ಹಂತಕರ ಪತ್ತೆಗೆ ಆಗ್ರಹಿಸಿ ಸುಪ್ರೀಂ ಮೆಟ್ಟಿಲೇರಿದ ಕಲಬುರ್ಗಿ ಕುಟುಂಬ
Team Udayavani, Jan 8, 2018, 6:30 AM IST
ಧಾರವಾಡ: ಚಿಂತಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ ಮಾಡಿರುವ ಹಂತಕರ ಪತ್ತೆ ಕಾರ್ಯ ಇನ್ನಷ್ಟು
ಚುರುಕುಗೊಳಿಸಲು ಆಗ್ರಹಿಸಿ ಕಲಬುರ್ಗಿ ಕುಟುಂಬ ಸದಸ್ಯರು ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
2017, ಡಿ.16ರಂದೇ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಪಿಟಿಷನ್ ಹಾಕಿದ್ದು, ಜ.10ರಂದು ಈ ಪ್ರಕರಣದ ವಿಚಾರಣೆ
ನಡೆಯಲಿದೆ. ಮಹಾರಾಷ್ಟ್ರದ ವಕೀಲ ಅಭಯ ನೇವಗಿ ಕಲಬುರ್ಗಿ ಕುಟುಂಬದ ಪರ ವಾದ ಮಂಡಿಸಲಿದ್ದಾರೆ.
ಈ ಕುರಿತು “ಉದಯವಾಣಿ’ಯೊಂದಿಗೆ ಡಾ.ಕಲಬುರ್ಗಿ ಅವರ ಪುತ್ರ ಶ್ರೀವಿಜಯ ಕಲಬುರ್ಗಿ ಮಾತನಾಡಿ, ನಮ್ಮ ತಂದೆ ಹತ್ಯೆಯಾಗಿ ವರ್ಷಗಳೇ ಕಳೆದರೂ ತನಿಖೆ ಶೀಘ್ರವಾಗಿ ನಡೆಯುತ್ತಿಲ್ಲ. ಇದು ಹೀಗೆ ವಿಳಂಬವಾದರೆ ಸಾಕ್ಷéಗಳು
ನಾಶವಾಗುತ್ತವೆ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಅದರರ್ಥ ಕರ್ನಾಟಕ ಸರ್ಕಾರ ಏನೂ ಕೆಲಸ ಮಾಡುತ್ತಿಲ್ಲ ಎಂದಲ್ಲ. ಆದರೆ, ಅವರು ಮಾಡುತ್ತಿರುವ ಪ್ರಯತ್ನ ಇನ್ನಷ್ಟು ಹೆಚ್ಚಬೇಕು. ಶೀಘ್ರವೇ ಹಂತಕರನ್ನು ಬಂಧಿಸಬೇಕು ಎನ್ನುವ ಆಗ್ರಹ ನಮ್ಮದು. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಕೋರಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.