ಕೃಷಿಕನಿಗೆ ಕೃಷಿ ಸಮ್ಮೇಳನದಲ್ಲೇ ಅವಮಾನ

Team Udayavani, Jan 3, 2018, 12:26 PM IST

03-31.jpg

ಬೆಳ್ಮಣ್‌: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಡಿ. 23ರಂದು ನಡೆದ ಸಿರಿ ಧಾನ್ಯಗಳ ಕೃಷಿ ಸಮ್ಮೇಳನದಲ್ಲಿ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಕಡಂದಲೆಗುತ್ತು ಸುದರ್ಶನ ಶೆಟ್ಟಿ ಅವರಿಗೆ ಭಾರೀ ಅವಮಾನ ನಡೆದಿದೆ.

ಉತ್ತಮ ಪ್ರಗತಿಪರ ಕೃಷಿಕರಾಗಿದ್ದ ಸುದರ್ಶನ ಶೆಟ್ಟಿ ಅವರು ಅತ್ಯುತ್ತಮ ಕೃಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ತಿಳಿಸಿ ಸಮ್ಮೇಳನಕ್ಕೆ ಮುಂಚಿತವಾಗಿ ಆಹ್ವಾನ ನೀಡಲಾಗಿತ್ತು. ಅಲ್ಲದೆ ಪ್ರಯಾಣದ ವ್ಯವಸ್ಥೆಯನ್ನೂ ಮಾಡುವುದಾಗಿ ಇಲಾಖೆ ತಿಳಿಸಿತ್ತು. ಆದರೂ ಸುದರ್ಶನ ಶೆಟ್ಟಿ ಅವರು ತಮ್ಮ 20 ಮಂದಿ ಗೆಳೆಯರ ಬಳಗದ ಜತೆ ಕಾರ್ಯಕ್ರಮಕ್ಕೆ ಸಾಕಷ್ಟು ಮುಂಚಿತವಾಗಿ ಸ್ವಂತ ಖರ್ಚಿನಲ್ಲಿ ತೆರಳಿದ್ದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಹಿತ ಶಾಸಕರು, ಜನಪ್ರತಿನಿಧಿಗಳಿದ್ದರು. ಕಾರ್ಯಕ್ರಮ ನಡೆದು ಧನ್ಯವಾದದೊಂದಿಗೆ ಮುಕ್ತಾಯ ಕಂಡರೂ ಅತ್ಯುತ್ತಮ ಕೃಷಿಕ ಪ್ರಶಸ್ತಿ ವಿತರಣೆ ನಡೆಯಲೇ ಇಲ್ಲ. ಬಳಿಕ ಇಲಾಖೆಯ ಸಿಬಂದಿಯೋರ್ವರು ಸಭೆಯಲ್ಲಿ ಸುದರ್ಶನ ಶೆಟ್ಟಿ ಅವರು ಕುಳಿತಿದ್ದಲ್ಲಿಗೆ ಬಂದು ಇಲಾಖೆ ಪ್ರಶಸ್ತಿಯಾಗಿ ಘೋಷಿಸಿದ್ದ ಪ್ರಶಸ್ತಿ ಹಣ 10,000 ರೂ.ಗಳ ಚೆಕ್‌ ನೀಡಿದ್ದರು. ಆ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗಣ್ಯರ ಸಹಿತ ಬಹುತೇಕ ಮಂದಿ ನಿರ್ಗಮಿಸಿಯಾಗಿತ್ತು. ಇಂತಹ ಕಾಟಾಚಾರದ ಪ್ರಶಸ್ತಿ ಪ್ರದಾನ ಅಗತ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸುದರ್ಶನ ಶೆಟ್ಟಿ ಅವರು, ದೇಶದ ಬೆನ್ನೆಲುಬೆನಿಸಿರುವ ರೈತರ ಬಗ್ಗೆ ಸರಕಾರ, ಜನಪ್ರತಿನಿಧಿಗಳು ಹಾಗೂ ಇಲಾಖೆಯ ನಿರ್ಲಕ್ಷ್ಯಕ್ಕೆ ಈ ಘಟನೆ ಕೈಗನ್ನಡಿ ಎಂದು ಆರೋಪಿಸಿದ್ದಾರೆ.

ಕೃಷಿ ಚಟುವಟಿಕೆಗಳ ಬಗ್ಗೆ ಈಗಿನ ಮಂದಿ ನಿರಾಸಕ್ತಿ ತೋರುತ್ತಿರುವ ಈ ಕಾಲಘಟ್ಟದಲ್ಲಿ ಉತ್ಸಾಹದಿಂದ ಕೃಷಿ ಕಾಯಕ ನಡೆಸಿ ಇತರರಿಗೆ ಮಾದರಿ ಎನಿಸುತ್ತಿರುವ ಕೃಷಿಕರನ್ನೂ ಈ ರೀತಿ ನಿರ್ಲಕ್ಷಿಸುತ್ತಿರುವ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದರ್ಶನ ಶೆಟ್ಟಿ ಅವರು ಭತ್ತ ಬೇಸಾಯದ ಜತೆಗೆ ಅಡಿಕೆ, ತೆಂಗು, ಕಾಳುಮೆಣಸು, ಮಾವು, ಗೇರು ಇತ್ಯಾದಿ ಕೃಷಿ, ಅಲ್ಲದೆ ಹೈನುಗಾರಿಕೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇಂತಹ ಕೃಷಿಕನ ಅವಗಣನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.