ರಾಜ್ಯ ಸರಕಾರದಿಂದ ಅಲ್ಪಸಂಖ್ಯಾಕ‌ರ ಅಭ್ಯುದಯ : ಯಾಕುಬ್‌ 


Team Udayavani, Jan 4, 2018, 2:19 PM IST

04-27.jpg

ಮಡಿಕೇರಿ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಕ್ಷ ಆಡಳಿತ ಹಾಗೂ ಜನಪರ ಕಾಳಜಿಯೇ ಕಾರಣವಾಗಿದೆ. ಇವರ ಆಡಳಿತಾ ವಧಿಯಲ್ಲಿ ರಾಜ್ಯದ ಅಲ್ಪಸಂಖ್ಯಾಕ‌ರು ಅಭ್ಯುದಯವನ್ನು ಕಂಡಿದ್ದು, ಹಿಂದೆಂದೂ ಬಿಡುಗಡೆಯಾಗದಷ್ಟು ಅನುದಾನ ಅಲ್ಪಸಂಖ್ಯಾಕ‌ರ ಏಳಿಗೆಗಾಗಿ ಸರಕಾರ‌ ನೀಡಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಲ್ಪಸಂಖ್ಯಾಕರ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಕೂಡ ಅಲ್ಪಸಂಖ್ಯಾಕ‌ರು ಸಾಕಷ್ಟು ಅಭಿವೃದ್ಧಿ ಯನ್ನು ಕಂಡಿದ್ದು, ಯುವ ಸಮೂಹ ಸ್ವಯಂ ಉದ್ಯೋಗದ ಮೂಲಕ ಪ್ರಗತಿಯನ್ನು ಕಾಣುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್‌. ಸೀತಾರಾಂ ಅವರ ಸಹಕಾರದಿಂದ  ಶಾದಿಭಾಗ್ಯ ಯೋಜನೆಯಡಿ ಕೊಡಗು ಜಿಲ್ಲೆಗೆ 2013ರಿಂದ 2017ರ ವರೆಗೆ 629 ಫ‌ಲಾನುಭವಿಗಳು 3.14 ಕೋಟಿ ರೂ., ಕ್ರೆಸ್ತ ಸಮುದಾಯದ 126 ಫ‌ಲಾನುಭವಿಗಳು 63 ಲಕ್ಷ ರೂ. ಅನುದಾನದ ಲಾಭ ಪಡೆದಿದ್ದಾರೆ ಎಂದರು. 

ಜೈನರಿಗೆ 2.50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆಯಾದರೂ ಫ‌ಲಾನು ಭವಿಗಳು ಬಾರದೆ ಹಣ ಬಾಕಿಯಾಗಿದ್ದು, ಅರ್ಹರು ಯೋಜನೆಯ ಲಾಭ ಪಡೆಯುವಂತೆ ಮನವಿ ಮಾಡಿದರು.  2017-18ನೇ ಸಾಲಿನಲ್ಲಿ ಜಿಲ್ಲೆಯ ಮದರಸಗಳಿಗೆ ಮೂಲಭೂತ ಸೌಲಭ್ಯ ಮತ್ತು ಕಂಪ್ಯೂಟರ್‌ ಸೇರಿದಂತೆ ಇತರ ಚಟುವಟಿಕೆಗಳಿಗೆ ತಲಾ ರೂ.10 ಲಕ್ಷದಂತೆ 58 ಮದರಸಾಗಳಿಗೆ 5.80 ಕೋಟಿ ರೂ. ಬಿಡುಗಡೆಯಾಗಿದೆ. ಚರ್ಚ್‌ ಗಳ ನವೀಕರಣಕ್ಕೆ ರೂ.1.35 ಕೋಟಿ, ಎರಡು ಮೊರಾರ್ಜಿ ಶಾಲೆಗಳಿಗೆ ರೂ. 21.10 ಕೋಟಿ, ಕುಶಾಲನಗರ ವಿದ್ಯಾರ್ಥಿ ನಿಲ¿ಕ್ಕಾಗಿ ರೂ.1 ಕೋಟಿ ನೀಡಲಾಗಿದೆ. ಮಾದಾಪುರ ಮಸೀದಿಗೆ 1 ಕೋಟಿ ರೂ. ಬಿಡುಗಡೆಯಾಗಿದೆ.

