ಮೂರು ಕಾರಣ ಹೇಳಿ ಸನ್ನಿ ನೈಟ್ಸ್‌ಗೆ ಅಧಿಕೃತ ತೆರೆ


Team Udayavani, Dec 26, 2017, 1:35 PM IST

sunny-leone.jpg

ಬೆಂಗಳೂರು: ದಿ ಟೈಮ್ಸ್‌ ಕ್ರಿಯೇಷನ್ಸ್‌ ಹೊಸ ವರ್ಷಾಚರಣೆಗಾಗಿ ಮಾನ್ಯತಾ ಟೆಕ್‌ಪಾರ್ಕ್‌ ಆವರಣದಲ್ಲಿ ಆಯೋಜನೆಗೆ ಮುಂದಾಗಿದ್ದ ಬಾಲಿವುಡ್‌ ಸನ್ನಿ ಲಿಯೋನ್‌ರ “ಸನ್ನಿ ನೈಟ್ಸ್‌’ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಕಡೆಗೂ ಪೊಲೀಸರು ನಿರಾಕರಿಸಿದ್ದಾರೆ.

ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಬರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಸೇರಿ ಮೂರು ಪ್ರಮುಖ ಕಾರಣಗಳನ್ನು ನೀಡಿ ನಗರ ಪೊಲೀಸ್‌ ಆಯುಕ್ತರು ಕಾರ್ಯಕ್ರಮಕ್ಕೆ ಅನುಮತಿ ಕೊಡಲಾಗದು ಎಂದು ಹೇಳಿದ್ದಾರೆ.

ಹೊಸ ವರ್ಷಾಚರಣೆಗಾಗಿ ನಗರದೆಲ್ಲೆಡೆ ಸೂಕ್ತ ಪೊಲೀಸ್‌ ಭದ್ರತೆ ಒದಗಿಸುವ ಜವಾಬ್ದಾರಿಯಿದ್ದು, ಸನ್ನಿ ನೈಟ್ಸ್‌ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜತೆಗೆ ಸಂಭ್ರಮಾಚರಣೆ ವೇಳೆ ಎಂ.ಜಿ.ರಸ್ತೆ. ಬ್ರಿಗೇಡ್‌ ರಸ್ತೆ ಸೇರಿದಂತೆ ನಗರಾದ್ಯಂತ ಒಟ್ಟು 10 ಸಾವಿರ ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಸನ್ನಿ ನೈಟ್ಸ್‌ ಕಾರ್ಯಕ್ರಮಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ಕೊಡಲು ಸಾಧ್ಯವಿಲ್ಲ. ಭದ್ರತೆ ಇಲ್ಲದೆ ಕಾರ್ಯಕ್ರಮ ನಡೆದರೆ ಕಾನೂನು -ಸುವ್ಯವಸ್ಥೆ ಪಾಲನೆ ಕಷ್ಟ. ಹೀಗಾಗಿ, ಅನುಮತಿ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಸನ್ನಿ ನೈಟ್ಸ್‌ ಕಾರ್ಯಕ್ರಮಕ್ಕಾಗಿ ಬರುವ ಕಲಾವಿದರ ವಾಸ್ತವ್ಯದ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿಲ್ಲ. ಅಲ್ಲದೆ, ಬೆಸ್ಕಾಂ, ಲೊಕೋಪಯೋಗಿ ಇಲಾಖೆ ಸೇರಿದಂತೆ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದಿಲ್ಲ.  ಕಾರ್ಯಕ್ರಮ ಕುರಿತು ರೂಪುರೇಷೆ ಸಿದ್ಧಪಡಿಸಿಕೊಂಡಿಲ್ಲ. ವಾಹನ ನಿಲ್ದಾಣಕ್ಕೆ ಸ್ಥಳ ಅಭಾವವಿರುವುದರಿಂದ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡಚಣೆಯಾಗಲಿದೆ.

ಕೇರಳದಲ್ಲಿ ಅಹಿತಕರ ಘಟನೆಗಳು: ನಟಿ ಸನ್ನಿ ಲಿಯೋನ್‌ರ ಇದೇ ಮಾದರಿಯ ಕಾರ್ಯಕ್ರಮ ಕೇರಳದಲ್ಲಿ ಆಯೋಜನೆಗೊಂಡಿದ್ದಾಗ ಅಲ್ಲಿ ಬಹಳಷ್ಟು ಅಹಿತಕರ ಘಟನೆಗಳು ನಡೆದಿದ್ದವು. ಅಲ್ಲದೆ, ಕಾರ್ಯಕ್ರಮದ ದಿನದಂದು ಯುವಕ, ಯುವತಿಯರು ಮದ್ಯಪಾನ ಮಾಡಿ ಆಚರಣೆಯಲ್ಲಿ ತೊಡಗಿಕೊಳ್ಳುವುದು ಮತ್ತು ಸಮಾಜಘಾತುಕ ವ್ಯಕ್ತಿಗಳು ಈ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು,

ಸ್ಥಳದಲ್ಲಿ ದಾಂಧಲೆ ನಡೆಸುವುದು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವತಿಯರು ಮತ್ತು ಮಹಿಳೆಯರ ಜತೆ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಗಿರೀಶ್‌ ತಿಳಿಸಿದ್ದಾರೆ.

