ಸಿಎಂ ಸಿದ್ದರಾಮಯ್ಯ ಜಾತಿವಾದಿ: ಬಿಎಸ್ವೈ
Team Udayavani, Dec 30, 2017, 7:00 AM IST
ತೀರ್ಥಹಳ್ಳಿ: ಹಣ, ತೋಳು ಬಲ, ಅಧಿಕಾರ ಬಲ ಮತ್ತು ಜಾತಿ, ಧರ್ಮಗಳನ್ನು ಒಡೆದಾಳುವ ಮೂಲಕ ನೆಮ್ಮದಿಯಿಂದ ಇದ್ದ ಸಮಾಜದ ಸಾಮರಸ್ಯ ಕದಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ತಾವು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ನಿಜವಾಗಿ ಜಾತಿವಾದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಉಳುವವನೇ ಹೊಲದೊಡೆಯ ಎಂದ ದೇವರಾಜ ಅರಸು ಹಿಂದುಳಿದ ಜಾತಿ, ವರ್ಗಗಳನ್ನು ಪ್ರಾಮಾಣಿಕವಾಗಿ ಮೇಲೆತ್ತಿದ್ದರು. ಆದರೆ, ಸಿದ್ದರಾಮಯ್ಯ ಅವರ ಸಮಾಜವಾದ ಕೇವಲ ಅ ಧಿಕಾರ ಮಾತ್ರ ಪಡೆಯಲು ಕೇಂದ್ರೀಕೃತವಾಗಿದೆ. ರಾಜ್ಯದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಗೆ ದೊರಕುತ್ತಿರುವ ಬೆಂಬಲ ಕಂಡು ಅವರು ವಿಚಲಿತರಾಗಿದ್ದಾರೆ ಎಂದರು.
ಇಡೀ ದೇಶದಲ್ಲಿ ಕಾಂಗ್ರೆಸ್ನ ಆಳ್ವಿಕೆಯಿರುವ ರಾಜ್ಯವೆಂದರೆ ಕರ್ನಾಟಕ ಮಾತ್ರ. ಸಿದ್ದರಾಮಯ್ಯರ ದುರಾಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ತನ್ನ ಕೊನೆಗಾಲವನ್ನು ಸಮೀಪಿಸಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯುವುದು ಶತಃಸಿದ್ಧ. ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯ ಮಾಡುವುದು ನಮ್ಮ ಗುರಿ. ಸಿದ್ದರಾಮಯ್ಯನವರು ಅಚ್ಛೇ ದಿನ್ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಅಚ್ಛೇ ದಿ ನ್ ಬಂದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮನೆಗೆ ಹೋದ ದಿನ ಅಚ್ಛೇ ದಿ ನ್ ಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.