ಬೇಡಿಕೆ ಈಡೇರಿಕೆಗೆ ಗ್ರಾಪಂ ನೌಕರರ ಪ್ರತಿಭಟನೆ
Team Udayavani, Dec 28, 2017, 3:27 PM IST
ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸ ಬೇಕೆಂದು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಪಂಚಾಯ್ತಿಯ ಉಪಕಾರ್ಯದರ್ಶಿ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಗರದ ಟೌನ್‌ಹಾಲ್ ವೃತ್ತದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಗ್ರಾಮಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಘೋಷಣೆ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿ ನಂತರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು.
ಹುಸಿಯಾದ ಭರವಸೆ: ಈ ವೇಳೆ ಪ್ರತಿಭಟನಾ ಕಾರರನ್ನು ಕುರಿತು ಮಾತನಾಡಿದ ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಡಿ. ನಾಗೇಶ್ ಗ್ರಾಮೀಣ ಪ್ರದೇಶಗಳಲ್ಲಿ ಹಗಲು ರಾತ್ರಿ ಎನ್ನದೆ ಕೆಲಸಮಾಡುವ ಗ್ರಾಮಪಂಚಾಯ್ತಿ ನೌಕರರಿಗೆ ತಿಂಗಳಿಗೆ ಸರಿಯಾಗಿ ವೇತನ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದ್ದು ನೌಕರರ ಸತತ ಹೋರಾಟದ ಫಲವಾಗಿ ಸರ್ಕಾರ ಇಎಫ್ಎಂಎಸ್ ಮೂಲಕ ನೌಕರರಿಗೆ ವೇತನ ಪಾವತಿಸುವುದಾಗಿ ತಿಳಿಸಿದ್ದರು ಇದುವರೆಗೂ ಅದು ಜಾರಿಯಾಗದೆ ಇದ್ದು ಈ ಕೂಡಲೇ ಸರ್ಕಾರ ತನ್ನ ಮಾತಿನಂತೆ ನೌಕರರಿಗೆ ಇಎಫ್ಎಂಎಸ್ ಮೂಲಕ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸ ಮಾಡುತ್ತಿದ್ದರೂ ಸಹ ಕಾಲಕ್ಕೆ ಸರಿಯಾಗಿ ವೇತನಗಳು ಸಿಗದೆ ಸಂಕಷ್ಟದ ಬದುಕು ನಡೆಸುತ್ತಿದ್ದ ನೌಕರರಿಗೆ ನೌಕರರ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದು ನೇರವಾಗಿ ನೌಕರರ ಬ್ಯಾಂಕ್ ಖಾತೆಗೆ ಕನಿಷ್ಠ ವೇತನವನ್ನು ನೀಡುವುದಾಗಿ ಭರವಸೆ ನೀಡಿದ್ದರು.
ಆದರೆ ಇದಕ್ಕೆ ಸಂಬಂಧಪಟ್ಟ ಗ್ರಾಪಂ ಸಿ 74ರ ಕಡತ ಹಣಕಾಸು ಇಲಾಖೆಯಿಂದ ಅನುಮೋದನೆ ಗೊಂಡಿಲ್ಲ ಹಾಗಾಗಿ ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯಿಂದ ಮಂಜೂರಾತಿ ನೀಡುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಅನುಮೋದನೆ ನೀಡಿ: ಸಂಘದ ಜಿಲ್ಲಾಧ್ಯಕ್ಷ ಎನ್.ಕೆ. ಸುಬ್ರಮಣ್ಯ ಮಾತನಾಡಿ, ನೌಕರರ ಅನುಮೋದನೆಗೆ ಸಂಬಂಧಿಸಿದಂತೆ ಸಂಘವು ನಿರಂತರವಾದ ಹೋರಾಟವನ್ನು ನಡೆಸಿಕೊಂಡು ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಕಡತಗಳು ತಾಲೂಕು ಮತ್ತು ಜಿಲ್ಲಾಪಂಚಾಯ್ತಿಗಳಲ್ಲಿ ಬಾಕಿ ಇದ್ದು ನೌಕರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಪಂಚಾಯತ್ ಅನುಮೋದನೆ ನೀಡಲು ಮುಂದಾಗಬೇಕು ಎಂದು ಹೇಳಿದರು.
ಮನವಿ ಸ್ವೀಕರಿಸಿದ ಜಿಲ್ಲಾಪಂಚಾಯ್ತಿಯ ಅಭಿವೃದ್ಧಿ ಉಪಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, ನೌಕರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯ್ತಿ ಹಂತದಲ್ಲಿ ಇತ್ಯರ್ಥಪಡಿಸಬಹುದಾದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದರು ಇದಕ್ಕೆ ಸಂಬಂಧಿಸಿದಂತೆ ಒಂದುವಾರದಲ್ಲಿ ಎಲ್ಲಾ ಅಧಿಕಾರಿಗಳ ಸಭೆಯನ್ನು ಕರೆದು ಸಮಸ್ಯೆಗಳ ಇತ್ಯಾರ್ಥಕ್ಕೆ ಕ್ರಮವವಹಿಸುವಂತೆ ತಿಳಿಸುವುದಾಗಿ ತಿಳಿಸಿದರು. ಈ ವೇಳೆ ತುಮಕೂರು ತಾಲೂಕು ಅಧ್ಯಕ್ಷ ಪಂಚಾಕ್ಷರಿ ಮಾತನಾಡಿದರು.
ಜಿಲ್ಲಾಪಂಚಾಯ್ತಿ ಉಪಕಾರ್ಯದರ್ಶಿ ಎನ್.ಡಿ. ಪ್ರಕಾಶ್, ಯೋಜಾನಾದಿಕಾರಿ ಬಾಲ್‌ರಾಜ್, ತಿಪಟೂರು ರಾಜು, ಚಿಕ್ಕನಾಯಕನಹಳ್ಳಿ ಲೋಕೇಶ್, ಪಾವಗಡ ಸುಬ್ಬರಾಯಪ್ಪ, ಕುಣಿಗಲ್ ಶ್ರೀನಿವಾಸ್, ಗುಬ್ಬಿಯ ಬಷೀರ್‌ಅಹಮದ್, ತುರುವೇಕೆರೆ ನಟರಾಜು, ರಮೇಶ್, ಶಿರಾ ರಾಮಲಿಂಗಪ್ಪ, ಬಸವರಾಜು, ದಯಾನಂದ್, ರೇಖಾ, ಸೇರಿದಂತೆ ಮುಂತಾವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.