ಚುನಾವಣೆ ಬಂದಾಗ ಸಿಎಂಗೆ ಹಿಂದುತ್ವ ನೆನಪು
Team Udayavani, Jan 8, 2018, 6:30 AM IST
ಹುಬ್ಬಳ್ಳಿ: ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾವೂ ಒಬ್ಬ ಹಿಂದೂ ಎಂದು ಹೇಳಿಕೊಳ್ಳುವ ಅನಿವಾರ್ಯತೆ ಎದುರಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಲ್ಕೂವರೆ ವರ್ಷಗಳಿಂದ ಮುಸಲ್ಮಾನರ ತುಷ್ಟೀಕರಣ ಮಾಡಿದ ಸಿದ್ದರಾಮಯ್ಯಗೆ ಈಗ ತಾವೊಬ್ಬ ಹಿಂದೂ ಎನ್ನುವುದು ನೆನಪಾಗಿದೆ.
ಹಿಂದೂಗಳ ಮತಗಳಿಗಾಗಿ ಅವರು ತಾವೂ ಹಿಂದೂ ಎಂದು ಹೇಳಿಕೊಳ್ಳುವಂಥ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ದಕ್ಷಿಣ ಕನ್ನಡದಲ್ಲಿ 21 ಜನರ ಕೊಲೆಗಳು ನಡೆದಿವೆ. ಅವುಗಳಲ್ಲಿ 12 ಜನರು ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು. ಸಿದ್ದರಾಮಯ್ಯ ಮುಸಲ್ಮಾನರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಮನಸ್ಸಿದ್ದರೆ ಕೂಡಲೇ ಮುಖ್ಯಮಂತ್ರಿ ಕೋಮು ಗಲಭೆ ಮಾಡುವಲ್ಲಿ ನಿರತವಾಗಿರುವ ಇಂಥ ಸಂಘಟನೆಗಳನ್ನು ನಿಷೇಧಿಸು ವಂತೆ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.