ಪರಿಷ್ಕೃತ ಜೇಷ್ಠತಾ ಪಟ್ಟಿ,ಪ್ರಮಾಣಪತ್ರ ಸಲ್ಲಿಸಲು ಸರ್ಕಾರ ಸಿದ್ಧತೆ
Team Udayavani, Jan 9, 2018, 6:25 AM IST
ಬೆಂಗಳೂರು:ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಜ.15 ರಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಜೇಷ್ಠತಾ ಪಟ್ಟಿಯೊಂದಿಗೆ ಪ್ರಮಾಣಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ.
ಬಡ್ತಿ ಮೀಸಲಾತಿ ಪಡೆದಿರುವವರ ಹಿತಾಸಕ್ತಿ ಕಾಪಾಡುವ ಉದ್ದೇಶದ ವಿಧೇಯಕ ರಾಷ್ಟ್ರಪತಿ ಅಂಗಳದಲ್ಲಿದ್ದು, ಜ.15 ರೊಳಗೆ ಅಲ್ಲಿಂದ ಸಂದೇಶ ಬಾರದಿದ್ದರೆ ಪರಿಷ್ಕೃತ ಜೇಷ್ಠತಾ ಪಟ್ಟಿಯೊಂದಿಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಎಲ್ಲ ಇಲಾಖೆಗಳ ಜೇಷ್ಠತಾ ಪಟ್ಟಿ ಸಿದ್ಧವಾಗಿದ್ದು, ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಬಳಿ ಇದ್ದು, ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸುವ ಸಂಬಂಧ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.
ಇಲಾಖಾವಾರು ಪರಿಷ್ಕೃತ ಜೇಷ್ಠತಾ ಪಟ್ಟಿ ಸಿದ್ಧಗೊಂಡು ವೈಬ್‌ಸೈಟ್‌ನಲ್ಲೂ ಕೆಲವು ಇಲಾಖೆಗಳು ಪ್ರಕಟಿಸಿವೆ. ಆದರೆ, ಅದರಲ್ಲಿ ಯಾರಿಗೆ ಮುಂಬಡ್ತಿ, ಯಾರಿಗೆ ಹಿಂಬಡ್ತಿ ಎಂಬುದರ ಸ್ಪಷ್ಟತೆ ಇಲ್ಲ. 1978 ರಿಂದ ಜೇಷ್ಠತಾ ಪಟ್ಟಿ ಸಿದ್ಧವಾಗಿದ್ದು ಕೆಲವರು ನಿವೃತ್ತಿಯಾಗಿದ್ದಾರೆ.
ರಾಜ್ಯ ಸರ್ಕಾರ, ನ್ಯಾಯಾಲಯದ ತೂಗುಕತ್ತಿಯಿಂದ ಪಾರಾಗಲು ಪರಿಷ್ಕೃತ ಜೇಷ್ಠತಾ ಪಟ್ಟಿ ಜತೆ ಪ್ರಮಾಣ ಪತ್ರ ಸಲ್ಲಿಸಲಿದೆ. ಆ ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.
ಮತ್ತೂಂದೆಡೆ ವಿಧೇಯಕ ಸಂಬಂಧ ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್ ಝಾ ಅವರು ದೆಹಲಿಗೆ ಹೋಗಿ ವಿವರಣೆ ನೀಡಿ ಬಂದಿದ್ದಾರೆ.
ಈಮಧ್ಯೆ, ಸುಪ್ರೀಂಕೋರ್ಟ್‌ನಲ್ಲಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕದಿಂದಲೇ 25 ಕ್ಕೂ ಹೆಚ್ಚು ಮೇಲ್ಮನವಿಗಳು ಸಲ್ಲಿಕೆಯಾಗಿದ್ದು, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಬಡ್ತಿ ಮೀಸಲಾತಿ ಸಂಬಂಧದ ಪ್ರಕರಣಗಳನ್ನೂ ಸುಪ್ರೀಂಕೋರ್ಟ್‌ನಲ್ಲಿ ಒಂದೇ ಪೀಠಕ್ಕೆ ವರ್ಗಾಯಿಸಲಾಗಿದೆ.
ಕರ್ನಾಟಕದ ಪ್ರಕರಣದಲ್ಲಿ ವಿಧೇಯಕ ರಾಷ್ಟ್ರಪತಿಯವರ ಅಂಗೀಕಾರಕ್ಕೆ ಹೋಗಿದೆ. ಹೀಗಿರುವಾಗ ನ್ಯಾಯಾಲಯ ದಿಢೀರ್ ತೀರ್ಮಾನ ಕೈಗೊಳ್ಳುವುದಿಲ್ಲ. ವಿಷಯ ರಾಷ್ಟ್ರಪತಿಯವರ ಮುಂದೆ ಇರುವುದರಿಂದ ಬಹುತೇಕ ನ್ಯಾಯಾಲಯವು ಕರ್ನಾಟಕದ ವಿಚಾರದಲ್ಲಿ ತಕ್ಷಣಕ್ಕೆ ಮಧ್ಯಪ್ರವೇಶ ಮಾಡುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.