ನಿರುಪಯುಕ್ತ ಕೊಳವೆಬಾವಿ ಸಾಮಗ್ರಿ ಮರುಬಳಕೆಗೆ ಚಿಂತನೆ 


Team Udayavani, Dec 29, 2017, 10:43 AM IST

29-Dec-4.jpg

ಉರ್ವಸ್ಟೋರ್‌: ದ.ಕ. ಜಿಲ್ಲೆಯಲ್ಲಿ ಸುಮಾರು 20 ಸಾವಿರದಷ್ಟು ಖಾಸಗಿ ಹಾಗೂ ಸರಕಾರಿ ಕೊಳವೆ ಬಾವಿಗಳು ನಿರುಪಯುಕ್ತವಾಗಿವೆ. ಅಂತಹ ಬಾವಿಗಳಿಗೆ ಅಳವಡಿಸಿರುವ ಪೈಪ್‌ ಹಾಗೂ ಎಲೆಕ್ಟ್ರಿಕಲ್‌ ಉಪಕರಣಗಳನ್ನು ಪುನರ್ಬಳಕೆ ಮಾಡುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಹೇಳಿದರು.

ಮಳೆನೀರು ಸಂಗ್ರಹಣೆ ಮತ್ತು ಮರು ಬಳಕೆ, ಅಂತರ್ಜಲ ಸಂರಕ್ಷಣೆ, ಕಲುಷಿತ ತಡೆಗಟ್ಟುವಿಕೆ, ತೆರೆದ, ತ್ಯಕ್ತ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳದಂತೆ ನಿಯಂತ್ರಿಸುವ ಮತ್ತು ಅಂತರ್ಜಲ ಅಭಿವೃದ್ಧಿ ಸದ್ಬಳಕೆ ಕುರಿತು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು.

ದೋಷಪೂರಿತ ನೀತಿಗಳು ಹಾಗೂ ವಿವೇಚನರಹಿತ ನಿರ್ಧಾರಗಳಿಂದ ಜಿಲ್ಲೆಯಲ್ಲಿ 2007ರಿಂದೀಚೆಗೆ ತೀವ್ರ ಪ್ರಮಾಣದಲ್ಲಿ ಅಂತರ್ಜಲ ಕುಸಿತಗೊಂಡಿದೆ. ಪುತ್ತೂರು ತಾ|ನಲ್ಲಿ ಅಂತರ್ಜಲ ಬಳಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಕೊಳವೆಬಾವಿ ಕೊರೆಯುವುದನ್ನು ನಿಷೇಧಿಸಲಾಗಿದೆ. ಬೆಳ್ತಂಗಡಿ ಮತ್ತು ಮಂಗಳೂರು ತಾ| ಕೂಡ ಈ ವಿಚಾರದಲ್ಲಿ ಅಪಾಯಕಾರಿ ಹಂತದಲ್ಲಿರುವುದರಿಂದ ಸೂಕ್ತ ಮುನ್ನೆಚ್ಚರಿಕೆ ಅಗತ್ಯ ಎಂದರು.

ತೋಟಗಾರಿಕೆ ಇಲಾಖೆ ನಿರ್ದೇಶಕ ಎಚ್‌. ಆರ್‌. ನಾಯಕ್‌ ಮಾತನಾಡಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ| ಬಿ. ಎಂ. ರವೀಂದ್ರ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಡಾ| ಸುಮಿತ್ರಾ ಎಸ್‌., ಹಿರಿಯ ಭೂ ವಿಜ್ಞಾನಿ ಜಾನಕಿ, ಅಂತರ್ಜಲ ಇಲಾಖೆಯ ನಿತೇಶ್‌ ಉಪಸ್ಥಿತರಿದ್ದರು. ಜಿಲ್ಲಾ ಅಂತರ್ಜಲ ಕಚೇರಿಯ ಪ್ರಭಾರ ಹಿರಿಯ ಭೂ ವಿಜ್ಞಾನಿ ಡಾ| ಎಂ. ದಿನಕರ ಶೆಟ್ಟಿ ಸ್ವಾಗತಿಸಿದರು. ಇದೇ ವೇಳೆ ಅಂತರ್ಜಲ ಅಭಿವೃದ್ಧಿ ಮಾಹಿತಿ ಯನ್ನು ಒಳಗೊಂಡ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

ಲಕ್ಷಾಂತರ ರೂ. ಪೋಲು
ಎನ್‌ಆರ್‌ಡಿಎಂಸಿ ನಡೆಸಿದ ಪರಿಶೀಲನೆಯಲ್ಲಿ 2,400 ಕುಟುಂಬಗಳಿರುವ ಮತ್ತು 10,000 ಜನಸಂಖ್ಯೆ ಹೊಂದಿರುವ ನರಿಮೊಗರು ಗ್ರಾಮದಲ್ಲಿ 2,500 ಬೋರ್‌ವೆಲ್‌ಗ‌ಳಿರುವುದು ಪತ್ತೆಯಾಗಿದೆ. ಕೊರೆದ ಬೋರ್‌ ವೆಲ್‌ ವಿಫಲವಾದರೆ ಇನ್ನೊಂದು ಬೋರ್‌ವೆಲ್‌ ಕೊರೆಯಲಾಗುತ್ತದೆಯೇ ಹೊರತು ಈಗಾಗಲೇ ಕೊರೆದಿರುವ ಬೋರ್‌ವೆಲ್‌ಗೆ ಮಾಡಲಾದ ವೆಚ್ಚ, ಬಳಸಿದ ಸಾಮಗ್ರಿಗಳ ಕಡೆಗೆ ಗಮನ ಹರಿಸುತ್ತಿಲ್ಲ. ಇದರಿಂದ ಲಕ್ಷಾಂತರ ರೂ. ಪೋಲಾಗುತ್ತಿದೆ. ನಿರುಪಯುಕ್ತ ಬೋರ್‌ವೆಲ್‌ ಸಾಮಗ್ರಿಗಳನ್ನು ಮರು ಬಳಕೆ ಮಾಡಲು ಸಾಧ್ಯವೇ ಎಂಬ ಬಗ್ಗೆ ಅಧ್ಯಯನ ನಡೆಸಲು ಚಿಂತಿಸಲಾಗಿದೆ ಎಂದು ಡಾ| ಎಂ.ಆರ್‌. ರವಿ ತಿಳಿಸಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.