ಕೈ ಕಚೇರಿ ಮುಂದೆ ಪ್ರತಿಭಟನೆ : ಬಿಜೆಪಿ ವಿರುದ್ಧ ವಾಗ್ಧಾಳಿ
Team Udayavani, Dec 30, 2017, 6:30 AM IST
ಬೆಂಗಳೂರು: ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಹದಾಯಿ ವಿಚಾರವನ್ನು ಬಿಜೆಪಿ
ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಕಾಂಗ್ರೆಸ್ ಕಚೇರಿ ಮುಂದೆ ಬಂದು ಪ್ರತಿಭಟನೆ
ಮಾಡುವ ಅಗತ್ಯ ಏನಿತ್ತು. ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಗೋವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಬದಲು ಯಡಿಯೂರಪ್ಪಗೆ ಪತ್ರ ಬರೆದಿದ್ದು ಯಾಕೆ ? ಇದರಿಂದಲೇ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಗೊತ್ತಾಗುತ್ತದೆಂದು ದೂರಿದರು. ನೀರಿನ ಸಮಸ್ಯೆ ಬಗೆಹರಿಸಲು ಯಡಿಯೂರಪ್ಪ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಈ ಬಗ್ಗೆ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಜೊತೆಗೂ ಚರ್ಚಿಸಬೇಕಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೂ ಪತ್ರ ಬರೆದಿದ್ದರು. ಬಿಜೆಪಿಯವರಿಗೆ ನೀರು ಕೊಡಿಸಬೇಕೆಂಬ ಉದ್ದೇಶವಿಲ್ಲ. ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಕೆಂಬುವುದಷ್ಟೇ ಅವರ ಉದ್ದೇಶ. ಮೊದಲು ಗೋವಾ ಮುಖ್ಯಮಂತ್ರಿ ಒಂದು
ತೀರ್ಮಾನಕ್ಕೆ ಬರಲಿ, ನಂತರ ಗೋವಾ ಕಾಂಗ್ರೆಸ್ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದೆ ಎಂದು ವೇಣುಗೋಪಾಲ್
ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.