‘ಸಂಸ್ಕೃತಿ, ಸಂಪ್ರದಾಯದ ಪ್ರತಿಬಿಂಬ ಕರಾವಳಿ ಉತ್ಸವ’
Team Udayavani, Dec 30, 2017, 12:04 PM IST
ಪಣಂಬೂರು: ಕರಾವಳಿ ಉತ್ಸವದ ಅಂಗವಾಗಿ ಪಣಂಬೂರು ಬೀಚ್‌ನಲ್ಲಿ ಡಿ.31ರ ವರೆಗೆ ನಡೆಯುವ ಬೀಚ್ ಉತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಬೀಚ್ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ರೀಕಾಂತ ರಾವ್ ಅವರು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು.
ನಮ್ಮ ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವದಲ್ಲಿ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ಬೆಂಗಳೂರು, ಉತ್ತರ ಕರ್ನಾಟಕದ ಪ್ರವಾಸಿಗರಿಗೆ ಬೀಚ್ ಉತ್ಸವ ಸವಿಯಲು ಅಪೂರ್ವ ಅವಕಾಶ ಒದಗಿ ಬಂದಿದೆ. ಇಲ್ಲಿನ ಸಂಸ್ಕೃತಿ ಅರಿಯಲು, ವಿಶೇಷ ಆಹಾರ ಪದಾರ್ಥ ಸವಿಯಲು ಅವಕಾಶವಿದೆ ಎಂದರು.
ಸಮಿತಿಯ ಜಯಪ್ಪ, ಆರ್‌ಎಫ್‌ಒ ಶ್ರೀಧರ್, ಪಣಂಬೂರು ಠಾಣಾ ಕ್ರೈಂ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಉಮೇಶ್,
ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿಯ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು. ಶುಕ್ರವಾರ ಕಡಲ ಕಿನಾರೆಯಲ್ಲಿ ಸಂಗೀತ ಸ್ಪರ್ಧೆಯ ಕೊನೆಯ ಸುತ್ತು, ನೃತ್ಯ ಸ್ಪರ್ಧೆ ಜರಗಿತು. ಬೀಚ್ ಉತ್ಸವದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಕಾರ್ಯಕ್ರಮ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.