ವಿಧವೆ ಮೇಲೆ ಪ್ರಿಯಕರನಿಂದ ರೇಪ್, ಬೆನ್ನಲ್ಲೇ ಗ್ಯಾಂಗ್ರೇಪ್!
Team Udayavani, Dec 27, 2017, 3:02 PM IST
ರಾಯ್ಪುರ್(ಛತ್ತೀಸ್ಘಡ): ವಿಧವೆಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗುತ್ತಿದ್ದ ವೇಳೆ ಆಕೆಯ ಆರ್ತನಾದ ಕೇಳಿ ಓಡಿ ಬಂದ ಇನ್ನೂ ಮೂವರು ಪುರುಷರು ಗ್ಯಾಂಗ್ ರೇಪ್ ಎಸಗಿದ ಭಯಾನಕ, ಹೇಯ ಘಟನೆ ನಡೆದ ಬಗ್ಗೆ ವರದಿಯಾಗಿದೆ.
24 ರ ಹರೆಯದ ಯುವತಿಯನ್ನು ಕಾಪಾ ಎಂಬಲ್ಲಿನ ರೈಲ್ವೇ ಯಾರ್ಡ್ ಪ್ರದೇಶದಲ್ಲಿ ಆಕೆಯ ಪ್ರಿಯಕರ ಎನ್ನಲಾದ 24 ರ ಹರೆಯದ ಸಾಹು ಎಂಬಾತ ಅತ್ಯಾಚಾರ ಎಸಗಿದ್ದು, ಬೊಬ್ಬಿಟ್ಟಾಗ ಸ್ಥಳಕ್ಕೆ ಬಂದ ಮೂವರು ಪುರುಷರು ಸಾಹುನನ್ನು ಸ್ಥಳದಿಂದ ಓಡಿಸಿ ಬಳಿಕ ಕಾಮಾಂಧರಾಗಿ ಸರದಿಯಂತೆ ಅತ್ಯಾಚಾರ ಎಸಗಿದ್ದಾರೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಜಾಗೃತೆ ಎಂದು ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾಳೆ.
ಡಿಸೆಂಬರ್ 23 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ನೀಡಿದ ದೂರಿನಂತೆ ಕೃತ್ಯ ಎಸಗಿದ ಎಲ್ಲಾ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸಾಹು, ಹರೀಶ್ ಚಂದ್ರಾಕರ್(24)ತ್ರಿನಾಥ್ ಮಹಾನಂದ(24) ಮತ್ತು ವಿನಯ್ ಯಾದವ್ (23) ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.