ದೈಹಿಕ ಸದೃಢತೆಗೆ ಕ್ರೀಡೆಗಳು ಪೂರಕ
Team Udayavani, Dec 30, 2017, 5:26 PM IST
ಯಾದಗಿರಿ: ದೈಹಿಕವಾಗಿ ಸದೃಢಗೊಳ್ಳಲು ಕ್ರೀಡಾ ಚಟುವಟಿಕೆ ಪೂರಕವಾಗಿವೆ ಎಂದು ಜಿಲ್ಲಾ ಧಿಕಾರಿ ಜೆ. ಮಂಜುನಾಥ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2017 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸೇವೆ ಅಪಾರವಾಗಿದ್ದು, ದೈನಂದಿನ ಕರ್ತವ್ಯ ನಿಭಾಯಿಸಿಕೊಂಡು ಹೋಗುವುದರ ಜೊತೆಗೆ ಕ್ರೀಡಾಭಿರುಚಿ ಬೆಳೆಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು. ಮನುಷ್ಯನಲ್ಲಿ ಉತ್ಸಾಹ, ಲವಲವಿಕೆ ತರುವುದಲ್ಲದೆ ಸಾಧನೆಗೆ ಕ್ರೀಡೆಗಳು ಸ್ಫೂ ರ್ತಿದಾಯಕವಾಗಿವೆ.
ರಾಜ್ಯಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಹಾಗೂ ಪೊಲೀಸ್ ಇಲಾಖೆಗೆ ಹೆಸರು ತರಲಿ ಎಂದು ಶುಭ ಹಾರೈಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಹೀಗಾಗಿ ಸಮಾನ ಮನಸ್ಕರೊಂದಿಗೆ ಆಟ ಆಡಬೇಕು. ಪರಸ್ಪರ ವಿಚಾರ ವಿನಿಮಯ ಹಾಗೂ ಒಂದೇ ಕುಟುಂಬದವರು ಎನ್ನುವಂತಹ ಮನೋಭಾವನೆ ಮೂಡಲು ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆಗಳು ಪ್ರತಿ ವರ್ಷದಂತೆ ಈ ವರ್ಷವು ಕೂಡ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಜೆ. ಮಂಜುನಾಥ ಕ್ರೀಡಾ ಜೋತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಡಾ| ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.