ತೀಯಾ ಬೆಳಕು: 15ನೇ ವಾರ್ಷಿಕೋತ್ಸವ ಸಂಭ್ರಮ
Team Udayavani, Dec 27, 2017, 3:30 PM IST
ಮುಂಬಯಿ: ತೀಯಾ ಸಮಾಜ ಮುಂಬಯಿ ಮುಖವಾಣಿ “ತೀಯಾ ಬೆಳಕು’ ಇದರ 15ನೇ ವಾರ್ಷಿಕೋತ್ಸವ ಸಮಾರಂಭವು ಸಾಂತಕ್ರೂಜ್ ಪೂರ್ವದ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನೇರವೇರಿತು.
ತೀಯಾ ಸಮಾಜ ಮುಂಬಯಿ ಅಧ್ಯಕ್ಷ ಚಂದ್ರಶೇಖರ್ ಆರ್. ಬೆಳ್ಚಡ ಅವರ ಅಧ್ಯಕ್ಷತೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಿಲ್ಲಿಯ ಸತ್ಯವಾದಿ ರಾಜ ಹರಿಶ್ಚಂದ್ರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಅಂಕುಷ್ ಗುಜರನ್, ಗೌರವ ಅತಿಥಿಗಳಾಗಿ ತೀಯಾ ಸಮಾಜ ಮುಂಬಯಿ ಇದರ ವಿಶ್ವಸ್ಥ ಕಾರ್ಯಾಧ್ಯಕ್ಷ ರೋಹಿದಾಸ್ ಎಸ್. ಬಂಗೇರ, ವೈದ್ಯಾಧಿಕಾರಿ ಡಾ| ದಯಾನಂದ ಕೆ. ಕುಂಬ್ಲಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಸಸಿಹಿತ್ಲು ಭಗವತೀ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಪಾಲನ್, ಹೊಟೇಲು ಉದ್ಯಮಿ ಪ್ರಕಾಶ್ ಶೆಟ್ಟಿ, ತೀಯಾ ಬೆಳಕು ಮಾಸಿಕದ ಪ್ರಸಕ್ತ ಸಂಪಾದಕ ಶ್ರೀಧರ್ ಎಸ್.ಸುವರ್ಣ, ತೀಯಾ ಬೆಳಕು ಜೊತೆ ಸಂಪಾದಕ ಕೃಷ್ಣಪ್ಪ ಬಿಲ್ಲವ ಉಪಸ್ಥಿತರಿದ್ದು, “ತೀಯಾ ಬೆಳಕು ವಾರ್ಷಿಕ ಕ್ಯಾಲೆಂಡರ್’ ಬಿಡುಗಡೆ ಗೊಳಿಸಿದರು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಸುಧಾಕರ ದೊಡª ಅತಾರ್, ಉಳ್ಳಾಲ ಚೀರುಂಭ ಶ್ರೀ ಭಗವತೀ ಕ್ಷೇತ್ರದ ಮಂಜಪ್ಪ ಕಾರ್ನಾವರ್, ಮಂಜೇಶ್ವರ ಕನಿಲ ಶ್ರೀ ಭಗವತೀ ಕ್ಷೇತ್ರದ ಸಂತೋಷ್ ದಂಡ ಅತಾರ್ ಮತ್ತು ಪುರುಷೋತ್ತಮ ಗುರಿಕಾರ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆಯನ್ನಿತ್ತು “ತೀಯಾ ಬೆಳಕು’ ವಿಶೇಷ ಸಂಚಿಕೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುಧಾಕರ್ ಉಚ್ಚಿಲ್, ಗೌ| ಪ್ರ| ಕಾರ್ಯದರ್ಶಿ ಈಶ್ವರ್ ಎಂ.ಐಲ್, ಗೌ| ಕೋಶಾಧಿಕಾರಿ ರಮೇಶ್ ಎನ್. ಉಳ್ಳಾಲ್, ಜೊತೆ ಕಾರ್ಯದರ್ಶಿ ನ್ಯಾ| ನಾರಾಯಣ ಬಿ.ಸುವರ್ಣ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಸಮಾಜದ ಮುಂದಾಳುಗಳು, ಸದಸ್ಯರು ಉಪಸ್ಥಿತರಿದ್ದರು.
ಚಿತ್ರ,ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.