ಶಾದಿ ಮಹಲ್‌ಗಾಗಿ 2.77 ಕೋಟಿ ರೂ. 2017-18ರಲ್ಲಿ ಬಿಡುಗಡೆಯಾಗಿದೆ. ಮೌಲಾನಾ ಆಜಾ‚ದ್‌ ಭವನ ನಿರ್ಮಾಣಕ್ಕಾಗಿ ರೂ. 1.39 ಕೋಟಿ, ಅಲ್ಪಸಂಖ್ಯಾಕ‌ ನಿರುದ್ಯೋಗಿ ಯುವಕರಿಗೆ 5 ಮಂದಿಗೆ ಟ್ಯಾಕ್ಸಿ ಹೊಂದಲು ತಲಾ 3 ಲಕ್ಷ ರೂ. ನೀಡಲಾಗಿದೆ. ವಕ್ಫ್ಬೋರ್ಡ್‌ ನಿಂದ ಮದರಸ, ಮಸೀದಿ ಅಭಿವೃದ್ಧಿ, ಕಬರಸ್ತಾನ್‌ ತಡೆಗೋಡೆ ನಿರ್ಮಾಣಕ್ಕೆ 4 ಕೋಟಿ ರೂ. ಬಿಡುಗಡೆಯಾಗಿದೆ. ಅಲ್ಲದೆ ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ, ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದಿಂದ ಸಾಲ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ವ್ಯವಸ್ಥೆಯನ್ನು ಅಲ್ಪಸಂಖ್ಯಾಕರು ಪಡೆದಿದ್ದಾರೆ. 94ಸಿ, 94 ಸಿಸಿ ಮೂಲಕ ಅನೇಕ ಅಲ್ಪಸಂಖ್ಯಾಖ ಫ‌ಲಾನುಭವಿಗಳು ಭೂಮಿಯ ಹಕ್ಕು ಪಡೆದು ತೃಪ್ತರಾಗಿದ್ದಾರೆ. ಈ ರೀತಿಯಾಗಿ ರಾಜ್ಯದ ಕಾಂಗ್ರೆಸ್‌ ಸರಕಾರ ಅಲ್ಪಸಂಖ್ಯಾಕರ ಏಳಿಗೆಗಾಗಿ ಕೋಟಿ, ಕೋಟಿ ಅನುದಾನವನ್ನು ನೀಡಿ ಸಾಮಾಜಿಕ ಭದ್ರತೆಯನ್ನು ನೀಡಿದೆ ಎಂದು ಕೆ.ಎ. ಯಾಕುಬ್‌ ತಿಳಿಸಿದರು.     ಅಲ್ಪಸಂಖ್ಯಾತರಿಗೆ ರಕ್ಷಣೆಯನ್ನು ನೀಡುವುದರೊಂದಿಗೆ ಆತ್ಮಸ್ಥೆ çರ್ಯವನ್ನು ತುಂಬಿದ ಹೆಗ್ಗಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರಕ್ಕೆ ಸಲ್ಲುತ್ತದೆ. ಇದೇ ಜನವರಿ 9 ರಂದು ಮುಖ್ಯಮಂತ್ರಿಗಳು ಮಡಿಕೇರಿಗೆ ಆಗಮಿಸಿ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದು, ಜಿಲ್ಲೆಯ ಸಮಸ್ತ ಅಲ್ಪಸಂಖ್ಯಾಕ ಬಂಧುಗಳು ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಹೃದಯ ತುಂಬಿದ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿದೆ ಎಂದರು. 

ನಾನೂ ಆಕಾಂಕ್ಷಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಮೂಲಕ ಸ್ಪರ್ಧಿಸಲು ನಾನೂ ಕೂಡ ಒಬ್ಬ ಆಕಾಂಕ್ಷಿಯೆಂದು ತಿಳಿಸಿದ ಕೆ.ಎ.ಯಾಕುಬ್‌ ಜಿಲ್ಲೆಯ ಎರಡು ಕ್ಷೇತ್ರ ಗಳಲ್ಲಿ ಯಾರು ಅಭ್ಯರ್ಥಿಗಳಾದರೂ ಅಲ್ಪಸಂಖ್ಯಾಕರ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದರು. ಚುನಾವಣೆ ಸಂದರ್ಭ ಮತದಾನದಲ್ಲಿ ನಿರ್ಣಾಯಕರಾಗಿರುವ ಅಲ್ಪಸಂಖ್ಯಾಕರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನಮಾನ ನೀಡಿ ಎಂದು ಈಗಾಗಲೇ ವರಿಷ್ಠರಿಗೆ ಮನವಿ ಸಲ್ಲಿಸಲಾಗಿದೆ. 

ಇದೀಗ ವಿಧಾನಸಭೆ  ಚುನಾವಣೆ ಕೂಡ ಸಮೀಪಿಸುತ್ತಿದ್ದು, ಅಲ್ಪಸಂಖ್ಯಾ ಕರಿಗೂ ಸ್ಪರ್ಧಿಸಲು ಅವಕಾಶ ನೀಡಬೇಕೆನ್ನುವ ಅಭಿಲಾಷೆ ನಮ್ಮದು. ಆದರೆ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದು, ಯಾರೇ ಸ್ಪರ್ಧಿಸಿದರೂ ಗೆಲ್ಲಿಸುವ ಶಕ್ತಿ ಅಲ್ಪಸಂಖ್ಯಾತರಿಗಿದೆ ಎಂದು ಕೆ.ಎ.ಯಾಕುಬ್‌ ಸ್ಪಷ್ಟಪಡಿಸಿದರು. 

ಸುದ್ದಿಗೋಷ್ಠಿಯಲ್ಲಿ ನಗರಸಭಾ ನಾಮ ನಿರ್ದೇಶಿತ ಸದಸ್ಯರಾದ ಎಂ.ಎ. ಉಸ್ಮಾನ್‌ ಹಾಗೂ ಅಲ್ಪಸಂಖ್ಯಾತರ ಘಟಕದ ಸಂಯೋಜಕರಾದ ಸುರಯ್ನಾ ಅಬ್ರಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.