ಗ್ರಾಮಗಳ ಸೇರ್ಪಡೆಗಾಗಿ ಸಭೆ
Team Udayavani, Jan 4, 2018, 4:43 PM IST
ಯಾದಗಿರಿ: ಜಿಲ್ಲೆಯಲ್ಲಿ ನೂತನವಾಗಿ ರಚನೆಗೊಂಡ ಗುರುಮಠಕಲ್, ವಡಗೇರಾ ಹಾಗೂ ಹುಣಸಗಿ ತಾಲೂಕಗಳಿಗೆ ಗ್ರಾಮಗಳ ಸೇರ್ಪಡೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಗ್ರಾಮ ಪಂಚಾಯಿತಿಗಳಾದ ಗೆದ್ದಲಮರಿ, ಬೈಲಕುಂಟಿ, ಕಾಮನಟಗಿ, ಕಚಕನೂರು, ಹೆಬ್ಟಾಳ-ಬಿ. ಇವುಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳನ್ನು ನೂತನ ಹುಣಸಗಿ ತಾಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲಾಯಿತು.
ಗುರುಮಠಕಲ್ ತಾಲೂಕಿಗೆ ಅಜಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಬದ್ದೆಪ್ಪಲ್ಲಿ ಗ್ರಾಮವನ್ನು ಹಾಗೂ ವಡಗೇರಾ ತಾಲೂಕಿಗೆ ಮಾಲಹಳ್ಳಿ, ಗಡ್ಡೆಸೂಗೂರು, ತೇಗರಾಳ, ಬಬಲಾದ ಗ್ರಾಮಗಳನ್ನು ಸೇರ್ಪಡೆ ಮಾಡುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ ಮಾತನಾಡಿ, ನೂತನ ತಾಲೂಕಗಳ ಅಭಿವೃದ್ಧಿಗಾಗಿ ಸರಕಾರ ಪ್ರತಿ ತಾಲೂಕಿಗೆ 5 ಕೋಟಿ ರೂ. ಅನುದಾನ ನೀಡಿದ್ದು, ಗುರುಮಠಕಲ್, ಹುಣಸಗಿ ಹಾಗೂ ವಡಗೇರಾ ತಾಲೂಕಗಳಲ್ಲಿ ವಿವಿಧ ಇಲಾಖೆ ಕಚೇರಿಗಳ ಸ್ಥಾಪಿಸಲು ಸ್ಥಳಾವಕಾಶ ಹಾಗೂ ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನೂತನ ತಾಲೂಕಗಳಿಗೆ ಸೇರ್ಪಡೆ ಮಾಡಿದ ಗ್ರಾಮಗಳ ವರದಿಯನ್ನು ತಯಾರಿಸಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಆಯಾ ತಹಶೀಲ್ದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಜಗದೀಶ ನಾಯಕ್, ಜಿಪಂ ಸಿಇಒ ಡಾ|ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.