ಕಠಿನ ಕ್ರಮಕ್ಕೆ ಸಚಿವ ಪ್ರಮೋದ್ ಆಗ್ರಹ
Team Udayavani, Jan 6, 2018, 9:10 AM IST
ಉಡುಪಿ: ಕಾಟಿಪಳ್ಳದ ಹಿಂದೂ ಸಂಘಟನೆ ಕಾರ್ಯಕರ್ತ ದೀಪಕ್ ರಾವ್ ಅವರ ಹತ್ಯೆ ಆರೋಪಿಗಳು ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ಅವರಿಗೆ ಕಠಿನ ಶಿಕ್ಷೆ ಯಾಗಬೇಕು. ಈ ಹತ್ಯೆ ಅತ್ಯಂತ ದುಃಖದಾಯಕ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಜೀವಕ್ಕೂ ಬೆಲೆ ಇದೆ. ಇಂತಹ ಘಟನೆಗಳು ಮುಂದೆ ನಡೆಯದಂತೆ ಸಮಾಜ, ಪೊಲೀಸರು ಎಚ್ಚೆತ್ತು ಕೊಳ್ಳಬೇಕು ಎಂದರು.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಘಟನೆಗಳು ನಡೆದಾಗ ರಾಜಕೀಯ ಲಾಭ ಪಡೆಯಲು ಮುಂದಾಗು ವವರಿಗೆ ಅದು ತಿರುಗುಬಾಣವಾಗಲಿದೆ. ತಾತ್ಕಾಲಿಕವಾಗಿ ಜನರನ್ನು ದಾರಿ ತಪ್ಪಿಸಬಹುದು. ಆದರೆ ರಾಜಕಾರಣಿಗಳಿಗಿಂತ ಜನರು ಬುದ್ಧಿವಂತರಾಗಿದ್ದಾರೆ. ಹಾಗಾಗಿ ಸತ್ಯವನ್ನು ತುಂಬಾ ಕಾಲ ಅಡಗಿಸಿಡಲು ಸಾಧ್ಯವಿಲ್ಲ. ಚುನಾವಣೆಗೆ ಇನ್ನೂ ದಿನಗಳಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.