ಶಾಲೆಗೆ ಹೋಗುವ ಬಾಲೆ ನಡು ರಸ್ತೆಯಲ್ಲಿ ಶವವಾದಳು

Team Udayavani, Jan 7, 2018, 11:25 AM IST

blore-g-1.jpg

ದೇವನಹಳ್ಳಿ: ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿ ಮೃತ ಪಟ್ಟಿರುವ ಘಟನೆ ಕುಂದಾಣ ಹೋಬಳಿಯ ಬೀರಸಂದ್ರ ಗ್ರಾಮದ ಬಳಿ ನಡೆದಿದೆ. ಹರ್ಷಿತಾ (13) ಮೃತಪಟ್ಟ ದುರ್ದೈವಿ. ತಾಲೂಕಿನ ಬೈರದೇನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀನಾರಾಯಣ್‌ ಪುತ್ರಿ ಹರ್ಷಿತಾ 8ನೇ ತರಗತಿಯನ್ನು ದೊಡ್ಡಬಳ್ಳಾಪುರದ ವಿವೇಕಾನಂದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗ್ಗೆ ಶಾಲೆಗೆ ತೆರಳಲು ಬೈರದೇನಹಳ್ಳಿಯಿಂದ ಬೀರಸಂದ್ರ ಗ್ರಾಮಕ್ಕೆ ಬಂದಿದ್ದರು. ರಸ್ತೆ ದಾಟುವ ವೇಳೆಯಲ್ಲಿ ವೇಗವಾಗಿ ಬಂದ ಟಾಟಾ ಸುಮೋವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳ ದಲ್ಲಿಯೇ ಮೃತ ಪಟ್ಟಿದ್ದಾಳೆ.

ರಾಷ್ಟ್ರೀಯ ಹೆದ್ದಾರಿ 207 ಪ್ರಾಧಿಕಾರ ರಸ್ತೆ ಅಗಲೀ ಕರಣ ಮಾಡಿದ್ದರೂ ರಸ್ತೆಗಳಲ್ಲಿ ವೇಗಮಿತಿ ತಡೆಗಳನ್ನು ಹಾಕದೆ ಇರುವುದು ಅಪಘಾತಕ್ಕೆ ಕಾರಣವಾಗಿದೆ. ಇದರಿಂದ ಆಗಾಗ ಅಪಘಾತಗಳು ಆಗುತ್ತಿವೆ. ಎಷ್ಟೋಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ: ಹರ್ಷಿತಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಟಾಟಾ ಸುಮೋ ಚಾಲಕ ಡಿಕ್ಕಿ ಹೊಡೆದಿದ್ದರಿಂದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಜನ ಟಯರ್‌ಗೆ ಬೆಂಕಿ ಹಚ್ಚಿ ಶವ ಮುಂದಿಟ್ಟು ಪ್ರತಿಭಟನೆ ನಡೆಸಿದರು. ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

ವಿದ್ಯಾರ್ಥಿನಿ ಸಾವಿಗೆ ರಸ್ತೆ ತಡೆ ನಡೆಸಿ ಗ್ರಾಮಸ್ಥರ ಪ್ರತಿಭಟನೆ
ದೇವನಹಳ್ಳಿ: ತಾಲೂಕಿನ ಬೀರಸಂದ್ರ ಗೇಟಿನ ಬಳಿ ಟಾಟಾ ಸುಮೋ ಡಿಕ್ಕಿ ಹೊಡೆದು ಬೈರದೇನಹಳ್ಳಿ ಹರ್ಷಿತಾ ಸಾವನ್ನಪ್ಪಿರುವುದರಿಂದ ಆಕ್ರೋಶಗೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಶವವನ್ನು ಇಟ್ಟುಕೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 207ರಲ್ಲಿ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಮುಖ್ಯರಸ್ತೆಯಲ್ಲಿ ನಾಲ್ಕು ಗಂಟೆಗೂ ಹೆಚ್ಚಿನ ಕಾಲ ರಸ್ತೆಯಲ್ಲಿ ವಾಹನಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಇಲ್ಲಿಗೆ ಬರುವತನಕ ಶವವನ್ನು ಎತ್ತಲು ಬಿಡುವುದಿಲ್ಲವೆಂದು ಪಟ್ಟು ಹಿಡಿದು ಪ್ರತಿಭಟನೆಗೊಳಿಸಿದರು. ಸ್ಥಳಕ್ಕೆ ಆಗಮಿಸಿದ ಶಾಸಕ ಪಿಳ್ಳಮುನಿಶಾಮಪ್ಪ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಮನವೊಲಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನಾಕಾರರು ಟಾಟಾ ಸುಮೋ ವಾಹನವನ್ನು ಜಖಂಗೊಳಿಸಿ, ಟಯರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

 ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿ ಅಪಘಾತಕ್ಕೆ ಕಾರಣ: ರಾಷ್ಟ್ರೀಯ ಹೆದ್ದಾರಿ ನಾಲ್ಕರ ರಸ್ತೆ ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಕೋಲಾರ, ಸೂಲಿಬೆಲೆ, ಹೊಸಕೋಟೆ, ಕೆ.ಆರ್‌.ಪುರಂ, ತಮಿಳುನಾಡಿನ ಹೊಸೂರು ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ನಾಲ್ಕು ಪಥದ ರಸ್ತೆಯನ್ನಾಗಿಸಲು 2011ರಲ್ಲಿ ಕೇಂದ್ರ ಸರ್ಕಾರದ ಬಹುಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಯನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಆದರೆ ಒಂದು ಕಡೆ ಸ್ಥಗಿತಗೊಂಡಿರುವ ಕಾಮಗಾರಿ, ಮತ್ತೂಂದು ಕಡೆ ಹಳೆಯ ರಸ್ತೆಯಲ್ಲಿಯೇ ಸಂಚರಿಸುವ ವಾಹನಗಳು, ಬೃಹತ್‌ ಗಾತ್ರದ ಸರಕು ಸಾಗಾಣಿಕೆ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಇದರಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಪ್ರತಿಭಟನೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥ ಭೈರೇಗೌಡ ಮಾತನಾಡಿ, ಚಪ್ಪರದ ಕಲ್ಲು ಸರ್ಕಲ್‌ ನಿಂದ ಬೀರಸಂದ್ರ ಗೇಟಿನವರೆಗೆ ಅಪಘಾತಗಳು ಹೆಚ್ಚು ಸಂಭವಿಸುತ್ತದೆ. ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಇದುವರೆಗೂ ಸುಮಾರು 25ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 10-12 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲಾ ಘಟನೆಗಳು ನಡೆಯುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬದುಕಿದ್ದು ಸತ್ತಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ 207ರ ರಸ್ತೆಯಲ್ಲಿ ಸಂಚಾರ ಮಾಡಲು ಕಷ್ಟಕರವಾಗುತ್ತಿದೆ. ಹೆಚ್ಚಿನ ವಾಹನಗಳ ದಟ್ಟಣೆ ಇರುವುದರಿಂದ ದ್ವಿಚಕ್ರ ವಾಹನ ಸವಾರರು ಹಿಂದೆ ಬರುವ ವಾಹನಗಳನ್ನು ತಪ್ಪಿಸಿ ಹೋಗಬೇಕಾಗುತ್ತದೆ. ಏನಾದರೂ ಆಯಾ ತಪ್ಪಿದರೆ ಯಮನಿಗೆ ಶರಣಾಗುವುದು ಖಚಿತವಾಗುತ್ತದೆ ಎಂದು ಗ್ರಾಮಸ್ಥ ರವಿ ಹೇಳಿದರು.

50 ಸಾವಿರ ರೂ. ವೈಯಕ್ತಿಕ ನೆರವು ನೀಡಿದ ಶಾಸಕ: ಸ್ಥಳಕ್ಕೆ ಆಗಮಿಸಿದ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯದಿಂದ ಅಮಾಯಕ ಪ್ರಾಣಗಳು ಬಲಿಯಾಗುತ್ತಿವೆ. ವಿದ್ಯಾರ್ಥಿನಿ ಸಾವಿನಿಂದ ಇಡೀ ತಾಲೂಕು ಸೂತಕದ ಛಾಯೆ ಉಂಟಾಗಿದೆ.

ವೈಯಕ್ತಿಕವಾಗಿ 50 ಸಾವಿರ ರೂ.ಗಳನ್ನು ಅವರ ಕುಟುಂಬಕ್ಕೆ ನೀಡುತ್ತಿದ್ದೇನೆ. ಕೂಡಲೇ ಸರ್ಕಾರದಿಂದ ಪರಿಹಾರ ಕೊಡಿಸಲು ಒತ್ತಾಯಿಸುತ್ತೇನೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌ ಜೊತೆ ಚರ್ಚಿಸಿ ಸರ್ಕಾರದಿಂದ ಜರೂರಾಗಿ ಪರಿಹಾರ ನೀಡುವಂತೆ ಮನವಿ ಮಾಡುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ತಿಳಿಸುತ್ತೇನೆ. ಈಗಾಗಲೇ ಅಧಿಕಾರಿಗಳ ಸಭೆ ಕರೆದು ಆ ರಸ್ತೆಯಲ್ಲಿ ಆಗಬೇಕಾಗಿರುವ ಕಾಮಗಾರಿ ಕೆಲಸಗಳು ತ್ವರಿತವಾಗಿ ಆಗುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಜೆಡಿಎಸ್‌ ಮುಖಂಡ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಬಹಳ ಜಾಗರೂಕತೆಯಿಂದ ರಸ್ತೆ ದಾಟಬೇಕು. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸಿ ಅಪಘಾತಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಬೆಂಗಳೂರು ಗ್ರಾಮಾಂತರ ಎಸ್‌ಪಿ ಅಮಿತ್‌ ಸಿಂಗ್‌, ಡಿವೈಎಸ್‌ಪಿ
ನಾಗರಾಜ್‌, ಉಪವಿಭಾಗದ ಅಧಿಕಾರಿ ಮಹೇಶ್‌ ಬಾಬು, ತಹಶೀಲ್ದಾರ್‌ ಎಂ.ರಾಜಣ್ಣ, ಮತ್ತಿತರರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.