ಕೈದಾಳದಲ್ಲಿ ಜಕಣಾಚಾರಿಯ 5ನೇ ಸಂಸ್ಮರಣಾ ದಿನಾಚರಣೆ

Team Udayavani, Jan 2, 2018, 6:15 AM IST

Jakanachari-Day.jpg

ತುಮಕೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಬಜೆಟ್‌ ಅಧಿವೇಶನದಲ್ಲಿಯೇ ಹಿಂದುಳಿದ ವರ್ಗಗಳಲ್ಲಿನ 103 ಕಾಯಕ ಸಮುದಾಯಗಳ ಅಭಿವೃದ್ಧಿಗೆ  ಸಾವಿರ ಕೋಟಿ ರೂ. ತೆಗೆದಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ತಾಲೂಕಿನ ಕೈದಾಳದಲ್ಲಿ ಸೋಮವಾರ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಏರ್ಪಡಿಸಲಾಗಿದ್ದ 5 ನೇ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಹಿಂದುಳಿದ ಜನಾಂಗಗಳಿಗೆ ಶಕ್ತಿ ನೀಡಬೇಕು. ಈ ನಿಟ್ಟಿನಲ್ಲಿ ಈ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಕಾಯಕ ಸಮುದಾಯಗಳನ್ನು ಸಂಘಟಿಸಿ ಸರ್ಕಾರದಿಂದ ಅವರಿಗೆ ಸಿಗಬೇಕಾಗಿರುವ ಸವಲತ್ತುಗಳನ್ನು ಕೊಡಿಸುವ ಜವಾಬ್ದಾರಿ ಕೆ.ಪಿ.ನಂಜುಂಡಿ ಮೇಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೆ.ಪಿ.ನಂಜುಂಡಿಯವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡುತ್ತೇನೆ. ಜ.1ರಂದು ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮಾರಣಾ ದಿನಾಚರಣೆಯನ್ನು ಸರ್ಕಾರದಿಂದಲೇ ಆಚರಿಸಲು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಘೋಷಿಸಿದರು.

ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಿಶ್ವಕರ್ಮ ಪೀಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಕಾಳಹಸ್ತೇಂದ್ರ ಸ್ವಾಮಿ, ಭೋವಿ ಸಮಾಜದ ಸಿದ್ದರಾಮೇಶ್ವರಮಾಹ ಸ್ವಾಮಿ, ಮಡಿವಾಳ ಸಮುದಾಯದ ಬಸವ ಮಾಚಿದೇವ ಸ್ವಾಮಿ, ಛಲವಾದಿ ಸಮುದಾಯದ ಬಸವನಾಗಿದೇವ ಮಹಾಸ್ವಾಮಿ, ರೆಡ್ಡಿ ಸಮುದಾಯದ ಬಸವರಾಜ ಮಹಾಸ್ವಾಮಿ, ದೊಂಬಿದಾಸರ ಸಮಾಜದ ರಾಜಯೋಗಿ ವಿದ್ವಾನ್‌ ಕರುಣಾಕರ ಮಹಾಸ್ವಾಮಿ, ತಿಗಳ ಸಮುದಾಯದ ಜ್ಞಾನಾನಂದ ಪುರಿ ಮಹಾಸ್ವಾಮಿ, ಕುಂಚಿಟಿಗ ಸಮಾಜದ ಶಾಂತವೀರ  ಮಹಾಸ್ವಾಮಿ ಸೇರಿದಂತೆ ಹಿಂದುಳಿದ ವರ್ಗಗಳ ಹಲವಾರು ಮಠಗಳ ಸ್ವಾಮೀಜಿಗಳು ವಹಿಸಿದ್ದರು.

ಸಿದ್ಧಗಂಗಾಶ್ರೀಗೆ ಭಾರತ ರತ್ನಕ್ಕೆ ಮನವಿ: ಇದೇ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್‌ವೈ, ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡುವಂತೆ ಕೇಂದ್ರ ಸಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.