ಳುವಿಕೆಯೇ ಉತ್ತಮ ಆಡಳಿತ ಎಂದು ಅಭಿಪ್ರಾಯಪಟ್ಟರು.

ವಿಷ ಬೀಜ: ರಾಜಕಾರಣದ ಸಮೀಕರಣದಲ್ಲಿ ದುಡ್ಡು ಮತ್ತು ಜಾತಿ ಹೊರತಾಗಿ ಬೇರೆ ವಿಚಾರಗಳ ಬಗ್ಗೆ ಚರ್ಚೆಯಾಗುವುದಿಲ್ಲ. ಆತ ನಮ್ಮ ಜಾತಿಯವನು, ದುಡ್ಡು ಕೊಟ್ಟಿದ್ದಾನೆ, ಒಳ್ಳೆಯ ಭರವಸೆಗಳನ್ನು ನೀಡಿದ್ದಾನೆ ಎಂದು ಪ್ರಜೆಗಳು ಮತ ಹಾಕುತ್ತಾರೆ. ವಿಷ ಬಿತ್ತಿರುವ ಜನ ಅಮೃತ ಪಡೆಯಲು ಸಾಧ್ಯವೇ? ಅಯೋಗ್ಯರಿಗೆ ಕೊಟ್ಟ ಮತ ಯೋಗ್ಯ ಆಡಳಿತ ಕೊಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ವಾಜಪೇಯಿ ಮಾದರಿ: ಉತ್ತಮ ಆಡಳಿತ ಎಂದರೆ ಜನರ ಪಾಲ್ಗೊಳ್ಳುವಿಕೆ. ಪ್ರತಿನಿತ್ಯದ ಆಡಳಿತದಲ್ಲಿ ನಮ್ಮ ಹೊಣೆಗಾರಿಕೆ ಏನು ಎಂಬುದನ್ನು ಅರಿತು ಬದುಕಬೇಕು. ನೀವು ತೆರಿಗೆ ಕೊಟ್ಟಿರುತ್ತೀರಿ. ಅದನ್ನು ಸಂಗ್ರಹಿಸುವ ಸರ್ಕಾರ ವಾಪಸ್‌ ಜನರಿಗಾಗಿ ಖರ್ಚು ಮಾಡುತ್ತದೆ. ವರ್ಷಕ್ಕೊಮ್ಮೆ ಸರ್ಕಾರ ಈ ಬಗ್ಗೆ ಕೊಡುವ ಲೆಕ್ಕ ಜನರಿಗೆ ನಿಮಗೆ ತೃಪ್ತಿಯಾಗುತ್ತದೆ ಎಂದರೆ ಅದುವೇ ಪರಿಣಾಮಕಾರಿ ಆಡಳಿತ. ಆ ಪರಿಕಲ್ಪನೆ ಹುಟ್ಟುಹಾಕಿದ್ದು ಅಟಲ್‌ ಬಿಹಾರಿ ವಾಜಪೇಯಿ ಎಂದರು.

ಕಾಮಗಾರಿಗಳೇ ಅಭಿವೃದ್ಧಿಯಲ್ಲ: ಸೋಕಾಲ್ಡ್‌ ಬುದ್ಧಿಜೀವಿಗಳು, ಸೋ ಕಾಲ್ಡ್‌ ಡೆವಲಪ್‌ಮೆಂಚ್‌ ಅಡ್ವೋಕೇಟ್‌ಗಳು ಯೋಚನೆ ಮಾಡುವುದೇ ಕಾಮಗಾರಿಗಳನ್ನು ಆಧರಿಸಿ. ಆರ್ಥಿಕ, ಬೌದ್ಧಿಕ, ಸಾಂಸ್ಕೃತಿಕ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವುದಿಲ್ಲ. ಆದರೆ, ಆರ್ಥಿಕ, ಬೌದ್ಧಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿ, ಊಟ ಹಾಕುವುದನ್ನು ಬಿಟ್ಟು ಊಟಕ್ಕೆ ಬೇಕಾದ ಶಕ್ತಿಯನ್ನು ಒಬ್ಬ ವ್ಯಕ್ತಿಗೆ ನೀಡುವ ಪ್ರಧಾನಿ ಮೋದಿಯವರ ಕೆಲಸದಿಂದಾಗಿಯೇ ವಿಶ್ವ ಅವರನ್ನು ಗೌರವಿಸುತ್ತಿದೆ ಎಂದು ಹೇಳಿದರು.

ರಾಜಕೀಯವೆಂದರೆ ಬಚ್ಚಲುಮನೆ: ರಾಜಕೀಯ ಕ್ಷೇತ್ರವನ್ನು ಯಾರೂ ದೇವರ ಕೋಣೆ ಎನ್ನುವುದಿಲ್ಲ, ಬಚ್ಚಲುಮನೆ ಎನ್ನುತ್ತಾರೆ. ಪ್ರತಿನಿತ್ಯ ಎಲ್ಲರೂ ಬಂದು ಹೋಗುತ್ತಾರೆ. ಹೀಗಾಗಿ ಬೇಗ ಗಲೀಜಾಗುತ್ತದೆ. ದೇವರ ಮನೆಯನ್ನು ಒಂದು ದಿನ ಸ್ವತ್ಛಗೊಳಿಸದಿದ್ದರೆ ಏನೂ ಆಗುವುದಿಲ್ಲ. ಆದರೆ, ಬಚ್ಚಲುಮನೆಯನ್ನು ಸ್ವತ್ಛಗೊಳಿಸದಿದ್ದರೆ ಹೇಗೆ? ಹೀಗಾಗಿ ರಾಜಕೀಯ ಕ್ಷೇತ್ರವನ್ನೂ ಸ್ವತ್ಛಗೊಳಿಸುವ ನಿಟ್ಟಿನಲ್ಲಿ ಕೆಲಸವಾಗಬೇಕು. ಅದಕ್ಕೆ ಸಂಸ್ಕಾರ, ಸಂಸ್ಕೃತಿಬೇಕು ಎಂದು ಹೇಳಿದರು. ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.