ಸಿಂಗ್‌ ವಿರುದ್ಧ ಹೇಳಿಕೆ: ಕೊನೆಗೂ ಕೇಂದ್ರ ಸ್ಪಷ್ಟನೆ


Team Udayavani, Dec 28, 2017, 6:20 AM IST

jetley.jpg

ನವದೆಹಲಿ: ಗುಜರಾತ್‌ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ವಿರುದ್ಧ ಪ್ರಧಾನಿ ಮೋದಿ ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿ ಎದ್ದಿದ್ದ ವಿವಾದ ಕೊನೆಗೂ ತಣ್ಣಗಾಗಿದೆ. ರಾಜ್ಯಸಭೆಯಲ್ಲಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟಿÉ ಅವರು ಮಂಗಳವಾರ ಈ ಕುರಿತು ಸ್ಪಷ್ಟನೆ ನೀಡಿದ್ದು, “ದೇಶದ ಕುರಿತಾಗಿರುವ ಮಾಜಿ ಪ್ರಧಾನಿ ಸಿಂಗ್‌ ಅವರ ಬದ್ಧತೆಯನ್ನು ಪ್ರಶ್ನಿಸಿಲ,’ ಎಂದು ಹೇಳಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ಸಂಸತ್‌ನ ಎರಡೂ ಸದನಗಳಲ್ಲಿ ಗದ್ದಲವೆಬ್ಬಿಸುತ್ತಾ ಬಂದಿದ್ದ ಪ್ರತಿಪಕ್ಷಗಳು ಸರ್ಕಾರದ ಸ್ಪಷ್ಟನೆಗೆ ಒಪ್ಪಿದ್ದು, ಕಲಾಪಕ್ಕೆ ಎದುರಾಗಿದ್ದ ಅಡ್ಡಿ ಆತಂಕಗಳು ನಿವಾರಣೆಯಾಗುವ ಸುಳಿವು ನೀಡಿವೆ.

“ಮಾಜಿ ಪ್ರಧಾನಿ ಸಿಂಗ್‌, ಮಾಜಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಮತ್ತಿತರ ಕಾಂಗ್ರೆಸ್‌ ನಾಯಕರು ಪಾಕಿಸ್ತಾನದ ಜತೆಗೂಡಿ ಸಂಚು ರೂಪಿಸಿದ್ದಾರೆ’ ಎಂದು ಗುಜರಾತ್‌ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಆರೋಪಿಸಿದ್ದರು.

ಇದರಿಂದ ಕೆಂಡಾಮಂಡಲವಾಗಿದ್ದ ಪ್ರತಿಪಕ್ಷಗಳು, ನಿರಂತರವಾಗಿ ಸದನದಲ್ಲಿ ಗದ್ದಲವೆಬ್ಬಿಸಿದ್ದವು. ಈ ವಿವಾದಕ್ಕೆ ಕೊನೆಹಾಡುವ ನಿಟ್ಟಿನಲ್ಲಿ ಮಂಗಳವಾರ ಹೆಜ್ಜೆಯಿಟ್ಟ ಸಚಿವ ಜೇಟಿÉ, “ಸಿಂಗ್‌ ಹಾಗೂ ಅನ್ಸಾರಿ ಅವರ ಕುರಿತು ಪ್ರಧಾನಿ ಮೋದಿ ತಪ್ಪಾಗಿ ಹೇಳಿಕೆ ನೀಡಿದ್ದಾರೆ. ಈ ಇಬ್ಬರು ನಾಯಕರನ್ನೂ, ದೇಶದ ಮೇಲಿನ ಅವರ ಬದ್ಧತೆಯನ್ನೂ ನಾವು ಗೌರವಿಸುತ್ತೇವೆ. ಪ್ರಧಾನಿ ಮೋದಿ ಅವರು ಈ ಬದ್ಧತೆಯನ್ನು ಪ್ರಶ್ನಿಸಿಲ್ಲ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್‌, “ಕೊನೆಗೂ ಸ್ಪಷ್ಟೀಕರಣ ನೀಡಿದ್ದಕ್ಕೆ ಜೇಟಿÉ ಅವರಿಗೆ ಧನ್ಯವಾದ’  ಎಂದರು. ಜತೆಗೆ, ಚುನಾ ವಣೆ ವೇಳೆ ಮಣಿಶಂಕರ್‌ ಅಯ್ಯ ರ್‌ ನೀಡಿದ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ ಎಂದೂ ಹೇಳಿದರು.

ಪತ್ತೆಯಾಗಿಲ್ಲ 661 ಮಂದಿ: ಏತನ್ಮಧ್ಯೆ, ಒಖೀ ಚಂಡಮಾರುತದಿಂದಾಗಿ ನಾಪತ್ತೆ ಯಾ ಗಿದ್ದ ಮೀನುಗಾರರ ಪೈಕಿ 845 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 661 ಮಂದಿ ಪತ್ತೆಯಾಗಿಲ್ಲ ಎಂದು ಲೋಕಸಭೆಗೆ ಸಚಿವೆ ನಿರ್ಮಲಾ ಸೀತಾರಾ ಮನ್‌ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಲಕ್ಸುರಿ ವಾಹನಗಳ ಮೇಲಿನ ಸೆಸ್‌ ಅನ್ನು ಈಗಿರುವ ಶೇ.15ರಿಂದ ಶೇ.25ಕ್ಕೇರಿಸುವ ವಿಧೇಯಕವೂ ಅಂಗೀಕಾರವಾಗಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

modi (4)

ಇಲಾಖಾ ಮುಖ್ಯಸ್ಥರಿಗೆ “ಮನ್‌ ಕೀ ಬಾತ್‌’ ಕೇಳುವುದು ಕಡ್ಡಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.