ಮಂಗಳೂರು ಉತ್ತರ ಅಭಿವೃದ್ಧಿ: ಪುದುಚೇರಿ ಸಿಎಂ ಶ್ಲಾಘನೆ


Team Udayavani, Jan 1, 2018, 2:23 PM IST

01-29.jpg

ಸುರತ್ಕಲ್‌: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಸುರತ್ಕಲ್‌ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ರಾಜ್ಯ ಸರಕಾರ ಹಿಂದುಳಿದ ವರ್ಗ, ಪ.ಜಾತಿ, ಪ.ಪಂಗಡಗಳಿಗೆ ಸಾಕಷ್ಟು ಅನುದಾನ ಘೋಷಿಸಿ ವಿವಿಧ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಎಂದು ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಹೇಳಿದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಸುರತ್ಕಲ್‌ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಆಯೋಜಿಸಲಾದ ಹೊಸ ವರ್ಷದ ಸೌಹಾರ್ದ ಸಂಭ್ರಮಾಚರಣೆ 2017ರ ಸಂಗಮ ಹಾಗೂ 2018ರ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪುದುಚೇರಿಯಲ್ಲಿ 15 ಲಕ್ಷ ಜನ ಸಂಖ್ಯೆಯಿದ್ದು, ಬಡ ವರ್ಗಕ್ಕೆ ಪ್ರತೀ ತಿಂಗಳು 20 ಕೆ.ಜಿ. ಅಕ್ಕಿ ವಿತರಣೆ, ಸ್ವ ಉದ್ಯೋಗಕ್ಕಾಗಿ ಆರ್ಥಿಕ ಅನುದಾನ, ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ಮತ್ತಿತರ ಸೌಲಭ್ಯಗಳನ್ನು ಸರಕಾರ ಒದಗಿಸು ತ್ತಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ
ನೀಡಲಾಗಿದ್ದು, ಈ ಬಾರಿ 1 ಲಕ್ಷ ಪ್ರವಾಸಿಗರು ಆಗಮಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೀರೆ, ಮುಖ್ಯಮಂತ್ರಿ ಆರೋಗ್ಯ ನಿಧಿ , ಗಂಗಾ ಕಲ್ಯಾಣ ಕೊಳವೆ ಯೋಜನೆ ಮತ್ತಿತರ ಸೌಲಭ್ಯಗಳನ್ನು ವಿತರಿಸಲಾಯಿತು. ಶಾಸಕ ಮೊದಿನ್‌ ಬಾವಾ ಪ್ರಸ್ತಾವನೆಗೈದರು. ಮಾಜಿ ಕೇಂದ್ರ ಸಚಿವ ಆಸ್ಕರ್‌ ಫೆರ್ನಾಂಡಿಸ್‌, ಶ್ರೀ ಕ್ಷೇತ್ರ ಕಟೀಲಿನ ಅನಂತ ಆಸ್ರಣ್ಣ, ಚೊಕ್ಕಬೆಟ್ಟು ಮಸೀದಿಯ ಅಜೀಜ್‌ ದಾರಿಮಿ, ಸುರತ್ಕಲ್‌ ಚರ್ಚ್‌ನ ಧರ್ಮಗುರು ಪೌಲ್‌ ಪಿಂಟೋ, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪುರುಷೋತ್ತಮ ಚಿತ್ರಾಪುರ, ಸುರತ್ಕಲ್‌ ವಿಧಾನಸಭಾ ಕ್ಷೇತ್ರದ ಕೇಶವ ಸನಿಲ್‌, ಗುರುಪುರ ಬ್ಲಾಕ್‌ನ ಸುರೇಂದ್ರ ಕಾಂಬ್ಳಿ, ಉಪಮೇಯರ್‌ ರಜನೀಶ್‌, ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್‌ ಸತ್ತಾರ್‌, ರಾಜ್ಯ ಮಹಿಳಾ ಕಾರ್ಯದರ್ಶಿ ಪ್ರತಿಭಾ ಕುಳಾಯಿ, ವೈ. ರಾಘವೇಂದ್ರ ರಾವ್‌, ನವೀನ್‌ ಡಿ’ಸೋಜಾ, ಅಬ್ದುಲ್‌ ಗಫ‌ೂರ್‌, ಕುಮಾರ್‌ ಮೆಂಡನ್‌, ಬಶೀರ್‌ ಅಹ್ಮದ್‌, ಅಶೋಕ್‌ ಶೆಟ್ಟಿ, ದೀಪಕ್‌ ಪೂಜಾರಿ, ಗಿರೀಶ್‌ ಆಳ್ವ, ಅಪ್ಪಿ, ಮಂಗಳೂರು ಬಾವಾ ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 4 ಕೋಟಿ ರೂ. ಮೊತ್ತದ ವಿವಿಧ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಇದೇ ಸಂದರ್ಭ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆ ಹಾಗೂ 1.5 ಕೋಟಿ ರೂ. ವೆಚ್ಚದಲ್ಲಿ ಗುಡ್ಡೆಕೊಪ್ಲ ಸುರತ್ಕಲ್‌ ರಸ್ತೆಯ ಕಾಂಕ್ರಿಟೀಕರಣಕ್ಕೆ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಶಿಲಾನ್ಯಾಸ ನೆರವೇರಿಸಿದರು.

ಟಾಪ್ ನ್ಯೂಸ್

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

5

Mangaluru: ಇಂದು ಕ್ರಿಸ್ಮಸ್‌ ಜಾಗರಣೆ ವಿಶೇಷ ಬಲಿಪೂಜೆ

2

Mangaluru; ಒಡಿಶಾದ ಗುಜ್ಜೆದೋಸೆ ಈಗ ಕರಾವಳಿಯಲ್ಲೂ ಪ್ರಯೋಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.