ಅಮಿತ ಸಂಚಲನ; ರಾಜ್ಯಕ್ಕೆ ಇಂದು ಅಮಿತ್ ಶಾ
Team Udayavani, Dec 31, 2017, 6:00 AM IST
ಬೆಂಗಳೂರು: ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ನಿರೀಕ್ಷಿಸಲಾಗುತ್ತಿದೆ.ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಮಧ್ಯೆ ಮಹದಾಯಿ ನದಿ ನೀರು ಹಂಚಿಕೆ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ವಿವಾದಗಳಲ್ಲಿ ಒತ್ತಡ ಮತ್ತು ಮುಜುಗರಕ್ಕೆ ಒಳಗಾಗಿರುವ ರಾಜ್ಯ ಬಿಜೆಪಿ ಪಾಲಿಗೆ ಅಮಿತ್ ಶಾ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಭಾನುವಾರ ಬೆಳಗ್ಗೆ ಆಗಮಿಸುತ್ತಿರುವ ಅಮಿತ್ ಶಾ ಅವರು ದಿನವಿಡೀ ಸಭೆ ನಡೆಸಿ ಪಕ್ಷದ ರಾಜ್ಯ ನಾಯಕರಿಗೆ ಹಲವು ನಿರ್ದೇಶನಗಳನ್ನು ನೀಡಲಿದ್ದಾರೆ. ಈ ಸಂದರ್ಭದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಮತ್ತು ಮಹದಾಯಿ ವಿವಾದಗಳಲ್ಲಿ ಇತರೆ ಪಕ್ಷಗಳನ್ನು ಯಾವ ರೀತಿ ಎದುರಿಸಬೇಕು ಎಂಬ ಬಗ್ಗೆ ತಂತ್ರಗಾರಿಕೆಗಳನ್ನು ಸಿದ್ಧಪಡಿಸುವ ಸಾಧ್ಯತೆ ಇದೆ.
ಬೆಳಗ್ಗೆ 1.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ನೇರವಾಗಿ ಯಲಹಂಕ ಸಮೀಪದ ಖಾಸಗಿ ಹೋಟೆಲ…ಗೆ ಆಗಮಿಸಲಿರುವ ಅಮಿತ್ ಶಾ, 11.30ಕ್ಕೆ ವಿಧಾನಸಭೆ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿ ಹೊಂದಿದ್ದ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್ ಸದಸ್ಯರೊಂದಿಗಿನ ಸಭೆ ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 1.30ರವರೆಗೆ ಅವರೊಂದಿಗೆ ಚರ್ಚಿಸಲಿರುವ ಶಾ, ಕಳೆದ ಆಗಸ್ಟ್‌ನಲ್ಲಿ ತಾವುವಹಿಸಿದ್ದ ಕಾರ್ಯಭಾರಗಳನ್ನು ಯಾವ ರೀತಿ ನಿರ್ವಹಿಸಲಾಗಿದೆ, ಎಷ್ಟು ಮಂದಿ ಅದನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಎಂಬಿತ್ಯಾದಿ ಮಾಹಿತಿಗಳನ್ನು ಪಡೆಯಲಿ¨ªಾರೆ. ಜತೆಗೆ ಮುಂದಿನ ಜವಾಬ್ದಾರಿಗಳನ್ನು ತಿಳಿಸಲಿದ್ದಾರೆ.
ಇದಾದ ಬಳಿಕ ಮಧ್ಯಾಹ್ನ 2.30ರಿಂದ ಪಕ್ಷದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರೊಂದಿಗೆ ಪಕ್ಷದ ಪ್ರಸ್ತುತ ಸ್ಥಿತಿಗತಿ, ಎದುರಾಗುತ್ತಿರುವ ಸವಾಲುಗಳು, ಜಿಲ್ಲಾ ಮತ್ತು ವಿಧಾನಸಭಾವಾರು ಮಟ್ಟದಲ್ಲಿ ಸಂಘಟನೆ ಮತ್ತಿತರ ವಿಚಾರಗಳನ್ನು ಚರ್ಚಿಸಲಿ¨ªಾರೆ. ಇದಾದ ಬಳಿಕ ಕೋರ್ ಕಮಿಟಿ ಸದಸ್ಯರೊಂದಿಗೆ ಪಕ್ಷದ ಒಟ್ಟಾರೆ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಿ¨ªಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಸಹ ಉಸ್ತುವಾರಿ ಪುರಂದೇಶ್ವರಿ, ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಚುನಾವಣಾ ಸಹ ಉಸ್ತುವಾರಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಸಭೆಯಲ್ಲಿರುತ್ತಾರೆ.
