ಕ್ಯಾಂಟೀನ್‌ಗೆ ಡಿಜಿಟಲ್‌ ಟಚ್‌


Team Udayavani, Jan 6, 2018, 11:03 AM IST

indra-canteen.jpg

ಬೆಂಗಳೂರು: ನಿತ್ಯ ಲಕ್ಷಾಂತರ ಜನರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್‌ ಸೇವೆಯಲ್ಲಿ ಪಾರದರ್ಶಕತೆ, ಆಹಾರದ ಗುಣಮಟ್ಟ ಹಾಗೂ ಕಾರ್ಯಕ್ಷಮತೆ ಕಾಯ್ದುಕೊಳ್ಳಲು ಕರ್ನಾಟಕ ಲೋಕಾಯುಕ್ತದ ಕಿವಿಮಾತಿಗೆ ಓಗೊಟ್ಟಿರುವ ಬಿಬಿಎಂಪಿ, ಡಿಜಿಟಲ್‌ ಟಿಕ್ಕಲ್‌ ಬೋರ್ಡ್‌, ಆಹಾರದ ನಿಖರ ಅಳತೆಗೆ ಡಿಜಿಟಲ್‌ ತೂಕ ಯಂತ್ರ, ವಿತರಣೆ ಅಕ್ರಮ ತಡೆಗೆ ಪಾಯಿಂಟ್‌ ಆಫ್ ಸೇಲ್‌ ಯಂತ್ರ ಬಳಕೆ, ಆಡಳಿತ ಸುಧಾರಣೆಗಾಗಿ ಪ್ರತ್ಯೇಕ ವಿಭಾಗ ರಚನೆ ಸೇರಿ ಹಲವು ಸುಧಾರಣಾ ಕ್ರಮ ಕೈಗೊಂಡಿದೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಗುಣಮಟ್ಟದಿಂದ ಕೂಡಿಲ್ಲ. ಸರಿಯಾದ ಸಮಯಕ್ಕೆ ಆಹಾರ ವಿತರಣೆಯಾಗುತ್ತಿಲ್ಲ ಹಾಗೂ ಕಡಿಮೆ ಪ್ರಮಾಣದ ಆಹಾರ ವಿತರಿಸಲಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರ ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರು/ ನಿರೀಕ್ಷಕರು/ಉಪನಿರೀಕ್ಷಕರನ್ನು ಒಳಗೊಂಡ 28 ಅಧಿಕಾರಿಗಳ ತಂಡ ನಗರದಲ್ಲಿ 121 ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಈ ವೇಳೆ ಕಂಡು ಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಮತ್ತು ಕೈಗೊಂಡ ಕ್ರಮಗಳ ಕುರಿತ ವರದಿ ನೀಡುವಂತೆ ಪಾಲಿಕೆಗೆ ಸೂಚಿಸಿತ್ತು. ಲೋಕಾಯುಕ್ತರ ಸೂಚನೆಯಂತೆ ಎಲ್ಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳ ಕುರಿತು ಇತ್ತೀಚೆಗೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರು ಆರು ಪುಟಗಳ ವಿಸ್ತೃತ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸಿದ್ದಾರೆ.

ತೂಕದ ಪರೀಕ್ಷೆ: ಪ್ರತಿಯೊಂದು ಇಂದಿರಾ ಕ್ಯಾಂಟೀನ್‌ ಹಾಗೂ ಅಡುಗೆ ಮನೆ ನಿರ್ವಹಣೆ ಒಬ್ಬರು ಆರೋಗ್ಯ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಲಾಗಿದ್ದು, ಇವರು ಕ್ಯಾಂಟೀನ್‌, ಅಡುಗೆ ಮನೆಗಳಲ್ಲಿನ ಸ್ವತ್ಛತೆ, ನೈರ್ಮಲ್ಯ ಹಾಗೂ ಆಹಾರ ವಿತರಣೆಯ ಕುರಿತು ಮೇಲ್ವಿಚಾರಣೆ ನೋಡಿಕೊಳ್ಳುತ್ತಾರೆ.

ಪ್ರತಿಯೊಂದು ಕ್ಯಾಂಟೀನ್‌ ಹಾಗೂ ಅಡುಗೆ ಮನೆಗೆ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗಿದ್ದು, ಅಡುಗೆ ಮನೆಯಿಂದ ಸರಬರಾಜು ಆಗುವ ಮುನ್ನ ಹಾಗೂ ಕ್ಯಾಂಟೀನ್‌ಗಳಿಗೆ ತಲುಪಿದ ನಂತರ ಆಹಾರ ಪ್ರಮಾಣವನ್ನು ತೂಕ ಮಾಡಲಾಗುತ್ತದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. 

ಜತೆಗೆ, ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗಾಗಿಯೇ ಪಾಲಿಕೆಯಿಂದ ಪ್ರತ್ಯೇಕ ವಿಭಾಗ ರಚಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ ಹಾಗೂ ಜೂನಿಯರ್‌ ಕಮಿಷನರ್‌ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಲಾಗಿದೆ. ತಂಡದಲ್ಲಿ ನಿವೃತ್ತ ಸೇನಾಧಿಕಾರಿಗಳೂ ಇರಲಿದ್ದು, ಪ್ರತಿದಿನ ಕ್ಯಾಂಟೀನ್‌ಗಳ ಕಾರ್ಯವೈಖರಿಯ ಬಗ್ಗೆ ವರದಿ ನೀಡುತ್ತಾರೆ ಎಂದಿದ್ದಾರೆ. 

