ಉಕ್ಕಿನ ಸೇತುವೆ ಮಣ್ಣಿನ ಪರೀಕ್ಷೆ ಯಶಸ್ವಿ: ಕಾಮಗಾರಿಗೆ ಕ್ಷಣ ಗಣನೆ

Team Udayavani, Dec 26, 2017, 1:35 PM IST

ukkina-sethuve.jpg

ಬೆಂಗಳೂರು: ಶಿವಾನಂದ ವೃತ್ತದ ಬಳಿ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆಗಾಗಿ ನಡೆಸಿದ ಮಣ್ಣಿನ ಪರೀಕ್ಷೆ ಯಶಸ್ವಿಯಾಗಿದ್ದು, ಶೀಘ್ರದಲ್ಲಿಯೇ ಸೇತುವೆ ನಿರ್ಮಾಣ ಕಾಮಗಾರಿ ಚಾಲನೆ ನೀಡಲು ಬಿಬಿಎಂಪಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ರೇಸ್‌ಕೋರ್ಸ್‌ ರಸ್ತೆ, ಕುಮಾರಕೃಪಾ ರಸ್ತೆ ಹಾಗೂ ಶೇಷಾದ್ರಿಪುರ ಕಡೆಗೆ ಹೋಗುವ ವಾಹನಗಳ ಸಂಚಾರ ದಟ್ಟಣೆ ಸಮಸ್ಯೆ ನಿಯಂತ್ರಣಕ್ಕಾಗಿ ಶಿವಾನಂದ ವೃತ್ತದಲ್ಲಿ ಉಕ್ಕಿನ ಸೇತುವೆ ನಿರ್ಮಿಸಲು ಪಾಲಿಕೆ ಯೋಜನೆ ರೂಪಿಸಿದ್ದು, ಈಗಾಗಲೇ ರಾಜ್ಯ ಸಚಿವ ಸಂಪುಟದ ಅನುಮೋದನೆಯೂ ದೊರೆತಿದೆ.

ಸದೃಢ ಮಣ್ಣು: ಉಕ್ಕಿನ ಸೇತುವೆ ನಿರ್ಮಾಣವಾಗುವ ಸ್ಥಳದಲ್ಲಿ ಕಳೆದ ಮೂರು ತಿಂಗಳಿಂದ ನಡೆಸಲಾದ ಪರೀಕ್ಷೆಯಲ್ಲಿ ಮಣ್ಣು ಸದೃಢವಾಗಿರುವ ಅಂಶ ಕಂಡುಬಂದಿದ್ದು, ಸೇತುವೆ ನಿರ್ಮಾಣ ಕಾಮಗಾರಿ ಮುಂದುವರಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.

ಮರಗಳ ಸ್ಥಳಾಂತರ: ಈ ಮಧ್ಯೆ, ಯೋಜನೆಗಾಗಿ ಈ ಭಾಗದಲ್ಲಿ ಸುಮಾರು 26 ಮರಗಳು ತೆರವುಗೊಳಿಸಬೇಕಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದು, ಅದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಮರಗಳನ್ನು ನೂತನ ತಂತ್ರಜ್ಞಾನ ಬಳಸಿ ಬೇರೆಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಸೂಚಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಮೀಪದಿಂದ ಹರೇಕೃಷ್ಣ ರಸ್ತೆಯ ರೈಲ್ವೆ ಅಂಡರ್‌ ಪಾಸ್‌ ಸಮೀಪದವರೆಗೆ ಉಕ್ಕಿನ ಸೇತುವೆ ನಿರ್ಮಿಸಲು 2011ರಲ್ಲಿಯೇ ಪಾಲಿಕೆಯ ಅಧಿಕಾರಿಗಳು ಯೋಜನೆ ರೂಪಿಸಿದ್ದರು. ಆದರೆ, ತಾಂತ್ರಿಕ ಕಾರಣ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿನ ವಿಳಂಬದಿಂದ ಯೋಜನೆ ನೆನೆಗುದಿಗೆ ಬಿದ್ದಿತ್ತು.

ಈ ಮಧ್ಯೆ, ಸ್ಥಳೀಯರಿಂದ ಮರಗಳ ತೆರವಿಗೆ ವಿರೋಧವೂ ವ್ಯಕ್ತವಾಗಿತ್ತು. ಜತೆಗೆ ಪ್ರಕರಣ ನ್ಯಾಯಲಯದ ಮೆಟ್ಟಿಲು ಹತ್ತಿತ್ತು. ಹೀಗಾಗಿ, ಯೋಜನೆಗೆ ಸಂಪುಟದಲ್ಲಿ ಅನುಮೋದನೆ ಪಡೆದು ಮಣ್ಣಿನ ಪರೀಕ್ಷೆ ನಡೆಸಲಾಗಿತ್ತು.  ಇದೀಗ ಮಣ್ಣಿನ ಪರೀಕ್ಷೆ ಯಶಸ್ವಿಯಾಗಿದ್ದು, ಕಾಮಗಾರಿಗೆ ಚಾಲನೆ ನೀಡಲು ಪಾಲಿಕೆ ಮುಂದಾಗಿದೆ.

ಉಕ್ಕಿನ ಸೇತುವೆ ನಿರ್ಮಾಣ ಯೋಜನೆ ಅನುಷ್ಠಾನಕ್ಕಾಗಿ ನಡೆಸಲಾದ ಮಣ್ಣಿನ ಪರೀಕ್ಷೆ ಯಶಸ್ವಿಯಾಗಿದೆ. ಅದರಂತೆ ಶೀಘ್ರದಲ್ಲಿಯೇ ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗುವುದು. ಜತೆಗೆ ಈಗಾಗಲೇ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸಲು ಅಗತ್ಯ ಸಿದ್ಧತೆ ನಡೆಸಿಕೊಳ್ಳುವಂತೆ ಸೂಚಿಸಲಾಗಿದೆ. 
-ಕೆ.ಟಿ.ನಾಗರಾಜ್‌, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್‌

* ವೆಂ. ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.