ಗ್ರಾಹಕರ ವೇದಿಕೆಯಿಂದ ಸಮಸ್ಯೆಗೆ ಶೀಘ್ರ ಪರಿಹಾರ: ಶರಣಪ್ಪ


Team Udayavani, Jan 1, 2018, 12:06 PM IST

gul-7.jpg

ಕಲಬುರಗಿ: ಗ್ರಾಹಕರು ವಸ್ತು ಮತ್ತು ಸೇವೆಯಲ್ಲಿ ಪೂರೈಸುವ ಸಂಸ್ಥೆಗಳಿಂದ ಅನ್ಯಾಯಕ್ಕೊಳಗಾದಲ್ಲಿ ಗ್ರಾಹಕರ ಹಕ್ಕುಗಳ ವೇದಿಕೆ ಮೂಲಕ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾ ಗ್ರಾಹಕರ ಹಕ್ಕುಗಳ ವೇದಿಕೆ ಅಧ್ಯಕ್ಷ ಶರಣಪ್ಪ ಎನ್‌. ಕರೆ ನೀಡಿದರು.

ನಗರದ ಹಳೆ ಎಸ್‌ಪಿ ಕಚೇರಿ ಎದುರಿಗಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಗ್ರಾಹಕರ ಹಿತರಕ್ಷಣಾ ವೇದಿಕೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಮಹಾತ್ಮಾ ಗಾಂಧೀಜಿ ಗ್ರಾಹಕರ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಗ್ರಾಹಕರ ಹಕ್ಕುಗಳು ಮತ್ತು ರಕ್ಷಣೆ’ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರ ಹಕ್ಕುಗಳನ್ನು ಕಾಪಾಡಲೆಂದೇ ಪ್ರತಿ ಜಿಲ್ಲೆಯಲ್ಲಿ ಗ್ರಾಹಕರ ಹಕ್ಕುಗಳ ವೇದಿಕೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ 20 ಲಕ್ಷ ರೂ. ವರೆಗಿನ ಪರಿಹಾರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. 20 ಲಕ್ಷ ರೂ. ಗಳಿಂದ 1 ಕೋಟಿ ರೂ. ವರೆಗಿನ ಪ್ರಕರಣಗಳನ್ನು ರಾಜ್ಯ ಮಟ್ಟದ ಗ್ರಾಹಕರ ಹಕ್ಕುಗಳ ವೇದಿಕೆಯಲ್ಲಿ ಮತ್ತು ಅದಕ್ಕೂ ಮೇಲ್ಪಟ್ಟ ಪ್ರಕರಣಗಳನ್ನು ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ವೇದಿಕೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಹೇಳಿದರು.

ಮಹಾತ್ಮ ಗಾಂಧಿಧೀಜಿ ಗ್ರಾಹಕರ ಹಿತರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ವೈಜನಾಥ ಝಳಕಿ ಮಾತನಾಡಿ, ಗ್ರಾಹಕರ ಹಕ್ಕುಗಳು ಮತ್ತು ರಕ್ಷಣೆ ಕುರಿತು ಉಪನ್ಯಾಸ ನೀಡಿದರು. 

ಕಲಬುರಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್‌.ಕೆ.ಹಿರೇಮಠ ಮಾತನಾಡಿ, ಸಮಾಜದಲ್ಲಿ ಕಾಲಕಾಲಕ್ಕೆ ಉಂಟಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸನಗಳನ್ನು ತರುವುದು ಸರ್ವೇ ಸಾಮಾನ್ಯ. ಇಂತಹ ಕಾನೂನುಗಳ ಬಗ್ಗೆ ಅರಿವಿದ್ದಾಗ ಮಾತ್ರ ಅನ್ಯಾಯಕೊಳ್ಳಗಾಗುವುದು ವಿರಳ ಎಂದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌.ಮಾಣಿಕ್ಯ ಮಾತನಾಡಿ ಕಾನೂನು ಪರಿಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಈಶ್ವರಪ್ಪ ನೀರಡಗಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಾಜಿ ಪಾಟೀಲ ಹಾಜರಿದ್ದರು. ಶಿಕ್ಷಕಿ ರೇಣುಕಾ ಡಾಂಗೆ ಸ್ವಾಗತಿಸಿದರು, ಶಿಕ್ಷಕಿ ಸುಜಾತಾ ಹವಾಲ್ದಾರ ನಿರೂಪಿಸಿದರು. ವಿದ್ಯಾರ್ಥಿನಿ ಪ್ರಿಯಾಂಕಾ ಪ್ರಾರ್ಥನಾ ಗೀತೆ ಹಾಡಿದರು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.