ಸ್ವಾಮೀಜಿ ಜತೆ ಯೋಗಿ ಮಾತುಕತೆ
Team Udayavani, Jan 8, 2018, 12:40 PM IST
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ನಿಮಿತ್ತ ಶನಿವಾರ ರಾತ್ರಿ ನಗರಕ್ಕೆ ಆಗಮಿಸಿದ್ದ ಯೋಗಿ ಆದಿತ್ಯನಾಥ ಅವರು ಕುಂಬಳಗೋಡಿನ ಆದಿಚುಂಚನಗಿರಿಯ ಶಾಖಾ ಮಠದ ಕಾಲೇಜು ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು.
ಭಾನುವಾರ ಬೆಳಗ್ಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಾಥಪಂಥ ಸೇರಿ ವಿವಿಧ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು. ಈ ವೇಳೆ ಬಿಜೆಪಿ ನಾಯಕರು ಇರಲಿಲ್ಲ.
ಪರಿವರ್ತನಾ ಸಮಾವೇಶಕ್ಕೂ ಪೂರ್ವದಲ್ಲಿ ಇಬ್ಬರು ಯತಿಗಳು ಅಲ್ಲಿಯೇ ಪೂಜೆ ಸಲ್ಲಿಸಿದರು. ನಂತರ ಯೋಗಿ ಆದಿತ್ಯನಾಥ್ ಅವರು ಅಲ್ಲಿಂದ ನೇರವಾಗಿ ಸಮಾವೇಶದ ಸ್ಥಳಕ್ಕೆ ಆಗಮಿಸಿದರು. ಸಮಾವೇಶ ಮುಗಿಸಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಊಟ ಮುಗಿಸಿದರು. ಈ ವೇಳೆ ಬಿಜೆಪಿ ಮುಖಂಡ ಆರ್.ಅಶೋಕ್ ಮತ್ತು ಕೆಲ ನಾಯಕರು ಜತೆಗಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.