ರಾಮಕುಂಜ ಸಂಸ್ಕೃತ ಹಿ.ಪ್ರಾ. ಶಾಲೆಯ 99ನೇ ವಾರ್ಷಿಕೋತ್ಸವ
Team Udayavani, Jan 1, 2018, 3:46 PM IST
ಕಡಬ: ಪ್ರಪಂಚಕ್ಕೆ ಶಾಂತಿ ಸಂದೇಶ ಸಾರುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ. ವಿಶ್ವದಲ್ಲೇ ಉನ್ನತ ಸ್ಥಾನದಲ್ಲಿರುವ ಭಾರತೀಯ ಸಂಸ್ಕೃತಿಗೆ ಋಷಿ-ಮುನಿಗಳೇ ಪ್ರೇರಕ ಶಕ್ತಿ ಎಂದು ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರು ನುಡಿದರು.
ರಾಮಕುಂಜದ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಪಾಠಶಾಲೆಯ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ, ಆಶೀರ್ವಚನವಿತ್ತ ಶ್ರೀಗಳು, ವ್ಯಕ್ತಿತ್ವ ನಿರ್ಮಾಣಕ್ಕೆ
ಭಾಷಾ ಮಾಧ್ಯಮವೊಂದೇ ಕಾರಣವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತ ಯು.ಆರ್. ರಾವ್ ಸಹಿತ ಹಲವರು ದೊಡ್ಡ ವಿಜ್ಞಾನಿಗಳಾಗಿದ್ದಾರೆ. ಲೋಕಮಾನ್ಯ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಹುಟ್ಟೂರು ಹಾಗೂ ಕಲಿತ ಶಾಲೆ ಇದು. ಮುಂದಿನ ವರ್ಷ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಗಳು ಅರ್ಥಗರ್ಭಿತವಾಗಿ ನಡೆಯಲಿ ಎಂದು ಆಶಿಸಿದರು. ಪೆರಾಬೆಯಿಂದ ನಡೆದುಕೊಂಡೇ ಬಂದು ಇಲ್ಲಿ ಶಿಕ್ಷಣ ಪಡೆದಿರುವುದನ್ನು ಸ್ಮರಿಸಿದ ಸ್ವಾಮೀಜಿ, ಈ ಶಾಲೆಯಲ್ಲಿ ಕಲಿತ ವಿದ್ಯಾಭ್ಯಾಸ ಜೀವನ ಪಾಠ ಕಲಿಸಿದೆ ಎಂದು ಸ್ಮರಿಸಿಕೊಂಡರು.
ಹಿರಿಯ ವಿದ್ಯಾರ್ಥಿ, ಜ್ಯೋತಿಷಿ ಎನ್. ರಾಮ ಮೂರ್ತಿ ಆಚಾರ್ಯ ಮಾತನಾಡಿ, ಶಾಲಾ ವಾರ್ಷಿಕೋತ್ಸವ ಊರಿಗೆ ಹಬ್ಬ. ಇದರಿಂದ ಊರ ವರಿಗೆ, ಹೆತ್ತವರಿಗೆ ಶಾಲೆಯ ಚಟುವಟಿಕೆ ಪರಿಚಯವಾಗುತ್ತದೆ. ಟಿ. ನಾರಾಯಣ ಭಟ್ಟರ
ಮುತುವರ್ಜಿಯಿಂದ ಶಾಲೆ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿರುವ ಹೊಟೇಲ್ ಬೃಂದಾವನದ ಆಡಳಿತ ನಿರ್ದೇಶಕ ಶ್ರೀಧರ ಪಡ್ಡಿಲ್ಲಾಯ ಮಾತನಾಡಿ, ಮಕ್ಕಳು ಮೊಬೈಲ್ ಬಿಟ್ಟು ಪುಸ್ತಕ ಓದಿದಲ್ಲಿ ಭವಿಷ್ಯದಲ್ಲಿ ಹೆಚ್ಚು ಪ್ರಯೋಜನಕ್ಕೆ ಬರಲಿದೆ ಎಂದು ಸಲಹೆ ನೀಡಿದರು.
ಬೆಂಗಳೂರಿನ ರಾಯಲ್ ಹೈಸ್ಕೂಲ್ ಮುಖ್ಯ ಶಿಕ್ಷಕಿ ಆಶಾ ಶಂಕರನಾರಾಯಣ, ಉಪ್ಪಿನಂಗಡಿಯಲ್ಲಿ ಡೆಂಟಲ್ ಸರ್ಜನ್ ಆಗಿರುವ ಡಾ| ಸುಪ್ರೀತಾ ರೈ, ಬೆಂಗಳೂರಿನ ಮೇಯರ್ ಅರ್ಗಾನಿಕ್ಸ್‌ನ ಜತ್ತಪ್ಪ ಆರ್. ತಮ್ಮ ಶಾಲಾ ಜೀವನ ನೆನಪಿಸಿಕೊಂಡರು. ಶಂಕರನಾರಾಯಣ ಬೆಂಗಳೂರು, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿ, ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ. ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತೀಶ್ ಭಟ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಸಾಧಕ ಹಿರಿಯ ವಿದ್ಯಾರ್ಥಿಗಳನ್ನು ಶ್ರೀಗಳು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಕಲಿಕೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಾಟಕ ಕಲಾವಿದರು, ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.
ಶಿಕ್ಷಕಿ ನಿರ್ಮಲಾ ದೇವಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶಾಲಾ ಮುಖ್ಯ ಶಿಕ್ಷಕ ಟಿ. ನಾರಾಯಣ ಭಟ್ ಸ್ವಾಗತಿಸಿ, ವರದಿ ಮಂಡಿಸಿದರು. ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕ ಎಂ.ಜಿ. ಗುಬ್ಬಿ ವಂದಿಸಿದರು. ಸಹಶಿಕ್ಷಕಿ ಸುಶೀಲಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.