ಹಣ ವಾಪಸ್‌: ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ನೋಡಲು 3ರಿಂದ 8 ಸಾವಿರ ರೂ. ಕೊಟ್ಟು “ಬುಕ್‌ ಮೈ ಶೋ’ ಮೂಲಕ ಟಿಕೆಟ್‌ ಖರೀದಿಸಿದವರ ಹಣ ಸದ್ಯದಲ್ಲೇ ಅವರ ಖಾತೆ ಸೇರಲಿದೆ. ಪೊಲೀಸ್‌ ಇಲಾಖೆ ಅಧಿಕೃತವಾಗಿ ಕಾರ್ಯಕ್ರಮ ರದ್ದು ಪಡಿಸಿದ ಹಿನ್ನೆಲೆಯಲ್ಲಿ ವೆಬ್‌ಸೈಟ್‌ ನಿರ್ವಾಹಕರಿಗೆ ಇ-ಮೇಲ್‌ ಮೂಲಕ ಸಂಪರ್ಕಿಸಿದ್ದು, ಟಿಕೆಟ್‌ ಖರೀದಿಸಿದವರ ಖಾತೆಗೆ ಸಂಪೂರ್ಣ ಹಣ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಇನ್ನು 3-4 ದಿನಗಳಲ್ಲಿ ಹಣ ವಾಪಸ್‌ ಆಗಲಿದೆ ಎಂದು ಕಾರ್ಯಕ್ರಮ ಆಯೋಜಕ ಹರೀಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಆ ಮೂರು ಕಾರಣಗಳು…
-ಸನ್ನಿ ನೈಟ್ಸ್‌ ಕಾರ್ಯಕ್ರಮಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ಕೊಡಲು ಸಾಧ್ಯವಿಲ್ಲ
-ಬೆಸ್ಕಾಂ, ಸ್ಥಳೀಯ ಪ್ರಾಧಿಕಾರದಿಂದ ಯಾವುದೇ ರೀತಿ ಅನುಮತಿ ಪಡೆದಿಲ್ಲ
-ಕಾರ್ಯಕ್ರಮದ ಕುರಿತು ಆಯೋಜಕರು ಸಮರ್ಪಕ ರೂಪುರೇಷೆ ಸದ್ಧಪಡಿಸಿಲ್ಲ

ಎಂ.ಜಿ, ಬ್ರಿಗೇಡ್‌ ರಸ್ತೆಗಳಲ್ಲಿ ಪ್ರತ್ಯೇಕ ಪಥ!
ಬೆಂಗಳೂರು:
ಕಳೆದ ವರ್ಷ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಈ ಬಾರಿಯ ಆಚರಣೆಗೆ ವಿಶೇಷ ಭದ್ರತೆ ಒದಗಿಸಲು ಸಿದ್ಧತೆ ನಡೆಸಿರುವ ಪೊಲೀಸ್‌ ಇಲಾಖೆ, ಮಹಾತ್ಮ ಗಾಂಧಿ ರಸ್ತೆ ಹಾಗೂ ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ನಲ್ಲಿ ಪುರುಷರು ಮತ್ತು ಮಹಿಳೆಯರ ಓಡಾಟಕ್ಕೆ ಪ್ರತ್ಯೇಕ ಪಥ ನಿಗದಿಪಡಿಸಲು ಚಿಂತನೆ ನಡೆಸಿದೆ.

ಆದರೆ, ನಗರ ಪೊಲೀಸ್‌ ಆಯುಕ್ತರು ಸಮ್ಮತಿ ಸೂಚಿಸಿದ ನಂತರವೇ ಈ ಹೊಸ ಮಾದರಿಯ ಭದ್ರತೆ ಅನುಷ್ಠಾನಕ್ಕೆ ತರುವುದಾಗಿ ಕೇಂದ್ರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಪ್ರತ್ಯೇಕ ಬ್ಯಾರಿಕೇಡ್‌: ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಚರ್ಚ್‌ ಸ್ಟ್ರೀಟ್‌ನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಎರಡು ಪಥಗಳನ್ನು ನಿರ್ಮಿಸಲಾಗುತ್ತದೆ. ಶೇ.70ರಷ್ಟು ಸ್ಥಳದಲ್ಲಿ ಪುರುಷರು ಹಾಗೂ ಶೇ.30ರಷ್ಟು ಸœಳದಲ್ಲಿ ಮಹಿಳೆಯರಿಗೆ ಮೀಸಲಿರಿಸಲಾಗುವುದು.

ಜತೆಗೆ 12 ಅಡಿ ಎತ್ತರದ 15 ವೀಕ್ಷಣಾ ಗೋಪುರಗಳು (ವಾಚ್‌ ಟವರ್‌), 500 ಸಿಸಿಟಿವಿ ಕ್ಯಾಮೆರಾಗಳು ಹಾಗೂ 200 ಫೋಕಲ್‌ ಲೈಟ್‌ಗಳನ್ನು ಈ ರಸ್ತೆಗಳಲ್ಲಿ ಅಳವಡಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ವಿವರಿಸಿದ್ದಾರೆ.

ಭದ್ರತೆ ಸಂಬಂಧ ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಕೆಲ ಅಧಿಕಾರಿಗಳು ಪ್ರತ್ಯೇಕ ಪಥಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಆಯುಕ್ತರಿಂದ ಇನ್ನೂ ಯಾವುದೇ ಅಧಿಕೃತ ಆದೇಶ ಬಂದಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.