ಮೂಲವಿಜ್ಞಾನಕ್ಕೆ ಒತ್ತು ನೀಡಿ: ವಿಜ್ಞಾನಿ ಸರ್ಜ್‌ ಹೊರಾಕ

Team Udayavani, Jan 7, 2018, 4:10 PM IST

0601mlr33-shayadri.jpg

ಮಂಗಳೂರು: ಎಲ್ಲ ಆವಿಷ್ಕಾರಗಳಿಗೂ ಮೂಲವಿಜ್ಞಾನವೇ ಬುನಾದಿಯಾಗಿದ್ದು, ಅದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಾದ ಆವಶ್ಯಕತೆ ಇದೆ ಎಂದು ಭೌತವಿಜ್ಞಾನಿ ಸರ್ಜ್‌ ಹೊರಾಕೆ ಹೇಳಿದರು. ಸಹ್ಯಾದ್ರಿ ಕಾಲೇಜ್‌ ಆಫ್ ಎಂಜಿನಿ ಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಶನಿವಾರ ಆರಂಭಗೊಂಡ ವಿಜ್ಞಾನ ವಿಷಯದಲ್ಲಿ “ಸಹ್ಯಾದ್ರಿ ಸಮ್ಮೇಳನ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರಸ್ತುತ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಮೂಲವಿಜ್ಞಾನದತ್ತ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಅನೇಕ ಪ್ರತಿಭೆಗಳು ವಿಜ್ಞಾನದಿಂದ ವಿಮುಖವಾಗುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ, ರಾಜ ಕಾರಣಿಗಳು ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಹಿಂದೆ ವಿಜ್ಞಾನಿಗಳು ಮಾಡಿದ ಸಂಶೋಧನೆಯ ಬಗ್ಗೆ ಹೆಚ್ಚು ತಿಳಿದುಕೊಳ್ಳುವುದಕ್ಕಿಂತ ಹೊಸತಾಗಿ ಏನಾದರೂ ಸಾಧಿಸುವ ಹಂಬಲ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು. ವಿಜ್ಞಾನವನ್ನು ಕೇವಲ ವೃತ್ತಿಯಾಗಿ ನೋಡಬಾರದು. ಅದೊಂದು ಆಸಕ್ತಿಯ ವಿಷಯ ಆಗಬೇಕು ಎಂದರು.

ರಸಾಯನಶಾಸ್ತ್ರ ವಿಜ್ಞಾನಿ ಅಡಾ ಈ ಎನೋಥ್‌ ಮಾತನಾಡಿ, ಭಾರತೀಯ ವಿಜ್ಞಾನಿಗಳಲ್ಲಿ ಅಪಾರ ಜ್ಞಾನವಿದೆ. ಅವರಲ್ಲಿ ಇರುವ ಸೌಜನ್ಯ, ಧೈರ್ಯ ಎಲ್ಲರಿಗೂ ಮಾದರಿ. ಜೀವಕೋಶಗಳ ಸಂಶೋಧನಾ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನಿ ಜಿ.ಎನ್‌. ರಾಮಚಂದ್ರನ್‌ ಅವರ ಕೊಡುಗೆ ಅಪಾರವಾದುದು. ನನ್ನ ಪಿಎಚ್‌ಡಿ ಅಧ್ಯಯನಕ್ಕೆ ರಾಮಚಂದ್ರನ್‌ ಅವರ ಸಂಶೋಧನಾ ವರದಿ ಸಹಕಾರಿಯಾಯಿತು ಎಂದು ತಿಳಿಸಿದರು.

ಅಭೂತಪೂರ್ವ ಪ್ರಗತಿ: ರಾಯರೆಡ್ಡಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ಭಾರತ ಕಳೆದ ಐದು ದಶಕದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಭೂತ ಪೂರ್ವ ಪ್ರಗತಿ ಸಾಧಿಸಿದೆ. ರಾಜ್ಯ ಸರಕಾರವೂ ವಿಶೇಷ ಯೋಜನೆಗಳನ್ನು ರೂಪಿಸಿ ವಿದ್ಯಾರ್ಥಿ ಗಳು ವಿಜ್ಞಾನದ ಕಡೆಗೆ ಹೆಚ್ಚಿನ ಒಲವು ತೋರಿಸುವಂತೆ ಉತ್ತೇಜನ ನೀಡುತ್ತಿದೆ. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯು ವಿಜ್ಞಾನ ಸಮ್ಮೇಳನ ಆಯೋಜಿಸುವ ಮೂಲಕ ವಿಜ್ಞಾನ, ತಂತ್ರಜ್ಞಾನ, ವ್ಯವಹಾರಡಳಿತ ವಿಷಯಗಳ ಕಡೆಗೆ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸಿ, ಸಂಶೋಧನೆಯ ಕಡೆಗೆ ಪ್ರೇರೇಪಣೆ ಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಜಿತಕಾಮಾನಂದ ಸ್ವಾಮೀಜಿ ಸಮ್ಮೇಳನ ಉದ್ಘಾಟಿಸಿದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮಂಜುನಾಥ ಭಂಡಾರಿ ಸಮ್ಮೇಳನದ ಉದ್ದೇಶ ವನ್ನು ವಿವರಿಸಿದರು.  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್‌.ಸೀತಾರಾಮ್‌, ಸಹ್ಯಾದ್ರಿ ಕಾಲೇಜಿನ ನಿರ್ದೇಶಕ ಡಾ| ಡಿ.ಎಲ್‌. ಪ್ರಭಾಕರ ಅಧ್ಯಕ್ಷತೆ ವಹಿಸಿದ್ದರು. ಅಲಹಾಬಾದ್‌ ಐಐಐಟಿ ನಿವೃತ್ತ ನಿರ್ದೇಶಕ ಡಾ| ಎಂ.ಡಿ. ತಿವಾರಿ, ಉದ್ಯಮಿ ಶಶಿಕಿರಣ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ| ಉಮೇಶ್‌ ಎಂ. ಭೂಷಿ ಸ್ವಾಗತಿಸಿದರು. ಸಮ್ಮೇಳನದ ಸಂಯೋಜಕ ಡಾ| ಸಿ.ಕೆ.ಮಂಜುನಾಥ್‌ ಪ್ರಸ್ತಾವನೆಗೈದರು. ಸಹ್ಯಾದ್ರಿ ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕಿ ಡಾ| ವಿಶಾಲ್‌ ಸಮರ್ಥ ವಂದಿಸಿದರು.  ಜ.10ರ ತನಕ ನಡೆಯುವ ಕಾರ್ಯಕ್ರಮದಲ್ಲಿ ನೊಬೆಲ್‌ ಪುರಸ್ಕೃತರು, ವಿಜಾnನಿಗಳು, ತಾಂತ್ರಿಕ ಪರಿಣಿತರು ಹಾಗೂ ಉದ್ಯಮಿಗಳು ಜತೆ ಚರ್ಚಾಗೋಷ್ಠಿ ನಡೆಯಲಿದೆ.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.