ಸಾಲ ಮನ್ನಾಕ್ಕೆ ಆಗ್ರಹಿಸಿ ಫೆ.23ಕ್ಕೆ ಸಂಸತ್ ಮುತ್ತಿಗೆ
Team Udayavani, Dec 30, 2017, 6:25 AM IST
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಹಾಗೂ ಡಾ|ಎಂ.ಎಸ್.ಸ್ವಾಮಿನಾಥನ್ ವರದಿ
ಜಾರಿಗೆ ಒತ್ತಾಯಿಸಿ ಫೆಬ್ರವರಿ 23ಕ್ಕೆ ಸಂಸತ್ ಭವನ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಹೇಳಿದ್ದಾರೆ.
ಶುಕ್ರವಾರ ಗಾಂಧಿಭವನದಲ್ಲಿ ರೈತ ಮುಖಂಡರ ಜತೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಫೆ.23ರಂದು ದೇಶಾದ್ಯಂತ ರೈತರು ದೆಹಲಿಗೆ ಆಗಮಿಸಲಿದ್ದು, ರಾಷ್ಟ್ರೀಯ ಕಿಸಾನ್ ಮಹಾಸಭಾ ನೇತೃತ್ವದಲ್ಲಿ ಸಂಸತ್ ಭವನ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಕರ್ನಾಟಕ ದಿಂದಲೂ ಹೆಚ್ಚಿನ ಸಂಖ್ಯೆಯ ರೈತರು ದೆಹಲಿಗೆ ತೆರಳಿ ಮುತ್ತಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಕಬ್ಬಿನ ಬೆಲೆಯನ್ನು ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ಸೇರಿಸುವುದು, ಕಬ್ಬಿನ ದರವನ್ನು 8.5 ಇಳುವರಿ ಆಧಾರದ ಮೇಲೆ ಎಫ್ಆರ್‌ಪಿ ನಿಗದಿ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು.
ಗುಜರಾತ್‌ನಲ್ಲಿ ಪ್ರತಿಟನ್ ಕಬ್ಬಿಗೆ 4,450 ರೂ. ನೀಡುತ್ತಿದ್ದಾರೆ. ಗುಜರಾತ್‌ನಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದ ತಂಡ ಈಗಾಗಲೇ ಗುಜರಾತ್‌ಗೆ ಭೇಟಿ ನೀಡಿ ಬಂದಿದೆ. ಶೀಘ್ರವೇ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಿದೆ ಎಂದರು. ಮಹದಾಯಿ ನದಿ ನೀರಿನ ವಿವಾದವನ್ನು ರಾಜಕೀಯ ಪಕ್ಷಗಳು ಮತ ಬ್ಯಾಂಕ್ ಮಾಡಿಕೊಳ್ಳಲು ಯತ್ನಿಸದೇ ಪ್ರಾಮಾಣಿಕತೆಯಿಂದ ಸಮಸ್ಯೆಯನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ, ಮುಂದಿನ ಚುನಾವಣೆಯಲ್ಲಿ ರೈತರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು