ತಾಜ್‌ ಪ್ರವಾಸಿಗರಿಗೆ ಮಿತಿ, ದಿನಕ್ಕೆ 40 ಸಾವಿರ ಮಂದಿಗೆ ಅವಕಾಶ


Team Udayavani, Jan 4, 2018, 6:45 AM IST

taj.jpg

ಹೊಸದಿಲ್ಲಿ: ವಾರಾಂತ್ಯ ಮತ್ತು ರಜಾದಿನಗಳಲ್ಲಿ ವಿಶ್ವಪ್ರಸಿದ್ಧ ತಾಜ್‌ಮಹಲ್‌ ವೀಕ್ಷಣೆಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದನ್ನು ತಡೆಯಲು, ದಿನವೊಂದಕ್ಕೆ ಪ್ರವಾಸಿಗರ ಸಂಖ್ಯೆಯನ್ನು ಮಿತಿಗೊಳಿಸಲು ಕೇಂದ್ರ ಸರಕಾರ ಚಿಂತನೆ. ದಿನಕ್ಕೆ 40 ಸಾವಿರ ಪ್ರವಾಸಿಗರನ್ನಷ್ಟೇ ಒಳಗೆ ಬಿಡಲು ನಿರ್ಧರಿಸುವ ಸಾಧ್ಯತೆಗಳಿವೆ. ಈ ಸಂಬಂಧ ಪುರಾತತ್ವ ಇಲಾಖೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರವಾಸಿಗರ ಸಂಖ್ಯೆಯನ್ನು ಮಿತಿಗೊಳಿಸುವುದರ ಜತೆಗೆ, ಒಬ್ಬ ಪ್ರವಾಸಿಯು ತಾಜ್‌ ಮಹಲ್‌ ವೀಕ್ಷಿಸುವ ಅವಧಿಯನ್ನೂ ಮೂರು ಗಂಟೆಗೆ ಸೀಮಿತಗೊಳಿಸುವ ಸಾಧ್ಯತೆಯಿದೆ. ಜ.20ರಿಂದ ಹೊಸ ನಿರ್ಧಾರ ಜಾರಿಯಾಗಲಿದೆ. ಗಮನಾರ್ಹ ಅಂಶವೆಂದರೆ ವಿದೇಶೀಯರಿಗೆ ಯಾವುದೇ ರೀತಿಯ ಮಿತಿ ಹೇರಲಾಗಿಲ್ಲ.

ಕಳೆದ ಗುರುವಾರ ತಾಜ್‌ಮಹಲ್‌ ವೀಕ್ಷಣೆಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರಿಂದ, ಕಾಲು¤ಳಿತ ಉಂಟಾಗಿತ್ತು. ಇದರಿಂದಾಗಿ ಒಂದು ಪ್ರವೇಶದ್ವಾರದಲ್ಲಿ ಐವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದು,  ಸ ರ ಕಾ ರಕ್ಕೆ ಈ ಸಲಹೆ ನೀಡಿದೆ. ಸಾಮಾನ್ಯವಾಗಿ 35 ರಿಂದ 40 ಸಾವಿರ ಜನರು ತಾಜ್‌ಮಹಲ್‌ಗೆ ಆಗಮಿಸುತ್ತಾರೆ. ಆದರೆ ರಜಾ ದಿನಗಳು ಮತ್ತು ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗುತ್ತದೆ. ಕೆಲವು ಬಾರಿ 60 ರಿಂದ 70 ಸಾವಿರ ಜನರು ಇಲ್ಲಿಗೆ ಆಗಮಿಸುತ್ತಾರೆ. ಸದ್ಯ ಪ್ರವಾಸಿಗರ ಸಂಖ್ಯೆಯಲ್ಲಿ ಯಾವ ಮಿತಿಯೂ ಇಲ್ಲ. ಅಷ್ಟೇ ಅಲ್ಲ, ಒಮ್ಮೆ ಪ್ರವೇಶ ದ್ವಾರದಲ್ಲಿ ಟಿಕೆಟ್‌ ಪಡೆದು ಒಳಪ್ರವೇಶಿಸಿದರೆ ಇಡೀ ದಿನಬೇಕಾದರೂ ಪ್ರವಾಸಿಗರು ಇರಬಹುದಾಗಿದೆ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.