ಮತ್ತೆ ವಿಮಾನ ಹಾರಾಟಕ್ಕೆ ತೊಡಕಾದ ದಟ್ಟ ಮಂಜು

Team Udayavani, Dec 31, 2017, 12:32 PM IST

datta-manju.jpg

ಬೆಂಗಳೂರು: ದಟ್ಟ ಮಂಜು ಆವರಿಸಿದ್ದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್‌) ಕೇವಲ ವಾರದ ಅಂತರದಲ್ಲಿ 8 ವಿಮಾನಗಳ ಹಾರಾಟ ರದ್ದಾಗಿದೆ. ಜತೆಗೆ 102 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಯಿತು.  

ಶನಿವಾರ ಬೆಳಗಿನಜಾವ ನಿಲ್ದಾಣದ ಸುತ್ತ ದಟ್ಟ ಮಂಜು ಕವಿದಿದ್ದರಿಂದ 44 ವಿಮಾನಗಳ ಆಗಮನ ಮತ್ತು 58 ವಿಮಾನಗಳ ನಿರ್ಗಮನದಲ್ಲಿ ಸುಮಾರು ಎರಡು-ಮೂರು ತಾಸು ವಿಳಂಬವಾಯಿತು. ಇದಲ್ಲದೆ, ನಾಲ್ಕು ಆಗಮನ ಮತ್ತು ನಾಲ್ಕು ನಿರ್ಗಮನ ಸೇರಿ ಇಂಡಿಗೊಗೆ ಸೇರಿದ ಎಂಟು ವಿಮಾನಗಳ ಹಾರಾಟ ರದ್ದುಗೊಂಡಿತು. ಹಾಗೂ ಮೂರು ವಿಮಾನಗಳು ಚೆನ್ನೈ ನಿಲ್ದಾಣದತ್ತ ಮುಖಮಾಡಿದವು. ಪರಿಣಾಮ ಪ್ರಯಾಣಿಕರು ಪರದಾಡಿದರು.

ದೂರದ ರಾಜ್ಯಗಳಿಗೆ ತಲುಪಬೇಕಿದ್ದ ಪ್ರಯಾಣಿಕರಿಗೆ ಬೆಳಿಗ್ಗೆ 10ರ ನಂತರ ಪರ್ಯಾಯ ವಿಮಾನಗಳ ವ್ಯವಸ್ಥೆ ಮಾಡಲಾಯಿತು. ಕೆಲವರಿಗೆ ಪ್ರಯಾಣ ದರವನ್ನು ಮರಳಿಸಲಾಯಿತು. ಇದರಿಂದ ಹೊಸ ವರ್ಷಾಚರಣೆಗೆ ಹೊರಟಿದ್ದ ಪ್ರಯಾಣಿಕರು ಅಡಚಣೆಯಾಯಿತು. ಕೆಲವೇ ದಿನಗಳ ಅಂತರದಲ್ಲಿ ಸತತ ಎರಡನೇ ಬಾರಿ ಈ ರೀತಿ ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದರು. 

ಕಾಣುತ್ತಿದ್ದುದು ಕೇವಲ 50 ಮೀ.!: “ಸಾಮಾನ್ಯವಾಗಿ ವಿಮಾನಗಳು ಟೇಕ್‌ಆಫ್ ಆಗಲು 550 ಮೀ. ಹಾಗೂ ರನ್‌ವೇಗೆ ಇಳಿಯುವಾಗ 400 ಮೀ. ದೂರದವರೆಗೆ ಸ್ಪಷ್ಟವಾಗಿ ಕಾಣುವಂತಿರಬೇಕು. ಆದರೆ, ಶುಕ್ರವಾರ ರಾತ್ರಿ 10.30ರಿಂದ ಶನಿವಾರ ಬೆಳಗ್ಗೆ 8.30ರವರೆಗೆ ಈ ವಿಜಿಬಿಲಿಟಿ ಕೇವಲ 50 ಮೀ. ಇತ್ತು’ ಎಂದು ಹವಾಮಾನ ಇಲಾಖೆ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ. 

ಚಳಿಗಾಲದ ಸಂದರ್ಭದಲ್ಲಿ ಇದು ಸಹಜ ಪ್ರಕ್ರಿಯೆ. ಕಳೆದ ವಾರ ಕೂಡ ಇದು ಆಗಿತ್ತು ಎಂದೂ ಅವರು ಸ್ಪಷ್ಟಪಡಿಸಿದರು. ಡಿ. 24ರಂದು ಎಂಟು ವಿಮಾನಗಳ ಹಾರಾಟ ರದ್ದಾಗಿತ್ತು. 98 ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.