ಹಿರಿಯ ನಾಗರಿಕರೊಂದಿಗೆ ಎಚ್‌ಡಿಕೆ ಸಂವಾದ ಇಂದು
Team Udayavani, Jan 3, 2018, 12:46 PM IST
ಬೆಂಗಳೂರು: ವಿಧಾನಸಭೆ ಚುನಾವಣೆ ತಯಾರಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹಿರಿಯ ನಾಗರಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಡೀ ದಿನ ಸಂವಾದ ನಡೆಯಲಿದ್ದು, ಹಿರಿಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.
ಸೇವೆಯಿಂದ ನಿವೃತ್ತಿಯಾದ ನಂತರ ಹಿರಿಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳು, ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸವಲತ್ತು, ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗುತ್ತಿರುವ ಲೋಪ -ದೋಷ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗಾಗಿ ರೂಪಿಸುವ ಕಾರ್ಯಕ್ರಮಗಳ ಬಗ್ಗೆಯೂ ಸಂವಾದದಲ್ಲಿ ಕುಮಾರಸ್ವಾಮಿ ಮಾಹಿತಿ ನೀಡಲಿದ್ದಾರೆ. ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಹಿರಿಯ ನಾಗರಿಕ ಕಲ್ಯಾಣಕ್ಕಾಗಿ ಸೇರ್ಪಡೆ ಮಾಡಬೇಕಾದ ಅಂಶಗಳ ಬಗ್ಗೆ ಸಲಹೆ-ಸೂಚನೆ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಇದಾದ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ನಿರಂತರ ಪ್ರವಾಸ ನಡೆಸಲಿರುವ ಕುಮಾರಸ್ವಾಮಿ ಅದರ ನಡುವೆ ಮೈಸೂರಿನಲ್ಲಿ ಹಿರಿಯ ಸಾಹಿತಿಗಳು-ಚಿಂತಕರ ಜತೆ ಹಾಗೂ ಬೆಂಗಳೂರಿನಲ್ಲಿ ಐಟಿ-ಬಿಟಿ ವಲಯದವರ ಜತೆಯೂ ಸಂವಾದ ನಡೆಸಲಿದ್ದಾರೆ ಎಂದು ಜೆಡಿಎಸ್ ಶಾಸಕ ಗೋಪಾಲಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.