ಸಿನೆಮಾ ಮಂದಿರದಲ್ಲಿ ರಾಷ್ಟ್ರಗೀತೆ ಕಡ್ಡಾಯ ಬೇಡ


Team Udayavani, Jan 9, 2018, 6:10 AM IST

antham.jpg

ಹೊಸದಿಲ್ಲಿ: ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವ ವಿಚಾರದಲ್ಲಿ “ಯುಟರ್ನ್’ ತೆಗೆದುಕೊಂಡಿರುವ ಕೇಂದ್ರ ಸರಕಾರ, ಕಡ್ಡಾಯ ಆದೇಶವನ್ನು ವಾಪಸ್‌ ಪಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. 

2016ರ ನ. 30ರಂದು ಸುಪ್ರೀಂ ಕೋರ್ಟ್‌ ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಅನಂತರದಲ್ಲಿ ಕೇಂದ್ರ ಸರಕಾರ ಕೂಡ ಸುಪ್ರೀಂ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಿ, ವೈವಿಧ್ಯತೆಯುಳ್ಳ ಭಾರತದಂಥ ದೇಶದಲ್ಲಿ ರಾಷ್ಟ್ರಗೀತೆ ಜನರನ್ನು ಒಂದುಗೂಡಿಸುತ್ತದೆ ಎಂದಿತ್ತು. 

ಆದರೆ, ಈಗ ತನ್ನ ವರಸೆ ಬದಲಿಸಿರುವ ಅದು, ಆರು ತಿಂಗಳ ಮಟ್ಟಿಗೆ ಹಿಂದಿನ ಆದೇಶ ವಾಪಸ್‌ ಪಡೆಯಿರಿ ಎಂದು ಸುಪ್ರೀಂ ಕೋರ್ಟ್‌ಗೆ 4 ಪುಟಗಳ ಅಫಿದವಿತ್‌ ಸಲ್ಲಿಕೆ ಮಾಡಿದೆ. ಜತೆಯಲ್ಲೇ ಅಂತರ ಸಚಿವಾಲಯದ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದ್ದು, ಇದು 6 ತಿಂಗಳಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಒಳಗೊಂಡ ವರದಿ ನೀಡಲಿದೆ. ಈ ವರದಿ ಅನ್ವಯ ಮುಂದಿನ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದೆ. 

ಈ ಸಮಿತಿಯ ಶಿಫಾರಸಿನಂತೆ ಸರಕಾರವು ಅಗತ್ಯ ಅಧಿಸೂಚನೆ, ಸೂಚನೆ ಅಥವಾ ನಿಯಮಾವಳಿಗಳನ್ನು ರಚಿಸಲಿದ್ದು, ಇದಕ್ಕೆ ಆರು ತಿಂಗಳ ಕಾಲಾವಧಿ ನೀಡಿದ್ದೇವೆ ಎಂದು ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿರುವ ಈ ಅಫಿದವಿತ್‌ನಲ್ಲಿ ದಾಖಲಿಸಲಾಗಿದೆ. 

ಕೇಂದ್ರಕ್ಕೆ ತರಾಟೆ: ಕಳೆದ ಅ. 23ರಂದು ಈ ಸಂಬಂಧ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ದೇಶಭಕ್ತಿ ವಿಚಾರದಲ್ಲಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತ್ತು. ಪ್ರತಿಯೊಬ್ಬರು ತಮ್ಮ ಭುಜದ ಮೇಲೆ ದೇಶಭಕ್ತಿಯ ಸಂಕೇತವನ್ನು ಹೊಂದಿರಬೇಕು. ಈ ಮೂಲಕ ದೇಶಭಕ್ತಿ ಪ್ರದರ್ಶಿಸಬೇಕು ಎಂದು ಹೇಳುವುದು ಸರಿಯಲ್ಲ. ಅಲ್ಲದೆ ಈ ವಿಚಾರದಲ್ಲಿ ಜನರ ದೇಶಭಕ್ತಿ ಪರೀಕ್ಷಿಸುವುದೂ ಸರಿಯಲ್ಲ. ಇಂಥ ನಿರ್ಧಾರಗಳು ಕೋರ್ಟ್‌ ಕಡೆಯಿಂದಲೇ ಬರಬೇಕು ಎಂದು ಏಕೆ ಬಯಸುತ್ತೀರಿ ಎಂದು ಹೇಳುವ ಮೂಲಕ ಹಿಂದಿನ ಆದೇಶ ವಾಪಸ್‌ ತೆಗೆದುಕೊಳ್ಳುವ ಬಗ್ಗೆ ಸುಳಿವು ನೀಡಿತ್ತು. ಆಗ ಕೇಂದ್ರದ ಪರ ಹಾಜರಾಗಿದ್ದ ಅಟಾರ್ನಿ ಜನರಲ್‌ ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ಸರಿ ಎಂದೇ ವಾದ ಮಾಡಿ, ಇದು ಏಕತೆ ಸಾರುತ್ತದೆ ಎಂದಿದ್ದರು. 

ಟಾಪ್ ನ್ಯೂಸ್

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.