ಸತ್ಕರ್ಮಗಳಿಂದ ಪುಣ್ಯಪ್ರಾಪ್ತಿ: ಒಡಿಯೂರು ಶ್ರೀ


Team Udayavani, Jan 1, 2018, 1:56 PM IST

01-23.jpg

ಮಂಗಳೂರು: ವ್ಯಕ್ತಿಯ ಬದುಕಿನಲ್ಲಿ ಸಮಸ್ಯೆಗಳು ಸಾಮಾನ್ಯವಾಗಿದ್ದು, ಆತ್ಮವಿಶ್ವಾಸವೇ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಿದೆ. ಆದರ್ಶಗಳನ್ನು ಬದುಕಿನ ಉಸಿರಾಗಿಸಿಕೊಂಡು ಸತ್ಕರ್ಮಗಳನ್ನು ಮಾಡಿದಾಗ ಭಗವಂತನ ಕೃಪೆಯಿಂದ ಪುಣ್ಯ ಪ್ರಾಪ್ತವಾಗುತ್ತದೆ ಎಂದು ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು.

ಅವರು ರವಿವಾರ ನಗರದ ಪುರಭವನದಲ್ಲಿ ನಡೆದ ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಮಂಗಳೂರು ವಲಯದ 12ನೇ ವಾರ್ಷಿಕೋತ್ಸವ, ಶ್ರೀ ಗುರುಪಾದುಕಾರಾಧನೆ ಹಾಗೂ 100 ಮಂದಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಕಡಲಿನಂತಿರೋಣ
ಕರಾವಳಿ ಭಾಗದ ನಾವು ಕಡಲನ್ನು ಗುರುವಾಗಿ ಸ್ವೀಕರಿಸಬೇಕು. ಕಡಲುಕ್ರಿಯಾಶೀಲತೆಗೆ ಉತ್ತಮ ಉದಾಹರಣೆಯಾಗಿದ್ದು, ಇದರಿಂದ ಜೀವನ ಸಾರ್ಥಕವಾಗುತ್ತದೆ. ಎಲ್ಲೋ ಒಂದು ಕಡೆ ರಾಮ ಮಂದಿರ ನಿರ್ಮಾಣಕ್ಕಿಂತಲೂ ಪ್ರತಿಯೊಬ್ಬರ ಮನಸ್ಸಿನಲ್ಲೂ ಮಂದಿರ ನಿರ್ಮಾಣವಾದರೆ ರಾಷ್ಟ್ರ ಪ್ರೇಮವೂ ಬೆಳೆಯುತ್ತದೆ. ತುಳು ಭಾಷೆ ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ ರಾಜಕೀಯ ಇಚ್ಛಾ
ಶಕ್ತಿ ಅಥವಾ ತುಳುವರ ಇಚ್ಛಾಶಕ್ತಿಯ ಕೊರತೆಯಿಂದ ಇನ್ನೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡಿಲ್ಲ. ಇದಕ್ಕಾಗಿ ಎಲ್ಲರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ತುಳುವಿಗೆ ಸಾಂವಿಧಾನಿಕ ಮಾನ್ಯತೆ ಲಭ್ಯವಾಗಲಿದೆ ಎಂದು ಸ್ವಾಮೀಜಿ ಆಶಿಸಿದರು.

ಒಡಿಯೂರು ಕ್ಷೇತ್ರದಲ್ಲಿ ನಡೆಯಲಿರುವ ತುಳುನಾಡ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಶ್ರೀಗಳು ಬಿಡುಗಡೆಗೊಳಿಸಿದರು. 
ಅತಿಥಿಗಳಾಗಿ ಸಾಧ್ವಿ  ಶ್ರೀ ಮಾತಾನಂದಮಯಿ, ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್‌. ಗಣೇಶ್‌ ರಾವ್‌, ಉದ್ಯಮಿಗಳಾದ ಮಹಾಬಲ ಕೊಟ್ಟಾರಿ, ಜಯಶೀಲ ಅಡ್ಯಂತಾಯ ಅಡ್ಯಾರುಗುತ್ತು, ಕೆ. ಯತೀಶ ಸಾಲ್ಯಾನ್‌, ಕೆ. ಅಚ್ಯುತ ಭಟ್‌, ಜಗನ್ನಾಥ ಶೆಟ್ಟಿ, ನ್ಯಾಯವಾದಿ ಅನಿತಾ ಕಿಣಿ, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್‌, ಬಳಗದ ಗೌರವ ಸಲಹೆಗಾರ ಟಿ. ತಾರಾನಾಥ ಕೊಟ್ಟಾರಿ ಭಾಗವಹಿಸಿದ್ದರು.

ಸೇವಾ ಬಳಗದ ಮಂಗಳೂರು ಅಧ್ಯಕ್ಷ ಜಯಂತ ಜೆ. ಕೋಟ್ಯಾನ್‌ ಸ್ವಾಗತಿಸಿದರು. ಪ್ರಾಧ್ಯಾಪಕ ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿ ಅವರ ಉಪಸ್ಥಿತಿಯಲ್ಲಿ ಭಜನ ಸಂಕೀರ್ತನೆ ನಡೆಯಿತು.

ಗೌರವ, ನೆರವು ವಿತರಣೆ
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ಹೈನುಗಾರರು, ಮಹಿಳಾ ಕಲಾವಿದರು, ಸಮಾಜ ಸೇವಕರು, ಕೃಷಿಕರನ್ನು ಗೌರವಿಸಲಾಯಿತು. ಅಶಕ್ತರಿಗೆ ಕೃತಕ ಕಾಲು ಹಾಗೂ ಗಾಲಿ ಕುರ್ಚಿ ವಿತರಿಸಲಾಯಿತು ವಿದ್ಯಾರ್ಥಿಗಳು ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ ವಿತರಿಸ ಲಾಯಿತು.

ಟಾಪ್ ನ್ಯೂಸ್

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.