ಗಡುವು ಮುಗಿದರೆ ಅನುಮತಿಯಿಲ್ಲ

Team Udayavani, Dec 27, 2017, 1:26 PM IST

gaduvu-auto.jpg

ಬೆಂಗಳೂರು: ನಗರದಲ್ಲಿ ನಿಗದಿತ ಗಡುವಿನ ನಂತರವೂ ಓಡಾಡುವ 2 ಸ್ಟ್ರೋಕ್‌ ಆಟೋಗಳಿಗೆ “ವಾಹನ ಅರ್ಹತಾ ಪತ್ರ’ ನೀಡುವುದಿಲ್ಲ ಎಂದು ಸಾರಿಗೆ ಆಯುಕ್ತ ಬಿ. ದಯಾನಂದ್‌ ಎಚ್ಚರಿಸಿದ್ದಾರೆ. ನಗರದಲ್ಲಿ ಸುಮಾರು 20ರಿಂದ 25 ಸಾವಿರ 2 ಸ್ಟ್ರೋಕ್‌ ಆಟೋಗಳಿವೆ.

ಈ ಪೈಕಿ 10 ಸಾವಿರ ಆಟೋಗಳನ್ನು ಮಾ. 31ರ ಒಳಗೆ ಗುಜರಿಗೆ ಹಾಕಲಾಗುವುದು. ಉಳಿದವು ನಗರದ ಹೊರಗೆ ಕಾರ್ಯಾಚರಣೆ ಮಾಡಬೇಕು. ಗಡುವು ನಂತರವೂ ಸಂಚರಿಸುವ ಆಟೋಗಳ ವಿರುದ್ಧ ಕಾರ್ಯಾಚರಣೆ ಜತೆಗೆ ವಾಹನ ಅರ್ಹತಾ ಪತ್ರ ನೀಡುವುದಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ನೆಲಮಂಗಲದ ಬಳಿ ಸಾðéಪ್‌ ಘಟಕ ತೆರೆಯಲಾಗಿದೆ. ರಾಜಾಜಿನಗರದಲ್ಲಿ ಶೀಘ್ರದಲ್ಲೇ ಮತ್ತೂಂದು ಘಟಕ ಆರಂಭಗೊಳ್ಳಲಿದೆ. ನಿತ್ಯ 300 ಆಟೋಗಳನ್ನು ಸಾðéಪ್‌ ಮಾಡುವ ಸಾಮರ್ಥ್ಯ ಈ ಘಟಕಗಳು ಹೊಂದಿವೆ. ಕಳೆದ ಬಾರಿ 993 ಆಟೋಗಳನ್ನು ಗುಜರಿಗೆ ಸೇರಿಸಲಾಗಿತ್ತು.

ಈ ವರ್ಷ 10 ಸಾವಿರ ಗುರಿ ಹೊಂದಲಾಗಿದೆ. ಇದಕ್ಕೆ ಪ್ರತಿಯಾಗಿ 30 ಸಾವಿರ ರೂ. ಸಬ್ಸಿಡಿ ನೀಡಲಿದ್ದು, ನೇರವಾಗಿ ಫ‌ಲಾನುಭವಿ ಖಾತೆಗೆ ಈ ಹಣ ಜಮೆ ಆಗಲಿದೆ ಎಂದು ಮಾಹಿತಿ ನೀಡಿದರು. ಪ್ರಸ್ತುತ 1.25 ಲಕ್ಷ ಆಟೋಗಳಿಗೆ ಪರ್ಮಿಟ್‌ ನೀಡಲಾಗಿದ್ದು, ಹೊಸದಾಗಿ ಯಾವುದೇ ಪರವಾನಗಿ ನೀಡುತ್ತಿಲ್ಲ. ಇವುಗಳನ್ನು ಶೀಘ್ರದಲ್ಲೇ ಇ-ಪರ್ಮಿಟ್‌ಗೆ ಪರಿವರ್ತಿಸಲಾಗುವುದು.

ಆಧಾರ್‌ ಲಿಂಕ್‌ ಇರುವುದರಿಂದ ಪ್ರಕ್ರಿಯೆಯಲ್ಲಿ ತುಸು ವಿಳಂಬವಾಗಿದೆ ಎಂದು ಸಮಜಾಯಿಷಿ ನೀಡಿದರು. ಎಲೆಕ್ಟ್ರಿಕ್‌ ವಾಹನಗಳಿಗೆ ರಸ್ತೆ ತೆರಿಗೆ ವಿನಾಯ್ತಿ ನೀಡಲಾಗಿದ್ದು, ಅಟೋರಿಕ್ಷಾಗಳನ್ನು ರೆಟ್ರೋ ಫಿಟ್ಟಿಂಗ್‌ ಮೂಲಕ ಇ-ಅಟೋರಿಕ್ಷಾಗಳಿಗೆ ಪರಿವರ್ತನೆಗೊಂಡ ವಾಹನಗಳಿಗೂ ಇದು ಅನ್ವಯಿಸುತ್ತದೆ ಎಂದು ತಿಳಿಸಿದರು. ಹೆಚ್ಚುವರಿ ಸಾರಿಗೆ ಆಯುಕ್ತ (ಆಡಳಿತ) ಹೇಮಂತಕುಮಾರ್‌ ಉಪಸ್ಥಿತರಿದ್ದರು.

ಖಾಸಗಿ ಬಸ್‌ಗಳಿಗೂ ದರ ನಿಗದಿ: ಖಾಸಗಿ ಬಸ್‌ಗಳಿಗೂ ದರ ನಿಗದಿಪಡಿಸಲು ಉದ್ದೇಶಿಸಿದ್ದು, ಈ ಕುರಿತು ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಹಬ್ಬ-ಹರಿದಿನಗಳು, ಸಾಲು ರಜೆ ವೇಳೆ ಖಾಸಗಿ ಬಸ್‌ಗಳು ಬೇಕಾಬಿಟ್ಟಿ ಪ್ರಯಾಣ ದರ ವಿಧಿಸುತ್ತವೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಉದ್ದೇಶಿಸಿದ್ದು, ದರ ನಿಗದಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ದಯಾನಂದ್‌ ಹೇಳಿದರು.

ಟಾಪ್ ನ್ಯೂಸ್

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

4-bng

Bengaluru: ಒಂಟಿ ಮಹಿಳೆಯರನ್ನು ಟಾರ್ಗೆಟ್‌ ಮಾಡಿ ಸರಗಳ್ಳತನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.