ಕ್ಯಾಂಟೀನ್‌ನಲ್ಲಿ ಕ್ಯಾಮೆರಾ: ಸುರಕ್ಷತೆ ದೃಷ್ಟಿಯಿಂದ ಪ್ರತಿ ಕ್ಯಾಂಟೀನ್‌ ಹಾಗೂ ಅಡುಗೆ ಮನೆಗಳಲ್ಲಿ ಆಹಾರ ತಯಾರಿಸುವ, ತೂಕ ಹಾಕುವ ಹಾಗೂ ಕ್ಯಾಂಟೀನ್‌ಗಳ ಪ್ರವೇಶ ದ್ವಾರದ ಬಳಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಇದರೊಂದಿಗೆ ಗ್ರಾಹಕರಿಗೆ ಆಹಾರ ಪೂರೈಕೆ ಮಾಡುವ ಮೊದಲು ಆಹಾರ ತೂಕ ಮಾಡಲು ಸಣ್ಣ ಗಾತ್ರದ ಡಿಜಿಟಲ್‌ ತೂಕ ಹಾಕುವ ಯಂತ್ರಗಳನ್ನು ಕ್ಯಾಂಟೀನ್‌ಗಳಲ್ಲಿ ಇರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. 

ಟಿಕ್ಕರ್‌ ಬೋರ್ಡ್‌, ಪಿಒಎಸ್‌ ಅಳವಡಿಕೆ: ಕ್ಯಾಂಟೀನ್‌ಗಳೆದುರು ಗ್ರಾಹಕರ ಕಾಯುವಿಕೆ ತಪ್ಪಿಸಲು ಹಾಗೂ ಆಹಾರ ವಿತರಣೆಯಲ್ಲಿ ಅಕ್ರಮ ನಡೆಯದಂತೆ ಕ್ಯಾಂಟೀನ್‌ನಲ್ಲಿ ಲಭ್ಯವಿರುವ ಆಹಾರ ಪ್ರಮಾಣದ (ಪ್ಲೇಟ್‌ಗಳ ಸಂಖ್ಯೆ) ಕುರಿತು ಮಾಹಿತಿ ನೀಡಲು ಡಿಜಿಟಲ್‌ ಟಿಕ್ಕರ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಟೋಕನ್‌ ನೀಡುವ ವ್ಯವಸ್ಥೆ ಸ್ಥಗಿತಗೊಳಿಸಿ ಪಾಯಿಂಟ್‌ ಆಫ್ ಸೇಲ್‌ ಯಂತ್ರಗಳನ್ನು ನೀಡಿರುವುದರಿಂದ ಪ್ರತಿ ಪ್ಲೇಟ್‌ಗೂ ರಸೀದಿ ಬರಲಿದೆ. ಹೀಗಾಗಿ ವಿತರಣೆಯಾದ ಪ್ಲೇಟ್‌ಗಳ ನಿಖರ ಮಾಹಿತಿ ಲಭ್ಯವಾಗುತ್ತದೆ.

ಪಾರದರ್ಶಕತೆಗೆ ಆ್ಯಪ್‌ ಬಳಕೆ: ಅಡುಗೆಮನೆಗಳಿಂದ ಆಹಾರ ಸರಬರಾಜಾಗುವ ಮೊದಲು ಸರಬರಾಜಿಗೆ ಮೊದಲು ಆಹಾರ ತೂಕ ಮಾಡುವ ಹಾಗೂ ಕ್ಯಾಂಟೀನ್‌ಗಳಿಗೆ ತಲುಪಿದ ನಂತರ ಆಹಾರ ತೂಕ ಮಾಡುವ ಫೋಟೋಗಳನ್ನು ತೆಗೆದು  ಆ್ಯಪ್‌ಗೆ ಅಪ್‌ಲೋಡ್‌ ಮಾಡುವ ಹೊಣೆಯನ್ನು ಸಿಬ್ಬಂದಿಗೆ ವಹಿಸಲಾಗಿದೆ. ಇದರೊಂದಿಗೆ ನೋಡಲ್‌ ಅಧಿಕಾರಿಗಳು ಕ್ಯಾಂಟೀನ್‌ಗಳಲ್ಲಿ ವಿತರಣೆಯಾದ ಆಹಾರ ಹಾಗೂ ಉಳಿದಿರುವ ಪ್ಲೇಟ್‌ಗಳ ಕುರಿತು ಆ್ಯಪ್‌ ಮೂಲಕ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವ ವ್ಯವಸ್ಥೆ ಇರುವುದರಿಂದ ಯಾವುದೇ ಕಾರಣಕ್ಕೂ ಅವ್ಯವಹಾರ ನಡೆಯಲು ಸಾಧ್ಯವಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ.

* ವೆಂ. ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.