‘ತುಳು ಫಿಲ್ಮ್ ಫೆಸ್ಟಿವಲ್‌-2018’ 


Team Udayavani, Jan 6, 2018, 10:21 AM IST

6-Jan-4.jpg

ಮಹಾನಗರ: ತುಳು ಚಲನಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಆಯೋಜಿಸಲಾದ ತುಳು ಚಲನಚಿತ್ರರಂಗದ ಮೊದಲ ಪ್ರತಿಷ್ಠಿತ ‘ತುಳು ಫಿಲ್ಮ್ ಫೆಸ್ಟಿವಲ್‌-2018’ ಕಾರ್ಯಕ್ರಮಕ್ಕೆ ಗುರುವಾರ ಮಂಗಳೂರು ಪುರಭವನದಲ್ಲಿ ಚಾಲನೆ ದೊರೆಯಿತು. ಮಂಗಳೂರಿನ ಸಿನಿಪೊಲಿಸ್‌ ಥಿಯೇಟರ್‌ ಹಾಗೂ ಡಾನ್‌ಬಾಸ್ಕೋ ಸಭಾಂಗಣದಲ್ಲಿ ಶುಕ್ರವಾರದಿಂದ ಜ. 11ರ ವರೆಗೆ ಚಿತ್ರೋತ್ಸವ ಆಯೋಜಿಸಲಾಗಿದೆ.

ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್‌. ಗಣೇಶ್‌ ರಾವ್‌ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ತುಳುವಿನಲ್ಲಿ ಹಲವು ಸಿನೆಮಾಗಳು ಪ್ರಸ್ತುತ ಯಶಸ್ವಿಯಾಗಿ ತುಳುನಾಡಿನ ಪ್ರೀತಿಗೆ ಪಾತ್ರವಾಗಿದ್ದು, ಇನ್ನಷ್ಟು ಸಂದೇಶ ಹೊಂದಿರುವ ಸಿನೆಮಾಗಳ ಮೂಲಕ ಕೋಸ್ಟಲ್‌ವುಡ್‌ ಇನ್ನಷ್ಟು ಪ್ರಕಾಶಮಾನವಾಗಲಿ ಎಂದು ಆಶಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಮೇಯರ್‌ ಕವಿತಾ ಸನಿಲ್‌ ಮಾತನಾಡಿ, ಹಿಂದಿನ ತುಳು ಸಿನೆಮಾಗಳ ಬಗ್ಗೆ ಪರಾಮರ್ಶಿಸಿದಾಗ ಅಂದಿನ ಸಿನೆಮಾ ಶ್ರೀಮಂತಿಕೆ ಹಾಗೂ ಪ್ರೀತಿ ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಹಿಂದಿನ ತುಳು ಸಿನೆಮಾಗಳ ಒಂದೊಂದು ಹಾಡುಗಳು ಕೂಡ ಇಂದು ಕೂಡ ಜನರ ಬಾಯಲ್ಲಿ ನಲಿದಾಡುತ್ತಿವೆ. ಪರಶುರಾಮನ ಕುಡರಿಗ್‌ ಪುಟ್ಟಿನ ತುಳುನಾಡ್‌, ಉಪ್ಪು ನೀರ್‌ ಅಂಚಿಗ್‌.., ಹೀಗೆ ಒಂದೊಂದು ಅಂದಿನ ಚಿತ್ರಗಳ ಹಾಡುಗಳು ಈಗ ರೋಮಾಂಚನ ಉಂಟುಮಾಡುತ್ತವೆ. ಇಂತಹ ಸಮೃದ್ಧತೆ ಮುಂದಿನ ಸಿನೆಮಾದಲ್ಲೂ ಅಜರಾಮರವಾಗಿ ಇರಬೇಕು ಎಂದು ಆಶಿಸಿದರು.

ತೆಲುಗು ಚಿತ್ರನಟ ಸುಮನ್‌, ಪ್ರಮುಖರಾದ ದಿವಾಕರ್‌, ಯಜ್ಞೇಶ್ ಬರ್ಕೆ, ಹಲವು ಚಿತ್ರ ನಿರ್ಮಾಪಕರು, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ ಮತ್ತಿತರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಸಚಿನ್‌ ಎಸ್‌. ಉಪ್ಪಿನಂಗಡಿ ಸ್ವಾಗತಿಸಿದರು. ಸುದೇಶ್‌ ಭಂಡಾರಿ ಕಿನ್ನಿಮಜಲುಬೀಡು ವಂದಿಸಿದರು. ಅನುರಾಗ್‌ ಕಾರ್ಯಕ್ರಮ ನಿರೂಪಿಸಿದರು. 

ಆಯ್ದ ಸಿನೆಮಾಗಳ ಪ್ರದರ್ಶನ 
ತುಳು ಚಲನಚಿತ್ರೋತ್ಸವದಲ್ಲಿ ಸಿನೆಮಾಗಳು ಶುಕ್ರವಾರದಿಂದ ಆರಂಭವಾಗಿವೆ. ಒಟ್ಟು 49 ತುಳು ಸಿನೆಮಾಗಳು ಪ್ರದರ್ಶನಗೊಳ್ಳಲಿವೆ. ಇದರಲ್ಲಿ 24 ಹೊಸ ಸಿನೆಮಾಗಳು ಸಿನಿಪೊಲಿಸ್‌ ಹಾಗೂ ಉಳಿದ 25 ಹಳೆಯ ಸಿನೆಮಾಗಳು ಡಾನ್‌ಬಾಸ್ಕೋ ಹಾಲ್‌ನಲ್ಲಿ ಪ್ರದರ್ಶನಗೊಳ್ಳಲಿವೆ. ಈ ಎಲ್ಲ ಸಿನೆಮಾ ಪ್ರದರ್ಶನಗೊಳ್ಳುವ ಮೊದಲು 20 ನಿಮಿಷ ಉದ್ಘಾಟನೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ತುಳುವಿನಲ್ಲಿ 1973ರಲ್ಲಿ ತೆರೆ ಕಂಡ 5ನೇ ಸಿನೆಮಾ ‘ಉಡಲ್ದ ತುಡರ್‌’ನಿಂದ ಆರಂಭವಾಗಿ ಕಳೆದ ನವೆಂಬರ್‌ನಲ್ಲಿ ತೆರೆಕಂಡ ತುಳುವಿನ 85ನೇ ‘ರಂಗ್‌ ರಂಗ್‌ದ ದಿಬ್ಬಣ’ ಸಿನೆಮಾದವರೆಗಿನ ಆಯ್ದ 49 ಸಿನೆಮಾಗಳು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.