ದೃಷ್ಟಿ ವಿಕಲಚೇತನರಿಗೆ ಮಾತನಾಡುವ ಲ್ಯಾಪ್‌ಟಾಪ್‌

Team Udayavani, Jan 5, 2018, 11:30 AM IST

talikng-lap.jpg

ಬೆಂಗಳೂರು: ವಿಶ್ವ ಬ್ರೈಲ್‌ ದಿನಾಚರಣೆ ಅಂಗವಾಗಿ ಬಾಲಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ದೃಷ್ಟಿ ವಿಕಲಚೇತನರಿಗೆ ರಾಜ್ಯ ಸರ್ಕಾರದಿಂದ “ಟಾಕಿಂಗ್‌ ಲ್ಯಾಪ್‌ಟಾಪ್‌’ ವಿತರಿಸಲಾಯಿತು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ನಾನಾ ಸ್ವಯಂ ಸೇವಾಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬ್ರೈಲ್‌ ದಿನಾಚರಣೆ ಸಮಾರಂಭದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಸಾಂಕೇತಿಕವಾಗಿ 50 ಮಂದಿ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಿಸಿದರು.

ಈ ಮೂಲಕ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ಕೆ ಚಾಲನೆ ದೊರೆಯಿತು. ಸಮಾರಂಭದಲ್ಲಿ ಮಾತನಾಡಿದ ಇಲಾಖೆ ನಿರ್ದೇಶಕ ಡಾ.ಸಿದ್ದರಾಜು, ವಿಕಲಚೇತನರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಅನುಕೂಲವಾಗುವಂತೆ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸುತ್ತಿದೆ.

ಮಾಸಾಶನ, ವಿದ್ಯಾರ್ಥಿ ವೇತನ, ಪ್ರೋತ್ಸಾಹಧನದ ಜತೆಗೆ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಿ ಸುಧಾರಿತ ತಂತ್ರಜ್ಞಾನ ಬಳಕೆಗೆ ಅವಕಾಶ ಕಲ್ಪಿಸುತ್ತಿದೆ.

ದೃಷ್ಟಿ ವಿಕಲಚೇತನ ತಾಯಂದಿರ ಬಾಣಂತನಕ್ಕೆ ಅನುಕೂಲವಾಗಲೆಂದು ಹೆರಿಗೆ ಬಳಿಕ ಎರಡು ವರ್ಷದವರೆಗೆ ಸಹಾಯಕರ ಸೇವೆ ಬಳಸಿಕೊಳ್ಳಲು ಶಿಶುಪಾಲನಾ ಭತ್ಯೆಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.

ದೃಷ್ಟಿ ವಿಕಲಚೇತನರು ತಮ್ಮಲ್ಲಿ ನ್ಯೂನತೆ ಇದೆ ಎಂದು ಮಾನಸಿಕವಾಗಿ ಕುಗ್ಗಬಾರದು. ಭೌತಿಕ ದೃಷ್ಟಿಯಿಲ್ಲದಿದ್ದರೂ ಅಂತಃದೃಷ್ಟಿಯಿಂದಲೇ ಆತ್ಮವಿಶ್ವಾಸದಿಂದ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಸರ್ಕಾರವು ವಿಕಲಚೇತನರನ್ನೂ ರಾಷ್ಟ್ರದ ಸಂಪತ್ತು ಎಂದು ಪರಿಗಣಿಸಿ, ಅಗತ್ಯ ಸೌಲಭ್ಯ ಕಲ್ಪಿಸುತ್ತಿದೆ. ಸೌಲಭ್ಯ ಬಳಸಿಕೊಂಡು ಮುಂದೆ ದೇಶಕ್ಕೆ ಕೊಡುಗೆ ನೀಡುವಷ್ಟರ ಮಟ್ಟಿಗೆ ಸಬಲರಾಗಬೇಕು ಎಂದು ಹೇಳಿದರು.

ಇದೇ ವೇಳೆ ದೃಷ್ಟಿ ವಿಕಲಚೇತನರು ನಡೆಸಿಕೊಟ್ಟ ಗೀತ ಗಾಯನಕ್ಕೆ ಸಭಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಧಾರವಾಡದ ಮನಗುಂದಿಯ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮಿ, ಮಾತೃಛಾಯಾ ಸಂಸ್ಥೆಯ ರಾಜ್ಯಶ್ರೀ ಸತೀಶ್‌, ಪರಶಿವಮೂರ್ತಿ, ಅಮರನಾಥ್‌ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದಲ್ಲೂ ವಿತರಣೆ: ರಾಜ್ಯದಲ್ಲಿ 1000ಕ್ಕೂ ಹೆಚ್ಚು ದೃಷ್ಟಿ ವಿಕಲಚೇತನರು ಎಸ್‌ಎಸ್‌ಎಲ್‌ಸಿ ನಂತರದ ಪದವಿಪೂರ್ವ, ಪದವಿ ಮತ್ತು ಇತರ ಶಿಕ್ಷಣ ಪಡೆಯುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಇಲಾಖೆಯಿಂದ 2016-17ನೇ ಸಾಲಿಗೆ ಸಂಬಂಧಿಸಿದಂತೆ ಉಚಿತವಾಗಿ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ.

ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಣೆಗೆ ಇಲಾಖೆಯು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದು, ಮುಂದೆ ಜಿಲ್ಲಾ ಮಟ್ಟದಲ್ಲೂ ವಿತರಿಸಲಿದೆ. ಸುಮಾರು 45,000 ರೂ. ಮೌಲ್ಯದ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ವಿಶೇಷ ಸಾಫ್ಟ್ವೇರ್‌: ದೃಷ್ಟಿ ವಿಕಲಚೇತನರು ಸುಲಭವಾಗಿ ಬಳಸಲು ಅನುಕೂಲವಾಗುವಂತೆ ಟಾಕಿಂಗ್‌ ಲ್ಯಾಪ್‌ಟಾಪ್‌ನಲ್ಲಿ ವಿಶೇಷ ಸಾಫ್ಟ್ವೇರ್‌ ಅಳವಡಿಸಲಾಗಿದೆ. ಇದರಿಂದ ಇ-ಮೇಲ್‌ ಸೇರಿದಂತೆ ಇತರೆ ಸಂದೇಶಗಳು ರವಾನೆಯಾದಾಗ ಅಲರ್ಟ್‌ ಸಂದೇಶ ಮೊಳಗಲಿದೆ.

ಅಲ್ಲದೆ, ಧ್ವನಿ ಸಂಕೇತಗಳ ಮೂಲಕ ಸುಲಭವಾಗಿ ಬಳಸಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯಬಿದ್ದರೆ ದೃಷ್ಟಿ ವಿಕಲಚೇತನರಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ಬಳಕೆ ಬಗ್ಗೆಯೂ ತಿಳಿಸಿಕೊಡಲಾಗುವುದು ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.