ಹಕ್ಕಿ ಜ್ವರ: ರಾಜ್ಯಕ್ಕೆ ಇಂದು ಕೇಂದ್ರ ತಂಡ
Team Udayavani, Jan 4, 2018, 7:45 AM IST
ಬೆಂಗಳೂರು: ಹಕ್ಕಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರದ ತಂಡ ಗುರುವಾರ ನಗರಕ್ಕೆ ಆಗಮಿಸುತ್ತಿದೆ ಎಂದು ಪಶು ಸಂಗೋಪನೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್‌ಕುಮಾರ್ ಕತ್ರಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಈ ಸಂಬಂಧ ಮೇಯರ್ ಸಂಪತ್‌ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೇಂದ್ರದ ತಂಡ ಆಗಮಿಸಿ ಪರಿಶೀಲನೆ ನಂತರ ಅವರು ನೀಡುವ ಸಲಹೆ ಅನುಷ್ಟಾನಕ್ಕೆ ತರುತ್ತೇವೆ ಎಂದು ಹೇಳಿದರು.
ಹಕ್ಕಿ ಜ್ವರ ಕೋಳಿ ಫಾರಂನಿಂದ ಹರಡಿರುವ ಸಾಧ್ಯತೆ ಕಡಿಮೆ. ಮಾರಾಟ ಮಾಡುವವರ ಅಂಗಡಿಗಳಿಂದ ಹಬ್ಬಿರಬಹುದು. ಇಂತಹ ಶಂಕಿತ ಅಂಗಡಿಗಳನ್ನು ಮುಚ್ಚಿಸಿದ್ದೇವೆ ಎಂದು ತಿಳಿಸಿದರು.
ಹಕ್ಕಿಜ್ವರದ ಮೂಲ ಪತ್ತೆಯಾಗಬೇಕಿದೆ. ಈಗಾಗಲೇ ಹಕ್ಕಿ ಜ್ವರ ಕಾಣಿಸಿಕೊಂಡ 1 ಕಿ.ಮೀ. ವ್ಯಾಪ್ತಿಯ 71 ಕೋಳಿಗಳನ್ನು ಕೊಲ್ಲಲಾಗಿದೆ ಎಂದರು.
ನಗರದಲ್ಲಿ ಹಕ್ಕಿ ಜ್ವರ ಹರಡದಂತೆ ಕ್ರಮ ಕೈಗೊಳ್ಳಲಾಗಿದ್ದು ಬಿಬಿಎಂಪಿ, ಪಸು ಸಂಗೋಪನೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದು ಹೇಳಿದರು. ಡಿ.15 ರ ನಂತರ ಇದೇ ರೀತಿ ಕೋಳಿಗಳು ಮೃತಪಟ್ಟಿರುವ ಮಾಹಿತಿ ಇದ್ದರೆ ಇಲಾಖೆಯ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಹಕ್ಕಿ ಜ್ವರ ವಿಚಾರದಲ್ಲಿ ಜನರು ಆತಂಕಪಡಬಾರದು. ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರಿಗೆ ಸೂಚನೆ ನೀಡಲಾಗಿದೆ. ಪ್ರತಿ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ನೂರು ಜನ ಆರೋಗ್ಯ ಕಾರ್ಯಕರ್ತರನ್ನು ಸರ್ವೆಕ್ಷಣೆಗಾಗಿ ನಿಯೋಜಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಂದಲೂ ಮಾಹಿತಿ ಪಡೆಲಾಗುತ್ತಿದೆ ಎಂದು ಹೇಳಿದರು.
ಸಹಾಯವಾಣಿ
ಪಸು ಸಂಗೋಪನೆ ಇಲಾಖೆಯಿಂದ ಹಕ್ಕಿ ಜ್ವರ ನಿಯಂತ್ರಣ ಸಂಬಂಧ ಎಲ್ಲ ಗ್ರಾಮ ಪಂಚಾಯಿಗಳಿಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸಹಾಯವಾಣಿ ಕೇಂದ್ರ 18004250012/080 23417100 ಸ್ಥಾಪಿಸಲಾಗಿದೆ.
ಅರೆಬೆಂದ ಕೋಳಿ ಮಾಂಸ, ಮೊಟ್ಟೆ ಸೇವನೆ ಬೇಡ
ಕೋಳಿ ಮಾಂಸ ತಿನ್ನುವ ಮೊದಲು ಜಾಗೃತರಾಗಿರಬೇಕು. ಅರೆಬೆಂದ, ಸರಿಯಾಗಿ ಬೇಯದ ಕೋಳಿ ಮಾಂಸ ಅಥವಾ ಮೊಟ್ಟೆ ತಿನ್ನಬಾರದು. ಕನಿಷ್ಠ 70 ಡಿಗ್ರಿ ಸೆಂಟಿಗ್ರೇಡ್‌ನಲ್ಲಿ ಬೇಯ್ದ ಕೋಳಿ ಮಾಂಸ ಮತ್ತು ಮೊಟ್ಟೆ ಸುರಕ್ಷಿತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ಸೇs… ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.