ಎಚ್ಚರಿಕೆಯ ಹೆಜ್ಜೆ
ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿಗಳನ್ನು ಮನವೊಲಿಸುವಲ್ಲಿ ರಾಜ್ಯ ಬಿಜೆಪಿ ಯಶಸ್ವಿಯಾಗುವ ಮೂಲಕ ಇತಿಹಾಸದಲ್ಲೇ ಉತ್ತಮ ಸಾಧನೆ ಮಾಡಿದೆಯಾದರೂ ಈ ಪ್ರಕರಣವನ್ನು ನಿಭಾಯಿಸಿದ ರೀತಿಯಿಂದ ಎಲ್ಲಾ ಬಣ್ಣವನ್ನು ಮಸಿ ನುಂಗಿತು ಎಂಬಂತಾಗಿ ರಾಜಕೀಯವಾಗಿ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಉತ್ಯುತ್ಸಾಹದ ಹೇಳಿಕೆ. ಈ ಬಗ್ಗೆ ಈಗಾಗಲೇ ಪಕ್ಷದಲ್ಲಿ ಸಾಕಷ್ಟು ಚರ್ಚೆಗಳಾಗದ್ದು, ಭಾನುವಾರ ಅಮಿತ್ ಶಾ ಅವರೊಂದಿಗೂ ಈ ವಿಚಾರ ಚರ್ಚೆಯಾಗುವ ಸಾಧ್ಯತೆ ಇದೆ.
ಮಹದಾಯಿಯಷ್ಟೇ ಬಿಜೆಪಿಯನ್ನು ಕಾಡುತ್ತಿರುವುದು ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ. ಇದುವರೆಗೆ ವಿವಾದದಲ್ಲಿ ಯಾವುದೇ ಬಹಿರಂಗ ಹೇಳಿಕೆ ನೀಡದೆ ಸಿದ್ದಗಂಗಾ ಶ್ರೀಗಳು ಮತ್ತು ಅಖೀಲ ಭಾರತ ವೀರಶೈವ ಮಹಾಸಭಾ ಕೈಗಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಎಚ್ಚರಿಕೆಯಿಂದಲೇ ಹೆಜ್ಜೆಗಳನ್ನು ಇಡುತ್ತಿದೆ. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಈ ಕುರಿತು ನಿರ್ಧಾರ ಕೈಗೊಳ್ಳುವ ಅನಿವಾರ್ಯ ಸ್ಥಿತಿ ಎದುರಾಗಲಿದೆ. ಇಲ್ಲದೇ ಇದ್ದರೆ, ಗುಜರಾತ್‌ನಲ್ಲಿ ಪಾಟೀದಾರ್ ಸಮುದಾಯಕ್ಕೆ ಮೀಸಲು ವಿವಾದದಿಂದ ಬಿಜೆಪಿ ತಂದುಕೊಂಡಿದ್ದ ಅಪಾಯವನ್ನು ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದದಲ್ಲಿ ತಂದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಬಹುದು. ಹೀಗಾಗಿ ಇದಕ್ಕೂ ಮ¨ªೆರೆಯುವ ಬಗ್ಗೆ ಭಾನುವಾರದ ಸಭೆಯಲ್ಲಿ ಚರ್ಚೆಯಾಗಲಿದೆ.
