2017ಕ್ಕೆ ಭರ್ಜರಿ ವಿದಾಯ: ಮುಂಬಯಿ ಶೇರು 208 ಅಂಕ ಜಂಪ್
Team Udayavani, Dec 29, 2017, 4:05 PM IST
ಮುಂಬಯಿ : 2017ರ ವಹಿವಾಟಿನ ಕೊನೇ ದಿನವಾದ ಇಂದು ಶುಕ್ರವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 208.80 ಅಂಕಗಳ ಜಿಗಿತದೊಂದಿಗೆ 34,056.83 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸುವುದರೊಂದಿಗೆ 2017ಕ್ಕೆ ಭರ್ಜರಿ ವಿದಾಯವನ್ನು ಕೋರಿತು.
ಸೆನ್ಸೆಕ್ಸ್ನಂತೆ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಕೂಡ 52.80 ಅಂಕಗಳ ಜಿಗಿತ ದಾಖಲಿಸಿ ದಿನದ ಹಾಗೂ 2017ರ ಕೊನೇ ವಹಿವಾಟನ್ನು 10,530.70 ಅಂಕಗಳ ಮಟ್ಟಕ್ಕೇರುವ ಮೂಲಕ ಹೊಸ ಆತ್ಮವಿಶ್ವಾಸದೊಂದಿಗೆ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಒಟ್ಟು 2,973 ಶೇರುಗಳು ವಹಿವಾಟಿಗೆ ಒಳಪಟ್ಟವು; 1,569 ಶೇರುಗಳು ಮುನ್ನಡೆ ಸಾಧಿಸಿದವು; 1,202 ಶೇರುಗಳು ಹಿನ್ನಡೆಗೆ ಗುರಿಯಾದವು; 202 ಶೇರುಗಳ ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬರಲಿಲ್ಲ.
ಇಂದಿನ ಟಾಪ್ ಗೇನರ್ಗಳು : ಐಡಿಯಾ ಸೆಲ್ಯುಲರ್, ಟಾಟಾ ಮೋಟರ್, ಎಕ್ಸಿಸ್ ಬ್ಯಾಂಕ್, ಭಾರ್ತಿ ಇನ್ಫ್ರಾಟೆಲ್, ಟಿಸಿಎಸ್.
ಟಾಪ್ ಲೂಸರ್ಗಳು : ಗೇಲ್, ಬಿಪಿಸಿಎಲ್, ಎಚ್ಪಿಸಿಎಲ್, ವೇದಾಂತ, ಝೀ ಎಂಟರ್ಟೇನ್ಮೆಂಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.