ಮಹದಾಯಿ ನೀರಿಗಾಗಿ ಕರಾಳ ದಿನ ಆಚರಣೆ


Team Udayavani, Dec 29, 2017, 12:09 PM IST

vatal-mahadayi.jpg

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಕರ್ನಾಟಕ ಸೇರಿದಂತೆ ನೆರೆಯ ಗೋವಾ, ಮಹಾರಾಷ್ಟ್ರ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ ಎಂದು ಆರೋಪಿಸಿ ಕನ್ನಡ ಒಕ್ಕೂಟದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದಲ್ಲಿ ಗುರುವಾರ ಕರಾಳ ದಿನ ಆಚರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸಿದ ಕಾರ್ಯಕರ್ತರು, ಉತ್ತರ ಕರ್ನಾಟಕದ ಜನತೆ 900 ದಿನಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಕೇಂದ್ರ, ರಾಜ್ಯ ಸರ್ಕಾರಗಳು ಸ್ಪಂದಿಸದಿರುವು ಖಂಡನೀಯ ಎಂದು ಕಿಡಿಕಾರಿದರು.

ಈ ವೇಳೆ ಮಾತನಾಡಿದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌, ಮಹದಾಯಿ ವಿಚಾರವು ಅಂತಾರಾಜ್ಯ ವಿವಾದವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬೇಕು. ಆದರೆ ಈವರೆಗೆ ಆ ಪ್ರಯತ್ನ ನಡೆದಿಲ್ಲ ಎಂದು ದೂರಿದರು.

ಮೊಂಡುತನ: ಗೋವಾ ಸರ್ಕಾರವು ಅನಗತ್ಯವಾಗಿ ಮೊಂಡುತನ ಮುಂದುವರಿಸುತ್ತಿದೆ. ಎರಡು ರಾಜ್ಯಗಳ ರಾಜಕೀಯ ಮುಖಂಡರು ಪತ್ರ ವ್ಯವಹಾರದ ನಾಟಕವಾಡುತ್ತಿದ್ದಾರೆ. ವಿವಾದ ಬಗೆಹರಿಸುವಲ್ಲಿ ರಾಜ್ಯದ ಸಂಸದರು ಅದರಲ್ಲೂ ಬಿಜೆಪಿ ಸಂಸದರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಬಿಜೆಪಿ ಸಂಸದರು ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಆದರೆ ಈವರೆಗೆ ಸಂಸದರಿಂದ ಆ ಕೆಲಸ ನಡೆದಿಲ್ಲ ಎಂದರು.

ಜ.10 ಸಭೆ: ಕೇಂದ್ರ ಸಚಿವರಾಗಿರುವ ರಾಜ್ಯದ ಸಂಸದರು ಈ ವಿಚಾರದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಂಸತ್‌ನಲ್ಲಿ ಯಾರೊಬ್ಬರೂ ಇದರ ಬಗ್ಗೆ ದನಿ ಎತ್ತುತ್ತಿಲ್ಲ. ಕೇಂದ್ರ ಸಚಿವರ ವರ್ತನೆಯನ್ನು ಗಮನಿಸಿದರೆ ಯಾರೊಬ್ಬರಿಗೂ ಇದು ಸಮಸ್ಯೆಯಂತೆ ಕಂಡಂತಿಲ್ಲ. ಹಾಗಾಗಿ ಜ.10ರಂದು ನಾನಾ ಸಂಘಟನೆಗಳ ಮುಖಂಡರ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಹೋರಾಟ ನಿರಂತರ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ನಾಡು, ನುಡಿ, ನೆಲ, ಜಲದ ವಿಚಾರ ಬಂದಾಗ ಕನ್ನಡ ಒಕ್ಕೂಟವು ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದೆ. ಈ ಹೋರಾಟ ಕರಾಳ ದಿನ ಆಚರಣೆಯೊಂದಿಗೆ ಅಂತ್ಯವಾಗುವುದಿಲ್ಲ ಎಂದು ಹೇಳಿದರು. ಕನ್ನಡ ಸೇನೆಯ ಕೆ.ಆರ್‌.ಕುಮಾರ್‌, ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಕನ್ನಡಪರ ಹೋರಾಟಗಾರರಾದ ಗಿರೀಶ್‌ಗೌಡ ಇತರರು ಇದ್ದರು.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.