ಹೆಚ್ಚುತ್ತಿದೆ ಆತಂಕ
ಈ ಮಧ್ಯೆ ಕಳೆದ ಆಗಸ್ಟ್ ತಿಂಗಳಲ್ಲಿ ತಾವು ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಕ್ಷದ ನಾಕರು, ಟಿಕೆಟ್ ಆಕಾಂಕ್ಷಿಗಳು, ಹಾಲಿ ಶಾಸಕರಿಗೆ ನೀಡಿದ್ದ ಟಾಸ್ಕ್ಗಳ ಬಗ್ಗೆಯೂ ಅಮಿತ್‌ಶಾ ಪರಿಶೀಲನೆ ನಡೆಸಲಿ¨ªಾರೆ. ಹೀಗಾಗಿ ಈ ಟಾಸ್ಕ್ಗಳನ್ನು ಸರಿಯಾಗಿ ನಿರ್ವಹಿಸದ ಮುಖಂಡರಲ್ಲಿ ಆಂತಕ ಕಾಣಿಸಿಕೊಂಡಿದೆ. ತಾವು ಕಳೆದ ಬಾರಿ ಬೆಂಗಳೂರಿಗೆ ಬಂದು ಹೋದ ಬಳಿಕ ರಾಜ್ಯಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿ ಮುಖಂಡರು ಚುರುಕಾಗಿ ಕೆಲಸ ಮಾಡುತ್ತಿರುವುದು ಶಾ ಅವರಲ್ಲಿ ಸ್ವಲ್ಪ$ ಮಟ್ಟಿನ ಸಮಾಧಾನ ತಂದಿದೆ. ಆದರೆ, ಆಂತರಿಕವಾಗಿ ಭಿನ್ನಮತ ಇನ್ನೂ ಸ್ವಲ್ಪ ಮಟ್ಟಿಗೆ ಉಳಿದಿರುವುದು ರಾಜ್ಯ ನಾಯಕರಲ್ಲಿ ಶಾ ಆಗಮನದ ಬಗ್ಗೆ ಇದ್ದ ಆಂತಕವನ್ನು ಹೆಚ್ಚಿಸಿದೆ.
ಮಾಹಿತಿ ಸಂಗ್ರಹ:
ಶನಿವಾರ ಸಂಜೆ ಬಿಜೆಪಿ ಮುಖಂಡರ ಸಭೆ ನಡೆಸಿದ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಬಿಜೆಪಿ ಚುನಾವಣಾ ಸಿದ್ಧತೆ, ಪರಿವರ್ತನಾ ಯಾತ್ರೆ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಹಲವು ಮಾಹಿತಿಯನ್ನು ರಾಜ್ಯ ಮುಖಂಡರಿಂದ ಪಡೆದಿದ್ದಾರೆ. ಈ ಹಿಂದೆ ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ನೀಡಿದ್ದ ಟಾಸ್ಕ್ಗಳ ಅನುಷ್ಠಾನದ ಬಗ್ಗೆಯೂ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.
ಶಾ ಏನೇನು ಮಾಡ್ತಾರೆ?
– ರಾಜ್ಯದಲ್ಲಿ ಬೂತ್ ಕಮಿಟಿಗಳ ರಚನೆ ಮತ್ತು ಬೂತ್ ಮಟ್ಟದಲ್ಲಿ ಸಂಘಟನೆ ಕುರಿತು ತಾವು ಈ ಹಿಂದೆ ನೀಡಿದ ಸೂಚನೆಗಳನ್ನು ಪಾಲಿಸಲಾಗಿದೆಯೇ ಎಂದು ಪರಿಶೀಲನೆ.
– ಉದ್ಘಾಟನೆೆ ವೇಳೆ ವೈಫಲ್ಯದ ಹಣೆಪಟ್ಟಿ ಅಂಟಿಸಿಕೊಂಡ ಪರಿವರ್ತನಾ ಯಾತ್ರೆ ನಂತರದಲ್ಲಿ ಸರಿಯಾಗಿ ನಡೆಯುತ್ತಿದೆಯೇ ಮುಖಂಡರು ಭಾಗವಹಿಸುತ್ತಿದ್ದಾರೆಯೇ ಎಂದು ತಿಳಿದುಕೊಳ್ಳುವುದು.
– ಲಿಂಗಾಯತ ಪ್ರತ್ಯೇಕ ಧರ್ಮ ಮತ್ತು ಮಹದಾಯಿ ವಿವಾದಗಳಲ್ಲಿ ಸಿಲುಕಿಕೊಂಡಿರುವ ಪಕ್ಷದ ಮೇಲೆ ಚುನಾವಣೆಯಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳಲು ಕಾರ್ಯತಂತ್ರ ಸಿದ್ಧಪಡಿಸುವುದು.
– ಚುನಾವಣೆ ಸಮೀಪಿಸುತ್ತಿರುವುದರಿಂದ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಹೇಗೆ ಸಂಘಟನೆ ಕೆಲಸ ನಡೆಯುತ್ತಿದೆ. ಅಭ್ಯರ್ಥಿ ಆಕಾಂಕ್ಷಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಅಗತ್ಯ ಮಾಹಿತಿ ಸಂಗ್ರಹಿಸುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.