ಮಹದಾಯಿ: ಉತ್ತರ ಕರ್ನಾಟಕ ಬಂದ್; ಭರ್ಜರಿ ಪ್ರತಿಕ್ರಿಯೆ
Team Udayavani, Dec 27, 2017, 8:52 AM IST
ಹುಬ್ಬಳ್ಳಿ: ಮಹದಾಯಿ ನದಿ ನೀರಿಗಾಗಿ ಬುಧವಾರ ಮಲಪ್ರಭಾ, ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸೇರಿದಂತೆ ನೂರಕ್ಕೂ ಹೆಚ್ಚು ವಿವಿಧ ಕನ್ನಡ ಪರ, ರೈತ ಸಂಘಟನೆಗಳು ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವಡೆ ವಾಹನಗಳಿಗೆ ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.
ಬಂದ್‌ಗೆ ಮಹದಾಯಿ ವ್ಯಾಪ್ತಿಯ ಧಾರವಾಡ, ಗದಗ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲಾ,ತಾಲೂಕು ಕೇಂದ್ರಗಳಲ್ಲಿ ರೈತರು, ಸಂಘಟನೆಯ ಸದಸ್ಯರು ಬೀದಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬೆಳಗಿನ ಜಾವದಿಂದಲೆ ಪ್ರತಿಭಟನೆಗಳನ್ನು ನಡೆಸಲಾಗುತ್ತಿದ್ದು,ಧಾರವಾಡದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ರೈತರು ಹುಬ್ಬಳ್ಳಿ -ಸೊಲ್ಲಾಪುರ ಹೆದ್ದಾರಿಯನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
ಗದಗದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಎಲ್ಲಾ ಲಾರಿ ಗಳಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕಲ್ಲು ತೂರಾಟ ನಡೆಸುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಮುಂಜಾಗ್ರತೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದ್ದು,ಅಕ್ಕಮಹಾದೇವಿ ವಿವಿ, ಕವಿವಿ, ಕಾನೂನು ವಿವಿ ಹಾಗೂ ವಿಟಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.