ವ್ಯಕ್ತಿಯ ಮೇಲೆ ತಲವಾರು ದಾಳಿ: ಕಲ್ಲಡ್ಕ ಸಂಪೂರ್ಣ ಬಂದ್
Team Udayavani, Dec 27, 2017, 11:00 AM IST
ಬಂಟ್ವಾಳ: ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಸ್ಸಂಜೆ ವ್ಯಕ್ತಿ ಯೊಬ್ಬರ ಮೇಲೆ ತಂಡವೊಂದು ತಲವಾರಿನಿಂದ ಕಡಿದು ಪರಾರಿಯಾಗಿದೆ.
ಘಟನೆಯ ಬೆನ್ನಿಗೇ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿಕೊಂಡಿದ್ದು ಪರಿಸರ ನಿರ್ಜನವಾಗಿದೆ. ಸ್ಥಳದಲ್ಲಿ ಪೊಲೀಸರು ವ್ಯಾಪಕ ಬಂದೋಬಸ್ತ್ ಕೈಗೊಂಡಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಎಂದಿನಂತಿದೆ.
ವೀರಕಂಭ ನಿವಾಸಿ ಕೇಶವ (33) ಗಾಯಾಳು. ತತ್‌ಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇಶವ ತನ್ನ ಆ್ಯಕ್ಟಿವಾ ಹೋಂಡ ಸ್ಕೂಟರ್‌ನಲ್ಲಿ ಮನೆಯಿಂದ ಬಂದು ಕಲ್ಲಡ್ಕ ಪೇಟೆಯಲ್ಲಿ ನಿಲ್ಲಿಸಿ ಅದರಲ್ಲಿಯೇ ಕುಳಿತಿದ್ದು ಹಿಂಬದಿ ಸವಾರ ಹತ್ತಿರದ ಕೋಳಿ ಮಾಂಸದ ಅಂಗಡಿಗೆ ಹೋಗಿದ್ದ ಸಂದರ್ಭ ಹಲ್ಲೆ ಘಟನೆ ನಡೆದಿದೆ.
ಈ ಸಂದರ್ಭ ಮಂಗಳೂರು-ಉಪ್ಪಿನಂಗಡಿ ನಡುವಣ ಸರಕಾರಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.
ಗಾಯಾಳು ಹತ್ಯೆ ಆರೋಪಿ
ಹಲ್ಲೆಗೆ ಒಳಗಾದ ವ್ಯಕ್ತಿಯು 2017 ಎ. 20 ರಂದು ಕರೋಪಾಡಿ ಗ್ರಾ.ಪಂ. ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ 11 ಆರೋಪಿಗಳಲ್ಲಿ ಒಬ್ಬನಾಗಿದ್ದು, ಸುಮಾರು ಒಂದು ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆ ಹೊಂದಿದ್ದ.
ಹೆಚ್ಚುವರಿ ಪೊಲೀಸ್
ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಬಲವನ್ನು ನಿಯೋ ಜಿಸಲಾಗಿದೆ. ವಿಟ್ಲ ವ್ಯಾಪ್ತಿಯಲ್ಲಿಯೂ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಬಂಟ್ವಾಳ ವೃತ್ತನಿರೀಕ್ಷಕ ಪ್ರಕಾಶ್, ನಗರ ಠಾಣಾಧಿ ಕಾರಿ ಚಂದ್ರಶೇಖರ್, ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಇದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸುಳಿವು ಪತ್ತೆ
ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಓರ್ವ ಆರೋಪಿಯ ಸುಳಿವು ಪತ್ತೆಯಾಗಿದ್ದು ಹಿನ್ನೆಲೆಯಲ್ಲಿರುವ ಎಲ್ಲರನ್ನೂ ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.