ದೃಷ್ಟಿ ವಿಕಲಚೇತನರಿಗೆ ಉಚಿತ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಣೆ


Team Udayavani, Jan 5, 2018, 6:45 AM IST

Talking-Laptop.jpg

ಬೆಂಗಳೂರು: ವಿಶ್ವ ಬ್ರೈಲ್‌ ದಿನಾಚರಣೆ ಅಂಗವಾಗಿ ಬಾಲಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ದೃಷ್ಟಿ ವಿಕಲಚೇತನರಿಗೆ ರಾಜ್ಯ ಸರ್ಕಾರದ ವತಿಯಿಂದ “ಟಾಕಿಂಗ್‌ ಲ್ಯಾಪ್‌ಟಾಪ್‌’ ವಿತರಿಸುವ ಮೂಲಕ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ಕೆ ಚಾಲನೆ ದೊರೆಯಿತು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ನಾನಾ ಸ್ವಯಂ ಸೇವಾಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬ್ರೈಲ್‌ ದಿನಾಚರಣೆ ಸಮಾರಂಭದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಸಾಂಕೇತಿಕವಾಗಿ 50 ಮಂದಿ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಇಲಾಖೆ ನಿರ್ದೇಶಕ ಡಾ.ಸಿದ್ದರಾಜು, ವಿಕಲಚೇತನರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಅನುಕೂಲವಾಗುವಂತೆ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸುತ್ತಿದೆ. ಮಾಸಾಶನ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನದ ಜತೆಗೆ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಿ ಸುಧಾರಿತ ತಂತ್ರಜ್ಞಾನ ಬಳಕೆಗೆ ಅವಕಾಶ ಕಲ್ಪಿಸುತ್ತಿದೆ. ದೃಷ್ಟಿ ವಿಕಲಚೇತನ ತಾಯಂದಿರ ಬಾಣಂತನಕ್ಕೆ ಅನುಕೂಲವಾಗಲೆಂದು ಹೆರಿಗೆ ಬಳಿಕ ಎರಡು ವರ್ಷದವರೆಗೆ ಸಹಾಯಕರ ಸೇವೆ ಬಳಸಿಕೊಳ್ಳಲು ಶಿಶುಪಾಲನಾ ಭತ್ಯೆಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.

ದೃಷ್ಟಿ ವಿಕಲಚೇತನರು ತಮ್ಮಲ್ಲಿ ನ್ಯೂನತೆ ಇದೆ ಎಂದು ಮಾನಸಿಕವಾಗಿ ಕುಗ್ಗಬಾರದು. ಭೌತಿಕ ದೃಷ್ಟಿಯಿಲ್ಲದಿದ್ದರೂ ಅಂತ:ದೃಷ್ಟಿಯಿಂದಲೇ ಆತ್ಮವಿಶ್ವಾಸದಿಂದ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಸರ್ಕಾರವು ವಿಕಲಚೇತನರನ್ನೂ ರಾಷ್ಟ್ರದ ಸಂಪತ್ತು ಎಂದು ಪರಿಗಣಿಸಿದ್ದು, ಅಗತ್ಯ ಸೌಲಭ್ಯ ಕಲ್ಪಿಸುತ್ತಿದೆ. ಸೌಲಭ್ಯ ಬಳಸಿಕೊಂಡು ಮುಂದೆ ಕೊಡುಗೆ ನೀಡುವಷ್ಟರ ಮಟ್ಟಿಗೆ ಸಬಲರಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ದೃಷ್ಟಿ ವಿಕಲಚೇತನರು ನಡೆಸಿಕೊಟ್ಟ ಗೀತ ಗಾಯನಕ್ಕೆ ಸಭಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಧಾರವಾಡದ ಮನಗುಂದಿಯ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮಿ, ಮಾತೃಛಾಯ ಸಂಸ್ಥೆಯ ರಾಜ್ಯಶ್ರೀ ಸತೀಶ್‌, ಪರಶಿವಮೂರ್ತಿ, ಅಮರನಾಥ್‌ ಇತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ 1000ಕ್ಕೂ ಹೆಚ್ಚು ದೃಷ್ಟಿ ವಿಕಲಚೇತನರು ಎಸ್‌ಎಸ್‌ಎಲ್‌ಸಿ ನಂತರದ ಪದವಿಪೂರ್ವ, ಪದವಿ ಇತರೆ ಶಿಕ್ಷಣ ಪಡೆಯುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಇಲಾಖೆಯಿಂದ 2016-17ನೇ ಸಾಲಿಗೆ ಸಂಬಂಧಪಟ್ಟಂತೆ ಉಚಿತವಾಗಿ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ. ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಣೆಗೆ ಇಲಾಖೆಯು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದು, ಮುಂದೆ ಜಿಲ್ಲಾ ಮಟ್ಟದಲ್ಲೂ ವಿತರಿಸಲಿದೆ. ಸುಮಾರು 45,000 ರೂ. ಮೌಲ್ಯದ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.