ಸಾವಿರ ಕಂಬದ ಬಸದಿಯಲ್ಲಿ ಲಕ್ಷ ದೀಪೋತ್ಸವ
Team Udayavani, Dec 27, 2017, 10:10 AM IST
ಮೂಡಬಿದಿರೆ: ಸಾವಿರ ಕಂಬದ ಬಸದಿಯಲ್ಲಿ ಸೋಮವಾರ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರ ಹಿರಿತನದಲ್ಲಿ ಲಕ್ಷ ದೀಪೋತ್ಸವ ಜರಗಿತು.
ಪುಷ್ಪಗಿರಿ ಕ್ಷೇತ್ರದ ದಿಗಂಬರ ಸಂತ ಆಚಾರ್ಯ 108 ಪುಷ್ಪದಂತ ಸಾಗರ ಮುನಿ ಮಹಾರಾಜರು, ಅವರ ಶಿಷ್ಯಂದಿರಾದ 108 ಪ್ರಸಂಗಸಾಗರ ಮುನಿಮಹಾರಾಜರು, 108 ಪ್ರಮುಖ ಸಾಗರ ಮುನಿಮಹಾರಾಜರು ಅವರ ಉಪಸ್ಥಿತಿಯಲ್ಲಿ ನಡೆದ ಲಕ್ಷ ದೀಪೋತ್ಸವಕ್ಕೆ ಮೂಡಬಿದಿರೆ ಶಾಸಕ ಕೆ. ಅಭಯ ಚಂದ್ರ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಜೈನರೊಂದಿಗೆ ಜೈನೇತರರಿಗೂ ದೀಪ ಬೆಳಗಿಸಲು ಅವಕಾಶ ಕಲ್ಪಿಸಲಾಗಿತ್ತು.
ಬಸದಿಗಳ ಮೊಕ್ತೇಸರರಾದ ಪಟ್ಣಶೆಟ್ಟಿ ಸುಧೇಶ್ ಕುಮಾರ್, ದಿನೇಶ್‌ಕುಮಾರ್ ಆನಡ್ಕ, ಉದ್ಯಮಿ ಪುಷ್ಪರಾಜ್ ಜೈನ್, ಪುರಸಭಾ ಸದಸ್ಯ, ವಕೀಲರ ಸಂಘದ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಜೈನ್‌ಮಿಲನ್ ಅಧ್ಯಕ್ಷ ಧನಕೀರ್ತಿ ಬಲಿಪ, ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ, ನಾಗವರ್ಮ ಜೈನ್, ಶ್ರೀ ದಿಗಂಬರ ಜೈನ ಮಹಾಸಮಿತಿ ಅಧ್ಯಕ್ಷ ಮಣೀಂದ್ರ ಜೈನ್, ಶೀತಲನಾಥ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಸನ್ನ ಜೈನ್, ಕೆ.ಪಿ. ಜಗದೀಶ ಅಧಿಕಾರಿ, ಹರಿಶ್ಚಂದ್ರ ಜೈನ್, ರಾಮಗೋಪಾಲ ಜೈನ್ ಸಹಿತ ಕರ್ನಾಟಕದ ವಿವಿಧ ಜಿಲ್ಲೆಗಳು, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶಗಳಿಂದ ಆಗಮಿಸಿದ್ದ ಶ್ರಾವಕ, ಶ್ರಾವಿಕೆಯರು ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.